AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಶ್ರದ್ಧಾಳಂತೆ ಮತ್ತೊಂದು ಬರ್ಬರ ಹತ್ಯೆ, ಮಗನ ಜತೆ ಸೇರಿ ಪತಿಯನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್​ನಲ್ಲಿಟ್ಟ ಪತ್ನಿ

ಶ್ರದ್ಧಾ ವಾಕರ್ ಹತ್ಯೆ ಪ್ರಕಣದಂತೆ ದೆಹಲಿಯಲ್ಲಿ ಮತ್ತೊಂದು ಹತ್ಯೆ ಪ್ರಕರಣ ಬೆಳಿಕಿಗೆ ಬಂದಿದೆ. ಮಗ ಮತ್ತು ತಾಯಿ ಜತೆ ಸೇರಿ ತಂದೆಯನ್ನು ಕೊಂದು ಶವವನ್ನು ಕತ್ತರಿಸಿ ಫ್ರಿಡ್ಜ್​ನಲ್ಲಿಟ್ಟಿದ್ದಾರೆ. ಇಬ್ಬರೂ ಬೇರೆ ಬೇರೆ ದಿನಗಳಲ್ಲಿ ಬಂದು ಮಧ್ಯರಾತ್ರಿಯಲ್ಲಿ ಮೃತದೇಹದ ಭಾಗಗಳನ್ನು ಚಾಂದ್ ಚಿತ್ರಮಂದಿರದ ಮುಂಭಾಗದ ಮೈದಾನದಲ್ಲಿ ಎಸೆದಿದ್ದರು.

Crime News: ಶ್ರದ್ಧಾಳಂತೆ ಮತ್ತೊಂದು ಬರ್ಬರ ಹತ್ಯೆ, ಮಗನ ಜತೆ ಸೇರಿ ಪತಿಯನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್​ನಲ್ಲಿಟ್ಟ ಪತ್ನಿ
Crime News
TV9 Web
| Edited By: |

Updated on:Nov 28, 2022 | 1:09 PM

Share

ದೆಹಲಿ: ಶ್ರದ್ಧಾ ವಾಕರ್ (Shraddha Walker) ಹತ್ಯೆ ಪ್ರಕರಣ ನಡುವೆ ದೆಹಲಿಯಲ್ಲಿ ಅತಂಹದೇ ಮತ್ತೊಂದು ಪ್ರಕರಣ ಬಹಿರಂಗವಾಗಿದೆ, ಇದೀಗ ಈ ಪ್ರಕರಣ ಮತ್ತೊಮ್ಮೆ ದೆಹಲಿಯನ್ನು ಬೆಚ್ಚಿಬೀಳಿಸಿದೆ, ಪೊಲೀಸರು ಶ್ರದ್ಧಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾರೆ. ಇದೀಗ ಅವರು ಮತ್ತೊಂದು ಇಂತಹದೇ ಕೊಲೆ ಪ್ರಕರಣವನ್ನು ಪತ್ತೆ ಮಾಡಿದ್ದಾರೆ. ಪೂರ್ವ ದೆಹಲಿಯಲ್ಲಿ ಒಬ್ಬ ವ್ಯಕ್ತಿಯ ಕತ್ತರಿಸಿದ ದೇಹದ ಭಾಗಗಳನ್ನು ಅವರು ಪತ್ತೆ ಹಚ್ಚಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೈಂ ಬ್ರಾಂಚ್ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ದೆಹಲಿಯ ಪಾಂಡವನಗರದ ಮಹಿಳೆ ಮತ್ತು ಆಕೆಯ ಮಗನನ್ನು ಅಪರಾಧ ವಿಭಾಗ ಬಂಧಿಸಿದೆ. ತಾಯಿ ಮತ್ತು ಮಗ ಜತೆ ಸೇರಿ ಪತಿಯನ್ನು ಕೊಂದು ಶವವನ್ನು ಕತ್ತರಿಸಿ ಫ್ರಿಡ್ಜ್​ನಲ್ಲಿಟ್ಟಿದ್ದಾರೆ. ಇಬ್ಬರೂ ಬೇರೆ ಬೇರೆ ದಿನಗಳಲ್ಲಿ ಬಂದು ಮಧ್ಯರಾತ್ರಿಯಲ್ಲಿ ಮೃತದೇಹದ ಭಾಗಗಳನ್ನು ಚಾಂದ್ ಚಿತ್ರಮಂದಿರದ ಮುಂಭಾಗದ ಮೈದಾನದಲ್ಲಿ ಎಸೆದಿದ್ದರು.

ಇದನ್ನು ಓದಿ: ದೆಹಲಿಯನ್ನು ಬೆಚ್ಚಿ ಬೀಳಿಸಿದ ಶ್ರದ್ಧಾ ಕೊಲೆ ಪ್ರಕರಣ; ಆ ನಿಗೂಢ ರಾತ್ರಿ ನಡೆದಿದ್ದೇನು? 

ತಂದೆಗೆ ಬೇರೊಬ್ಬ ಮಹಿಳೆಯೊಂದಿಗೆ ಸಂಬಂಧವಿತ್ತು ಎಂದು ತನಿಖೆಯ ವರದಿ ತಿಳಿಸಿದೆ. ಅದಕ್ಕಾಗಿಯೇ ಮಗ ತಾಯಿಯೊಂದಿಗೆ ಸೇರಿ ಈ ಕೃತ್ಯವನ್ನು ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯ ಹೆಸರು ಪೂನಂ ಮತ್ತು ಮಗನ ಹೆಸರು ದೀಪಕ್ ಹಾಗೂ ಮೃತರ ಹೆಸರು ಅಂಜನ್ ದಾಸ್ ಎಂದು ಹೇಳಲಾಗಿದೆ. ತಾಯಿ ಮತ್ತು ಮಗ ಇಬ್ಬರೂ ಮೃತ ಅಂಜನ್ ದಾಸ್‌ಗೆ ಮೊದಲು ಅಮಲು ಮಾತ್ರೆಗಳನ್ನು ತಿನ್ನಿಸಿ, ನಂತರ ಕೊಂದಿದ್ದಾರೆ. ಕೊಂದ ನಂತರ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮಾಡಿ ಫ್ರಿಡ್ಜ್ ನಲ್ಲಿಟ್ಟಿದ್ದರು. ಯಾರಿಗೂ ಅನುಮಾನ ಬರದಂತೆ ಬೇರೆ ಬೇರೆ ದಿನಗಳಲ್ಲಿ, ಮಧ್ಯರಾತ್ರಿಯಲ್ಲಿ, ಮೃತ ದೇಹಗಳ ತುಂಡುಗಳನ್ನು ಚಾಂದ್ ಚಿತ್ರಮಂದಿರದ ಮುಂಭಾಗದ ಮೈದಾನದಲ್ಲಿ ಎಸೆದಿದ್ದರು. ದೆಹಲಿ ಪೊಲೀಸರು ಸದ್ಯ ಆರೋಪಿಗಳಾದ ಪೂನಂ ಮತ್ತು ದೀಪಕ್ ಇಬ್ಬರನ್ನೂ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಕ್ರೈ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:35 pm, Mon, 28 November 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು