Crime News: ಶಾಲೆಗೆ ಹೋಗುತ್ತಿದ್ದ ಇಬ್ಬರು ಬಾಲಕಿಯರನ್ನು ಅಪಹರಿಸಿ ಅತ್ಯಾಚಾರ ಎಸಗಿ, ಕೊಲೆ ಮಾಡಿದ ಆರೋಪಿಗಳ ಬಂಧನ

ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಮಾಡಿರುವ ಘಟನೆ ಅಸ್ಸಾಂನ ಹೈಲ್ಕಂಡಿ ಜಿಲ್ಲೆಯಲ್ಲಿ ನಡೆದಿದ್ದು, ಅದರಲ್ಲಿ ಒಬ್ಬ ಬಾಲಕಿಗೆ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

Crime News: ಶಾಲೆಗೆ ಹೋಗುತ್ತಿದ್ದ ಇಬ್ಬರು ಬಾಲಕಿಯರನ್ನು ಅಪಹರಿಸಿ ಅತ್ಯಾಚಾರ ಎಸಗಿ, ಕೊಲೆ ಮಾಡಿದ ಆರೋಪಿಗಳ ಬಂಧನ
ಸಾಂದರ್ಭಿಕ ಚಿತ್ರ

Updated on: Jul 06, 2023 | 3:50 PM

ಹೈಲಕಂಡಿ: ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಮಾಡಿರುವ ಘಟನೆ ಅಸ್ಸಾಂನ ಹೈಲ್ಕಂಡಿ ಜಿಲ್ಲೆಯಲ್ಲಿ ನಡೆದಿದ್ದು, ಅದರಲ್ಲಿ ಒಬ್ಬ ಬಾಲಕಿಗೆ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾಳೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಇಂದು (ಜುಲೈ 6) ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಬಾರ್ನಿ ಬ್ರೀಸ್ ಟೀ ಎಸ್ಟೇಟ್ ನಿವಾಸಿಗಳಾದ ಇಬ್ಬರು ಬಾಲಕಿಯರು ಶಾಲೆಗೆ ಹೋಗುತ್ತಿದ್ದ ವೇಳೆ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ. ಅವರನ್ನು ಜಿಲ್ಲೆಯ ಮೋಹನ್‌ಪುರ ಪ್ರದೇಶದ ದಟ್ಟ ಅರಣ್ಯಕ್ಕೆ ಕರೆದೊಯ್ದು ಅತ್ಯಾಚಾರ ಎಸಗಲಾಗಿದೆ ಎಂದು ಅಳಗಾಪುರ ಪೊಲೀಸ್ ಠಾಣೆಯ ಪ್ರಭಾರಿ ಅಧಿಕಾರಿ ಮೃಣಾಲ್ ದಾಸ್ ತಿಳಿಸಿದ್ದಾರೆ.

ಬಾಲಕಿಯರೊಬ್ಬರ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದು, ಇಬ್ಬರು ಬಾಲಕಿಯರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಕಾರ್ಯಚರಣೆ ನಡೆಸಿದ ಪೊಲೀಸರು, ಇಬ್ಬರು ವ್ಯಕ್ತಿಗಳನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ.

ಇದನ್ನೂ ಓದಿ: Delhi Crime News: 55 ವರ್ಷದ ಮಹಿಳೆಯನ್ನು ಗುಂಡಿಕ್ಕಿ ಕೊಂದ ಮಗಳ ಮಾಜಿ ಪ್ರಿಯಕರ

ಇಬ್ಬರು ಬಾಲಕಿಯರನ್ನು ಸಿಲ್ಚಾರ್ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅದರಲ್ಲಿ ಒಬ್ಬ ಬಾಲಕಿ ಬುಧವಾರದಂದು ಸಾವನ್ನಪ್ಪಿದ್ದಾಳೆ ಎಂದು ಪೊಲೀಸ್​​ ಅಧಿಕಾರಿಗಳು ತಿಳಿಸಿದ್ದಾರೆ. ನಂತರ ದೂರು ದಾಖಲಿಸಿಕೊಂಡು ತನಿಖೆ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Loading...
Unable to load recommendations.
Follow Us