ಕೆಲಸ ಮುಗಿಸಿ ತೆರಳುತ್ತಿದ್ದ ಯುವಕನ ಮೇಲೆ ಹಲ್ಲೆ: ಏಕಾಏಕಿ ಎರಗಿ ದೊಚಿದ ಖದೀಮರು

ಕೆಲಸ ಮುಗಿಸಿ ಹೋಗುತ್ತಿದ್ದ ಯುವಕ ಮೇಲೆ ಎರಗಿ ದರೋಡೆಕೋರರು ದೋಚಲು ಮುಂದಾಗಿರುವಂತಹ ಘಟನೆ ಪುಲಿಕೇಶಿನಗರ ಪೊಲೀಸ್ ಠಾಣಾ ವ್ತಾಪ್ತಿಯಲ್ಲಿ ನಿನ್ನೆ ಮಧ್ಯರಾತ್ರಿ ನಡೆದಿದೆ. ಮಾರಕ ಆಯುಧವನ್ನು ಹಿಡಿದು ಹಲ್ಲೆ ನಡೆಸಿದ್ದಾರೆ. ಅಸ್ಸಾಂ ಮೂಲದ ಮನೋಜ್ ಗಂಭೀರವಾಗಿ ಗಾಯಗೊಂಡಿದ್ದಾನೆ.

ಕೆಲಸ ಮುಗಿಸಿ ತೆರಳುತ್ತಿದ್ದ ಯುವಕನ ಮೇಲೆ ಹಲ್ಲೆ: ಏಕಾಏಕಿ ಎರಗಿ ದೊಚಿದ ಖದೀಮರು
ಯುವಕನ ಮೇಲೆ ಹಲ್ಲೆ
Follow us
Prajwal Kumar NY
| Updated By: ಗಂಗಾಧರ​ ಬ. ಸಾಬೋಜಿ

Updated on: Nov 12, 2023 | 10:52 AM

ಬೆಂಗಳೂರು, ನವೆಂಬರ್​​ 12: ಕೆಲಸ ಮುಗಿಸಿ ಹೋಗುತ್ತಿದ್ದ ಯುವಕ ಮೇಲೆ ಎರಗಿ (Attack) ದರೋಡೆಕೋರರು ದೋಚಲು ಮುಂದಾಗಿರುವಂತಹ ಘಟನೆ ಪುಲಿಕೇಶಿನಗರ ಪೊಲೀಸ್ ಠಾಣಾ ವ್ತಾಪ್ತಿಯಲ್ಲಿ ನಿನ್ನೆ ಮಧ್ಯರಾತ್ರಿ ನಡೆದಿದೆ. ಮಾರಕ ಆಯುಧವನ್ನು ಹಿಡಿದು ಹಲ್ಲೆ ನಡೆಸಿದ್ದಾರೆ. ಅಸ್ಸಾಂ ಮೂಲದ ಮನೋಜ್ ಗಂಭೀರವಾಗಿ ಗಾಯಗೊಂಡಿದ್ದಾನೆ. ಹೊಟೇಲ್​ವೊಂದರಲ್ಲಿ ಕೆಲಸ ಮುಗಿಸಿ ಯುವಕ ತೆರಳುತ್ತಿದ್ದ. ಈ ವೇಳೆ ಬೈಕ್​ನಲ್ಲಿ ಬಂದ ದರೋಡೆಕೋರರು ಕೃತ್ಯವೆಸಗಿ ಪರಾರಿಯಾಗಿದ್ದಾರೆ. ಪುಂಡರ ಕೃತ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ.

ವಾಕಿಂಗ್​ ಮಾಡುತ್ತಿದ್ದ ಅಜ್ಜಿ, ಮೊಮ್ಮಕ್ಕಳಿಗೆ ಕಾರು ಡಿಕ್ಕಿ

ಬೆಂಗಳೂರಿನ ಕಲ್ಯಾಣ ನಗರದ ಚಳ್ಳಿಕೆರೆಯಲ್ಲಿ ವಾಕಿಂಗ್​ ಮಾಡುತ್ತಿದ್ದ ಅಜ್ಜಿ ಮತ್ತು ಮೊಮ್ಮಕ್ಕಳಿಗೆ ಕಾರು ಡಿಕ್ಕಿ ಹೊಡೆದಿದೆ. ಶೀಲಾ (60) ಗಂಭೀರವಾಗಿ ಗಾಯಗೊಂಡ ವೃದ್ದೆ. ಮೊಮ್ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅತಿವೇಗವಾಗಿ ಕಾರು ಚಾಲನೆ ಮಾಡಿದ ಕುಮಾರ್​ ಮೊದಲಿಗೆ ಇಬ್ಬರಿಗೂ ಡಿಕ್ಕಿಯಾಗಿ ರಸ್ತೆ ಬದಿ ನಿಂತಿದ್ದ ಬೈಕ್​ಗೆ ಡಿಕ್ಕಿ ಹೊಡೆದು ಬಳಿಕ ಕಂಪೌಂಡ್​ಗೆ ಡಿಕ್ಕಿಯಾಗಿದೆ. ಸ್ಥಳಕ್ಕೆ ಬಾಣಸವಾಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಕಾರಿನಲ್ಲಿ ಮದ್ಯದ ಬಾಟಲಿ ಪತ್ತೆಯಾಗಿವೆ. ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಟಂಟಂ ವಾಹನ ಪಲ್ಟಿಯಾಗಿ ಓರ್ವ ಯುವಕ ಸ್ಥಳದಲ್ಲೇ ಸಾವು

ಮೈಸೂರು: ಟಂಟಂ ವಾಹನ ಪಲ್ಟಿಯಾಗಿ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ  ಮೈಸೂರು ತಾಲೂಕಿನ ಮೇಗಳಾಪುರ ಗ್ರಾಮದ ಬಳಿ ನಡೆದಿದೆ. ದರ್ಶನ್​ ಮೃತ ಯುವಕ. 10 ಯುವಕರಿಗೆ ಗಂಭೀರ ಗಾಯಗಳಾಗಿವೆ. ಟಂಟಂ ವಾಹನದಲ್ಲಿ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದರು.

ಇದನ್ನೂ ಓದಿ: ಬೆಳಗಾವಿಯಲ್ಲಿ ಡೀಪ್​ ಫೇಕ್ ಪ್ರಕರಣ: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಫೋಟೋ ಎಡಿಟ್​ ಮಾಡಿ ಬ್ಯ್ಲಾಕ್​ಮೇಲ್

ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟಂಟಂ ವಾಹನ ಪಲ್ಟಿಯಾಗಿದೆ. ಎಲ್ಲ ಗಾಯಾಳುಗಳು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವರುಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಅಕ್ರಮವಾಗಿ ಗ್ರಾಮಗಳಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ಅಬಕಾರಿ ದಳದ ಕಾರ್ಯಚರಣೆ ಮಾಡಿದ್ದು, ಅಕ್ರಮವಾಗಿ ಗ್ರಾಮಗಳಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ನಾಲ್ಕು ಜನರನ್ನು ಬಂಧಿಸಿದ್ದಾರೆ. ಕೆಂಗಲ್ ಕೆಂಪೋಹಳ್ಳಿ ಹನುಮಂತರಾಯಪ್ಪ(50), ಬರೇಗನಹಳ್ಳಿ ಗಂಗಮ್ಮ(65), ನಿಡವಂದ ಶಾರದಮ್ಮ(49), ಘಂಟೆಹೊಸಹಳ್ಳಿ ಗೋವಿಂದರಾಜು(45) ಬಂಧಿತರು.

ಇದನ್ನೂ ಓದಿ: ಆರು ಕಳ್ಳರನ್ನು ಖೆಡ್ಡಾಕ್ಕೆ ಕೆಡವಿದ ಚಿತ್ರಹಳ್ಳಿ ಪೊಲೀಸರು; ಶ್ರೀಗಂಧ, ರಕ್ತ ಚಂದನ, ಆನೆ ದಂತ, ಪೆಂಗೋಲಿನ್ ಚಿಪ್ಪುಗಳು ವಶಕ್ಕೆ

48 ಸಾವಿರ ಮೌಲ್ಯದ 89 ಲೀಟರ್ ಮದ್ಯ ಹಾಗೂ 10 ಲೀಟರ್ ಬಿಯ‌ರ್ ಜಪ್ತಿ ಮಾಡಲಾಗಿದೆ. ಚಿಲ್ಲರೆ ಅಂಗಡಿ ಹಾಗೂ ಮನೆಗಳಲ್ಲಿ ಲೈಸೆನ್ಸ್ ಇಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್