Crime News: ದೆಹಲಿಯ ಮೈದಾನದಲ್ಲಿ ಶವದ ತುಂಡುಗಳನ್ನು ತುಂಬಿಟ್ಟಿದ್ದ ಬ್ಯಾಗ್ ಪತ್ತೆ; ಕೊಲೆಯಾದವರ ಸುಳಿವೇ ಸಿಕ್ಕಿಲ್ಲ

ಭಾನುವಾರ ಪೊಲೀಸ್ ತಂಡ ಗಸ್ತು ತಿರುಗುತ್ತಿದ್ದಾಗ ರಾಮಲೀಲಾ ಮೈದಾನದ ಪೊದೆಗಳ ಬಳಿ ದುರ್ವಾಸನೆ ಬರುತ್ತಿತ್ತು. ಅಲ್ಲಿ ಪೊಲೀಸರಿಗೆ ಶವದ ಕತ್ತರಿಸಿದ ಭಾಗಗಳಿರುವ ಬ್ಯಾಗ್ ಕಂಡಿದೆ.

Crime News: ದೆಹಲಿಯ ಮೈದಾನದಲ್ಲಿ ಶವದ ತುಂಡುಗಳನ್ನು ತುಂಬಿಟ್ಟಿದ್ದ ಬ್ಯಾಗ್ ಪತ್ತೆ; ಕೊಲೆಯಾದವರ ಸುಳಿವೇ ಸಿಕ್ಕಿಲ್ಲ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jun 06, 2022 | 3:55 PM

ನವದೆಹಲಿ: ಕೊಲೆ ಮಾಡಿ, ಆ ಶವವನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ, ಬ್ಯಾಗ್​ನಲ್ಲಿ ತುಂಬಿ ಮೈದಾನದಲ್ಲಿ ಇಟ್ಟುಹೋಗಿರುವ ಆಘಾತಕಾರಿ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ (Ramlila Ground) ಬ್ಯಾಗ್‌ನೊಳಗೆ ಮನುಷ್ಯ ತುಂಡರಿಸಿದ ದೇಹದ ಭಾಗಗಳನ್ನು ಪತ್ತೆ ಹಚ್ಚಲಾಗಿದ್ದು, ಆ ಪ್ರದೇಶದಲ್ಲಿ ಆತಂಕ ಮೂಡಿಸಿದೆ. ಪಾಂಡವ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಯಾಣಪುರಿ 20 ಬ್ಲಾಕ್ ಮುಂಭಾಗದ ರಾಮಲೀಲಾ ಮೈದಾನದಲ್ಲಿ ಬ್ಯಾಗ್ ಪತ್ತೆಯಾಗಿದೆ. ಕೊಲೆಯಾಗಿರುವ ವ್ಯಕ್ತಿಯ ಗುರುತನ್ನು ಪೊಲೀಸರು ಇನ್ನೂ ಪತ್ತೆಹಚ್ಚಿಲ್ಲ.

ಭಾನುವಾರ ಪೊಲೀಸ್ ತಂಡ ಗಸ್ತು ತಿರುಗುತ್ತಿದ್ದಾಗ ರಾಮಲೀಲಾ ಮೈದಾನದ ಪೊದೆಗಳ ಬಳಿ ದುರ್ವಾಸನೆ ಬರುತ್ತಿತ್ತು. ಈ ಬಗ್ಗೆ ತಕ್ಷಣ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ರವಾನಿಸಲಾಗಿದ್ದು, ದುರ್ವಾಸನೆ ಬರುತ್ತಿದ್ದಂತೆ ಪಾಂಡವ ನಗರ ಠಾಣೆಯ ಪೊಲೀಸ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಆಗ ಪೊಲೀಸರಿಗೆ ಶವದ ಕತ್ತರಿಸಿದ ಭಾಗಗಳನ್ನು ಹೊಂದಿರುವ ಬ್ಯಾಗ್ ಕಂಡಿದೆ.

ಇದನ್ನೂ ಓದಿ: Murder: ಬೈಕ್ ಡಿಕ್ಕಿ ಹೊಡೆದಿದ್ದಕ್ಕೆ ಕೆಳಗೆ ಬಿತ್ತು ಹೆಣ!; ಸಿನಿಮೀಯವಾಗಿ ಬಯಲಾಯ್ತು ಬೆಂಗಳೂರು ಯುವತಿಯ ಕೊಲೆ ರಹಸ್ಯ

ಈ ಕುರಿತು ಮಾಹಿತಿ ಪಡೆದ ಸ್ಟೇಷನ್ ಹೌಸ್ ಆಫೀಸರ್ ಮತ್ತು ಇತರ ಪೋಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ನೋಡಿದಾಗ ವ್ಯಕ್ತಿಯ ಕತ್ತರಿಸಿದ ದೇಹದ ಭಾಗಗಳನ್ನು ತುಂಬಿದ ಚೀಲವನ್ನು ನೋಡಿದರು. ಈ ನಡುವೆ ಪಾಂಡವನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ದೇಹದ ಎಲ್ಲಾ ಭಾಗಗಳನ್ನು ಎಲ್‌ಬಿಎಸ್ ಶವಾಗಾರದಲ್ಲಿ ಸಂರಕ್ಷಿಸಲಾಗಿದೆ. ಮೃತದೇಹ ಯಾರದ್ದು ಎಂಬುದರ ಗುರುತನ್ನು ಪತ್ತೆ ಹಚ್ಚುವ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:53 pm, Mon, 6 June 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ