Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಜೈಲಿನಲ್ಲಿ ವಿಚಾರಣೆ ವೇಳೆ ಆರೋಪಿ ಸಾವು; ಐವರು ಪೊಲೀಸರ ಅಮಾನತು

ಮೃತಪಟ್ಟ ಬುಕ್ಕಿಯ ಕುಟುಂಬಸ್ಥರು ಪೊಲೀಸರ ಮೇಲೆ ಗಂಭೀರ ಆರೋಪ ಮಾಡಿದ್ದು, ಪೊಲೀಸ್ ಸ್ಟೇಷನ್​ನಲ್ಲಿ ಪೊಲೀಸರ ಕಿರುಕುಳದಿಂದಲೇ ಆತ ಸಾವನ್ನಪ್ಪಿದ್ದಾನೆ ಎಂದಿದ್ದಾರೆ.

Crime News: ಜೈಲಿನಲ್ಲಿ ವಿಚಾರಣೆ ವೇಳೆ ಆರೋಪಿ ಸಾವು; ಐವರು ಪೊಲೀಸರ ಅಮಾನತು
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Aug 18, 2021 | 12:40 PM

ಗ್ವಾಲಿಯರ್: ಪೊಲೀಸ್ ವಶದಲ್ಲಿದ್ದಾಗಲೇ ಬುಕ್ಕಿ (ಬೆಟ್ಟಿಂಗ್ ದಂಧೆ ನಡೆಸುವಾತ) ಸಾವನ್ನಪ್ಪಿರುವುದರಿಂದ ಐವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಮಧ್ಯಪ್ರದೇಶದ ಗ್ವಾಲಿಯರ್​​ನಲ್ಲಿ ಸೋಮವಾರ ರಾತ್ರಿ ಈ ಘಟನೆ ನಡೆದಿದೆ. ಠಾಣೆಯ ಇನ್​ಸ್ಪೆಕ್ಟರ್ ಸೇರಿದಂತೆ ಐವರು ಪೊಲೀಸರನ್ನು ಅಮಾನತು ಮಾಡಲಾಗಿದೆ ಎಂದು ಎಸ್​ಪಿ ಅಮಿತ್ ಸಂಘಿ ಮಾಹಿತಿ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಮೃತಪಟ್ಟ ಬುಕ್ಕಿಯ ಕುಟುಂಬಸ್ಥರು ಪೊಲೀಸರ ಮೇಲೆ ಗಂಭೀರ ಆರೋಪ ಮಾಡಿದ್ದು, ಪೊಲೀಸ್ ಸ್ಟೇಷನ್​ನಲ್ಲಿ ಪೊಲೀಸರ ಕಿರುಕುಳದಿಂದಲೇ ಆತ ಸಾವನ್ನಪ್ಪಿದ್ದಾನೆ ಎಂದಿದ್ದಾರೆ. ಈ ಘಟನೆ ತೀವ್ರ ವಿವಾದಕ್ಕೀಡಾಗಿ, ಆ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆಗಳು ಕೂಡ ನಡೆದಿದ್ದವು. ಈ ಹಿನ್ನೆಲೆಯಲ್ಲಿ ಐವರು ಪೊಲೀಸರನ್ನು ಅಮಾನತುಗೊಳಿಸಿ ಎಸ್​ಪಿ ಸಂಘಿ ಆದೇಶ ಹೊರಡಿಸಿದ್ದಾರೆ.

ಇಂದರ್​ಗಂಜ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಟೌನ್ ಇನ್​ಸ್ಪೆಕ್ಟರ್ ರಾಜೇಂದ್ರ ಪರಿಹಾರ್, ಅಡಿಷನಲ್ ಸಬ್ ಇನ್​ಸ್ಪೆಕ್ಟರ್ ಬ್ರಿಜ್​ಲಾಲ್, ಕಾನ್​ಸ್ಟೆಬಲ್​ಗಳಾದ ನರೇಶ್, ಮುಖೇಶ್, ಶ್ಯಾಮ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ. ಈ ಪ್ರಕರಣದ ಕುರಿತು ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ ನೀಡಲಾಗಿದೆ. ಸೋನು ಬನ್ಸಾಲ್ ಅವರಿಗೆ ಕಿರುಕುಳ ನೀಡಿ ಕೊಲ್ಲಲಾಗಿದೆ ಎಂಬುದು ಸತ್ಯಕ್ಕೆ ದೂರವಾದ ಮಾತು. ಆದರೆ, ಈ ಬಗ್ಗೆ ಸತ್ಯಾಂಶ ಹೊರಬರಲಿ ಎಂಬ ಕಾರಣಕ್ಕೆ ತನಿಖೆಗೆ ಆದೇಶಿಸಲಾಗಿದೆ ಎಂದು ಎಸ್​ಪಿ ಸಂಘಿ ಹೇಳಿದ್ದಾರೆ.

ಪೊಲೀಸ್ ಠಾಣೆಯಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಕಲೆಹಾಕಿ ಆ ದಿನ ಏನು ನಡೆದಿದೆ ಎಂವ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಬುಕ್ಕಿ ಸೋನು ಬನ್ಸಾಲ್ ಅವರನ್ನು ಸೋಮವಾರ ರಾತ್ರಿ ಬಂಧಿಸಲಾಗಿತ್ತು. ವಿಚಾರಣೆ ವೇಳೆ ತೀವ್ರ ಸುಸ್ತಾಗಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ಆತ ಸಾವನ್ನಪ್ಪಿರುವ ವಿಷಯವನ್ನು ವೈದ್ಯರು ಘೋಷಿಸಿದ್ದರು. ಇದು ಪೊಲೀಸರೇ ಹಿಂಸೆ ನೀಡಿ ಮಾಡಿರುವ ಕೊಲೆ ಎಂದು ಆತನ ಕುಟುಂಬಸ್ಥರು ಆರೋಪಿಸಿದ್ದರು.

ಸೋಮವಾರ ರಾತ್ರಿ 8 ಗಂಟೆಗೆ ನಮ್ಮ ಮನೆಗೆ ಬಂದ ಪೊಲೀಸರು ನನ್ನ ಗಂಡನನ್ನು ಪೊಲೀಸ್ ಠಾಣೆಗೆ ಬರುವಂತೆ ಹೇಳಿದರು. ಸ್ಟೇಷನ್​ಗೆ ಹೋಗಿ 10 ನಿಮಿಷದಲ್ಲಿ ವಾಪಾಸ್ ಬರುತ್ತೇನೆ ಎಂದು ಹೇಳಿಹೋದ ನನ್ನ ಗಂಡ ಬಂದಿದ್ದು ಹೆಣವಾಗಿ. ರಾತ್ರಿ 2 ಗಂಟೆಗೆ ಬಂದ ಪೊಲೀಸ್ ಕಾನ್​ಸ್ಟೆಬಲ್ ನನ್ನ ಗಂಡ ಸಾವನ್ನಪ್ಪಿರುವ ವಿಷಯ ತಿಳಿಸಿದರು. ನನ್ನ ಗಂಡನ ದೇಹದ ಮೇಲೆ ಹಲ್ಲೆ ಮಾಡಿರುವ ಗಾಯದ ಗುರುತುಗಳಿತ್ತು. ಪೊಲೀಸರೇ ಅವರನ್ನು ಕೊಂದಿದ್ದಾರೆ ಎಂದು ಸೋನು ಬನ್ಸಾಲ್ ಅವರ ಪತ್ನಿ ಆರೋಪಿಸಿದ್ದಾರೆ.

ಇದನ್ನೂ ಓದಿ: Crime News: ಆನ್​ಲೈನ್​ ಗೇಮ್​ನಲ್ಲಿ 40,000 ರೂ. ಕಳೆದುಕೊಂಡ 13 ವರ್ಷದ ಬಾಲಕ; ಅಮ್ಮ ಬೈದಿದ್ದಕ್ಕೆ ಬೇಸರಗೊಂಡು ಆತ್ಮಹತ್ಯೆ

Murder News: ಹೆಂಗಸನ್ನು ಕೊಂದು, ಕತ್ತರಿಸಿ ಸೂಟ್​ಕೇಸ್​ನಲ್ಲಿ ಸಾಗಿಸಿದ ಹಂತಕರು; ಫ್ರಿಜ್​ನಿಂದ ಬಯಲಾಯ್ತು ಕೊಲೆ ರಹಸ್ಯ!

(Crime News: Bookie died in police custody in Madhya Pradesh Gwalior five Police suspended)

Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್