ಬೆಂಗಳೂರಿನ ಪಿಇಎಸ್ ಕಾಲೇಜ್​ ಕಟ್ಟಡದಿಂದ ಜಿಗಿದು ಬಿಬಿಎ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರಿನ ಹೊಸ ರೋಡ್ ಬಳಿಯ ಪಿಇಎಸ್​ ಕಾಲೇಜಿನ ಇಂಜಿನಿಯರಿಂಗ್ ವಿಭಾಗದ ಆರನೇ ಮಹಡಿಯಿಂದ ಹಾರಿ ಬಿಬಿಎ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಿನ್ನೆ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ತನಿಖೆ ನಂತರ ಆತ್ಮಹತ್ಯೆಗೆ ಕಾರಣ ಏನು ಎಂದು ಗೊತ್ತಾಗಲಿದೆ ಎಂದು ಆಗ್ನೇಯ ವಿಭಾಗದ ಡಿಸಿಪಿ ಸಿಕೆ ಬಾಬ ಹೇಳಿದ್ದಾರೆ.

ಬೆಂಗಳೂರಿನ ಪಿಇಎಸ್ ಕಾಲೇಜ್​ ಕಟ್ಟಡದಿಂದ ಜಿಗಿದು ಬಿಬಿಎ ವಿದ್ಯಾರ್ಥಿ ಆತ್ಮಹತ್ಯೆ
ಪಿಇಎಸ್​ ಕಾಲೇಜು
Follow us
ರಾಮು, ಆನೇಕಲ್​
| Updated By: ಗಂಗಾಧರ​ ಬ. ಸಾಬೋಜಿ

Updated on: Jan 31, 2024 | 6:34 PM

ಆನೇಕಲ್, ಜನವರಿ 31: ಕಟ್ಟಡದಿಂದ ಜಿಗಿದು ಬಿಬಿಎ ವಿದ್ಯಾರ್ಥಿ (student) ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಿನ್ನೆ ಬೆಂಗಳೂರಿನ ಹೊಸ ರೋಡ್ ಬಳಿಯ ಪಿಇಎಸ್​ ಕಾಲೇಜಿನಲ್ಲಿ ನಡೆದಿದೆ. ಇಂಜಿನಿಯರಿಂಗ್ ವಿಭಾಗದ ಆರನೇ ಮಹಡಿಯಿಂದ ಹಾರಿ ವಿಘ್ನೇಶ್.ಕೆ(19) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೊಂಗಸಂದ್ರದ ರಾಘವೇಂದ್ರ ಲೇಔಟ್ ನಿವಾಸಿ. ಬಿಬಿಎ ಪ್ರಥಮ ವರ್ಷದ ವ್ಯಾಸಂಗ ಮಾಡುತ್ತಿದ್ದ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಆಗ್ನೇಯ ವಿಭಾಗದ ಡಿಸಿಪಿ ಸಿಕೆ ಬಾಬ ಹೇಳಿದ್ದಿಷ್ಟು

ಈ ಕುರಿತಾಗಿ ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ ಬಾಬ ಹೇಳಿಕೆ ನೀಡಿದ್ದು, ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿ ಬೆಳಗ್ಗೆ 11 ಗಂಟೆ ಸುಮಾರಿಗೆ ಕಾಲೇಜಿಗೆ ಹೋಗಿದ್ದ. ನಿನ್ನೆ ಸಂಜೆ‌ 4.30 ರ ಸುಮಾರಿಗೆ ಫ್ರೆಂಡ್ಸ್ ಜೊತೆ ಕಾಫಿ ಕುಡಿದಿದ್ದಾನೆ.

ಇದನ್ನೂ ಓದಿ: ಮಾಜಿ ಸಚಿವ ರೇವಣ್ಣ ಆಪ್ತ ಕೃಷ್ಣೇಗೌಡ ಕೊಲೆ ಕೇಸ್​: ಐದು ತಿಂಗಳ ಬಳಿಕ ಪ್ರಮುಖ ಆರೋಪಿಗಳ ಬಂಧನ

ಅದಾದ ಮೇಲೆ 6 ಗಂಟೆ ಸುಮಾರಿಗೆ ತಾನು ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳದಲ್ಲೇ ಸಾವನ್ನಪ್ಪಿದ್ದು ಮಾಹಿತಿ ಬಂದ ಕೂಡಲೇ ನಮ್ಮ ಸಿಬ್ಬಂದಿ ಭೇಟಿ ನೀಡಿದ್ದಾರೆ. ಸದ್ಯಕ್ಕೆ ವಿದ್ಯಾರ್ಥಿ ಸಾವಿಗೆ ಯಾವ ಕಾರಣ ಗೊತ್ತಾಗಿಲ್ಲ. ಮನೆಯನ್ನ ಪರಿಶೀಲನೆ ಮಾಡಲಾಗಿದೆ. ತನಿಖೆ ನಂತರ ಆತ್ಮಹತ್ಯೆಗೆ ಕಾರಣ ಏನು ಎಂದು ಗೊತ್ತಾಗಲಿದೆ ಎಂದು ಹೇಳಿದ್ದಾರೆ.

ಚಾಲಕನ ನಿರ್ಲಕ್ಷ್ಯ: ಶಾಲಾ ವಾಹನ ಹರಿದು ಮನೆ ಮುಂದೆ ಆಟವಾಡುತ್ತಿದ್ದ ಮಗು ಸಾವು

ಕಲಬುರಗಿ: ಚಾಲಕನ ನಿರ್ಲಕ್ಷ್ಯದಿಂದ ಶಾಲಾ ವಾಹನ ಹರಿದು ಮನೆ ಮುಂದೆ ಆಟವಾಡುತ್ತಿದ್ದ ಮಗು ಸಾವನ್ನಪ್ಪಿರುವಂತಹ ಘಟನೆ ನಗರದ ಸಂಗಮೇಶ್ವರ ಕಾಲೋನಿಯಲ್ಲಿ ನಡೆದಿದೆ. ಮನೋಜ್(2) ಮೃತ ಮಗು. ನ್ಯಾಷನಲ್ ಪಬ್ಲಿಕ್ ಶಾಲೆಗೆ ಸೇರಿಸಿದ ವಾಹನ ಹರಿದು ದುರ್ಘಟನೆ ಸಂಭವಿಸಿದೆ. ವಿದ್ಯಾರ್ಥಿಗಳನ್ನು ಶಾಲೆಯಿಂದ ಮನೆಗೆ ಬಿಟ್ಟು  ವಾಹನ ತೆರಳುತ್ತಿತ್ತು.

ಇದನ್ನೂ ಓದಿ: ಬೆಂಗಳೂರು: ಹೋಟೆಲ್​ನಲ್ಲಿ ಯುವತಿ ಜತೆ ಅಸಭ್ಯವಾಗಿ ವರ್ತಿಸಿದ್ದ ವ್ಯಕ್ತಿಯ ಬಂಧನ

ಘಟನೆ ನಂತರ ಸ್ಥಳದಲ್ಲೇ ಶಾಲಾ ವಾಹನ ಬಿಟ್ಟು ಚಾಲಕ ಪರಾರಿ ಆಗಿದ್ದಾನೆ. ರೊಚ್ಚಿಗೆದ್ದ ಸ್ಥಳೀಯರಿಂದ ಕಲ್ಲೆಸೆತ, ವಾಹನದ ಗಾಜು ಪುಡಿ ಪುಡಿ ಮಾಡಿದ್ದಾರೆ. ಕಲಬುರಗಿ ಸಂಚಾರಿ-1 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬೈಕ್ ಚಕ್ರಕ್ಕೆ ಟಾರ್ಪಲ್ ಸಿಲುಕಿ ಸವಾರ ಸಾವು

ರಸ್ತೆಯಲ್ಲಿ ರೈತರು ಹುರುಳಿ ಹುಲ್ಲನ್ನು ಒಕ್ಕಣೆ ಮಾಡುತ್ತಿದ್ದರು. ಹುರುಳಿ ಹುಲ್ಲಿನ ಗುಡ್ಡೆಗೆ ಹಾಕಿದ್ದ ಟಾರ್ಪಲ್ ಬೈಕ್ ಚಕ್ರಕ್ಕೆ ಸಿಲುಕಿ ಸವಾರ ಸಾವನ್ನಪ್ಪಿದ್ದಾನೆ. ಚಾಮರಾಜನಗರ ಜಿಲ್ಲೆಯ ಅರಕಲವಾಡಿ ಸಮೀಪ ಘಟನೆ ನಡೆದಿದೆ.

ಬೈಕ್ ಹಿಂಬದಿ ಸವಾರ ಮಹಾದೇವಯ್ಯ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಇನ್ನೂ ಸವಾರ ಉದಯ್ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದಾನೆ. ಸ್ಥಳಕ್ಕೆ ಚಾಮರಾಜನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು