Crime News: ಚಲಿಸುವ ಬಸ್​ನಿಂದ ಬಿದ್ದು, ಚಕ್ರದಡಿ ಸಿಲುಕಿ ಅಪ್ಪಚ್ಚಿಯಾದ ಕಾಲೇಜು ವಿದ್ಯಾರ್ಥಿ

ಮದನ್​ಲಾಲ್ ಕೊಯಮತ್ತೂರಿನಿಂದ ಪಳನಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ಹತ್ತಿದಾಗ ಈ ಘಟನೆ ನಡೆದಿದೆ. ಬಸ್ ತಿರುವು ತೆಗೆದುಕೊಳ್ಳುತ್ತಿದ್ದಾಗ ಬ್ಯಾಲೆನ್ಸ್ ತಪ್ಪಿ ಮದನಲಾಲ್ ಕೆಳಗೆ ಬಿದ್ದಿದ್ದಾನೆ.

Crime News: ಚಲಿಸುವ ಬಸ್​ನಿಂದ ಬಿದ್ದು, ಚಕ್ರದಡಿ ಸಿಲುಕಿ ಅಪ್ಪಚ್ಚಿಯಾದ ಕಾಲೇಜು ವಿದ್ಯಾರ್ಥಿ
ಸಾಂದರ್ಭಿಕ ಚಿತ್ರ
Follow us
ಸುಷ್ಮಾ ಚಕ್ರೆ
|

Updated on: Feb 07, 2023 | 11:24 AM

ಕೊಯಮತ್ತೂರು: ವೇಗವಾಗಿ ಚಲಿಸುತ್ತಿದ್ದ ಬಸ್‌ನಿಂದ ಬಿದ್ದು ಆ ಬಸ್​ನ ಚಕ್ರದಡಿ ಸಿಲುಕಿ 22 ವರ್ಷದ ಬಿಎಸ್‌ಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕೊಯಮತ್ತೂರಿನಲ್ಲಿ (Coimbatore) ನಡೆದಿದೆ. ಕೇರಳದ ಮರೈಯೂರ್‌ನ ಮದನ್‌ಲಾಲ್ ಎಂಬ ಯುವಕ ಪೊಲ್ಲಾಚಿಯ ಖಾಸಗಿ ಕಾಲೇಜಿನಲ್ಲಿ ಬಿಎಸ್‌ಸಿ ಕಂಪ್ಯೂಟರ್ ಸೈನ್ಸ್‌ನಲ್ಲಿ 3ನೇ ವರ್ಷದ ವಿದ್ಯಾರ್ಥಿಯಾಗಿದ್ದ. ಮದನ್‌ಲಾಲ್‌ ಉಡುಮಲೈನಲ್ಲಿ ರೂಂ ಮಾಡಿಕೊಂಡು ವಾಸವಾಗಿದ್ದ. ಆತನೇ ಬಸ್​ನಡಿ ಸಿಲುಕಿ, ಅಪ್ಪಚ್ಚಿಯಾಗಿರುವ ಯುವಕ.

ಮದನ್​ಲಾಲ್ ಕೊಯಮತ್ತೂರಿನಿಂದ ಪಳನಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ಹತ್ತಿದಾಗ ಈ ಘಟನೆ ನಡೆದಿದೆ. ಬಸ್ ತಿರುವು ತೆಗೆದುಕೊಳ್ಳುತ್ತಿದ್ದಾಗ ಬ್ಯಾಲೆನ್ಸ್ ತಪ್ಪಿ ಮದನಲಾಲ್ ಕೆಳಗೆ ಬಿದ್ದಿದ್ದಾನೆ. ಆಗ ಬಸ್​ನ ಹಿಂಬದಿ ಚಕ್ರದಡಿ ಸಿಲುಕಿ ಅಪ್ಪಚ್ಚಿಯಾಗಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: Bengaluru: ರಸ್ತೆ ದಾಟುವಾಗ ವಿದ್ಯಾರ್ಥಿನಿಗೆ ಕಾರು ಡಿಕ್ಕಿ: ಅಪಘಾತಕ್ಕೆ BBMP, ಟ್ರಾಫಿಕ್ ಪೊಲೀಸರ ನಿರ್ಲಕ್ಷ್ಯ ಆರೋಪ

ಈ ಘಟನೆಯ ನಂತರ ಕೋಮಂಗಲಂ ಪೊಲೀಸರು ಸ್ಥಳಕ್ಕೆ ಧಾವಿಸಿ, ಯುವಕನ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಅಪಘಾತವಾದ ಬಸ್ ಅನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ತನಿಖೆ ಆರಂಭಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ