2 ಸರ್ಕಾರಿ ಬಸ್‌ಗಳ ಮಧ್ಯೆ ಡಿಕ್ಕಿ: ಇಬ್ಬರು ಸಾವು, 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

| Updated By: ಗಂಗಾಧರ​ ಬ. ಸಾಬೋಜಿ

Updated on: Jan 06, 2024 | 5:33 PM

ವಿಜಯಪುರ ತಾಲೂಕಿನ ಕವಲಗಿ ಬಳಿ ರಾಷ್ಟ್ರೀಯ ಹೆದ್ದಾರಿ 52ರಲ್ಲಿ 2 ಸರ್ಕಾರಿ ಬಸ್‌ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿರುವಂತಹ ಘಟನೆ ನಡೆದಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

2 ಸರ್ಕಾರಿ ಬಸ್‌ಗಳ ಮಧ್ಯೆ ಡಿಕ್ಕಿ: ಇಬ್ಬರು ಸಾವು, 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ
ಸರ್ಕಾರಿ ಬಸ್‌ಗಳ ಮುಖಾಮುಖಿ ಡಿಕ್ಕಿ
Follow us on

ವಿಜಯಪುರ, ಜನವರಿ 06: 2 ಸರ್ಕಾರಿ ಬಸ್‌ಗಳು ಮುಖಾಮುಖಿ ಡಿಕ್ಕಿ (collision) ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿರುವಂತಹ ಘಟನೆ ವಿಜಯಪುರ ತಾಲೂಕಿನ ಕವಲಗಿ ಬಳಿ ಹೆದ್ದಾರಿಯಲ್ಲಿ ನಡೆದಿದೆ. ಸಾಜೀದಾ ಬೇಗಂ(36), ರೋಹಿಣಿ ಪಂಚಾಳ(31) ಮೃತರು. ಸಾಜೀದಾ ಬಸನವಬಾಗೇಬಾಡಿ ತಾಲೂಕಿನ ಡೋಣೂರು ನಿವಾಸಿ. ಮೃತ ರೋಹಿಣಿ ಪಂಚಾಳ ಕಲಬುರಗಿ ನಗರದ ನಿವಾಸಿ. ಸದ್ಯ ಗಾಯಾಳು ಪ್ರಯಾಣಿಕರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

KA 28 F 2273 ಹಾಗೂ KA 32 F 2398 ಸಂಖ್ಯೆಯ ಬಸ್​ ಅಪಘಾತದಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಅಪಘಾತ ಹಿನ್ನೆಲೆ ಸಂಚಾರ ಬಂದ್ ಮಾಡಲಾಗಿದೆ. 3 ಕಿಲೋಮೀಟರ್​ವರೆಗೂ ವಾಹನಗಳು ಸಾಲುಗಟ್ಟಿ ನಿಂತಿವೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ದಿನಸಿ ಅಂಗಡಿ ಮಾಲೀಕನ ಬರ್ಬರ ಹತ್ಯೆ

ಆನೇಕಲ್: ಹೊಸೂರಿನ ಸಿಪ್​​​ಕಾಟ್​​​ ಸಮೀಪದ ಬೇಗಿಪಲ್ಲಿಯಲ್ಲಿ ನಿನ್ನೆ ಸಂಜೆ ಬೈಕ್​​ನಲ್ಲಿ ಬಂದ ಮುಸುಕುಧಾರಿಗಳಿಂದ ದಿನಸಿ ಅಂಗಡಿ ಮಾಲಿಕನನ್ನು ಹತ್ಯೆ ಮಾಡಲಾಗಿದೆ.

ಇದನ್ನೂ ಓದಿ: ಆನೇಕಲ್: ವಯಸ್ಸಾದ ತಾಯಿಯನ್ನು ರಸ್ತೆ ಬದಿ ಬಿಟ್ಟು ಮಗಳು, ಅಳಿಯ ಪರಾರಿ; ಮಾನವೀಯತೆ ತೋರಿದ ಗ್ರಾಮಸ್ಥರು

ಹೊಸೂರು ಸಮೀಪದ ಬೇಗಿ ನಿವಾಸಿ ತಿಮ್ಮರಾಜು(40) ಮೃತ ವ್ಯಕ್ತಿ. 25 ಬಾರಿ ಚಾಕುವಿನಿಂದ ಇರಿದು ಕಬ್ಬಿಣದ ರಾಡ್​ನಿಂದ ಹಲ್ಲೆ ಮಾಡಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸಿಪ್​​ ಕಾಟ್​​​ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಮುಖ್ಯ ಶಿಕ್ಷಕ ಅಮಾನತು

ಮೈಸೂರು: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ ಸಂಬಂಧ ನಂಜನಗೂಡು ತಾಲೂಕಿನ ದಾಸನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕನನ್ನು ಅಮಾನತುನ ಮಾಡಲಾಗಿದೆ. ಲೈಂಗಿಕ ಕಿರುಕುಳದ ಬಗ್ಗೆ ಮುಖ್ಯ ಶಿಕ್ಷಕ ಪ್ರಕಾಶ್ ವಿರುದ್ಧ ವಿದ್ಯಾರ್ಥಿನಿಯರ ಪೋಷಕರು ದೂರು ನೀಡಿದ್ದರು.

ಇದನ್ನೂ ಓದಿ: ಕಲ್ಯಾಣ ಮಂಟಪದಲ್ಲಿ ಅದ್ದೂರಿ ಮದುವೆ ಮಧ್ಯೆ ಕಳ್ಳತನ! ಆರು ಗಂಟೆಯಲ್ಲೇ ಕಳ್ಳನನ್ನು ಹಿಡಿದ ಬೆಳಗಾವಿ ಪೊಲೀಸರು

ಮೈ ಕೈ ಮುಟ್ಟುವುದು, ಅಸಭ್ಯವಾಗಿ ವರ್ತಿಸುತ್ತಿರುವ ಬಗ್ಗೆ ಪೋಷಕರು ದೂರು ನೀಡಿದ್ದರು. ಪ್ರಕರಣ ಸಂಬಂಧ ಪೋಕ್ಸೋದಡಿ ಪ್ರಕರಣ ದಾಖಲು ವಜಾಕ್ಕೆ ಡಿಡಿಪಿಐಗೆ ಶಿಫಾರಸ್ಸು ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:55 pm, Sat, 6 January 24