AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ದಾವಣಗೆರೆ; ಅಕ್ರಮ ಸಂಬಂಧ ಮುಚ್ಚಿಡಲು ಪ್ರಿಯಕರನ ಜೊತೆ ಸೇರಿ ಹೆಂಡತಿಯಿಂದಲೇ ಗಂಡನ ಕೊಲೆ

Davanagere Murder News: ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ವಡ್ನಾಳ್ ಬನ್ನಿಹಟ್ಟಿ ಗ್ರಾಮದಲ್ಲಿ 38 ವರ್ಷದ ಲೋಕೇಶಪ್ಪ ಎಂಬ ವ್ಯಕ್ತಿಯನ್ನು ಆತನ ಹೆಂಡತಿ 30 ವರ್ಷದ ಪುಷ್ಪಾ ಅಲಿಯಾಸ್ ಕುಸುಮಾ ಕೊಲೆ ಮಾಡಿದ್ದಾಳೆ

Murder: ದಾವಣಗೆರೆ; ಅಕ್ರಮ ಸಂಬಂಧ ಮುಚ್ಚಿಡಲು ಪ್ರಿಯಕರನ ಜೊತೆ ಸೇರಿ ಹೆಂಡತಿಯಿಂದಲೇ ಗಂಡನ ಕೊಲೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 29, 2021 | 8:10 PM

Share

ದಾವಣಗೆರೆ: ಅಕ್ರಮ ಸಂಬಂಧದಿಂದ ಅದೆಷ್ಟೋ ಸಂಸಾರಗಳು ಮುರಿದುಬಿದ್ದ, ಅದೆಷ್ಟೋ ಜನರು ಪ್ರಾಣ ಕಳೆದುಕೊಂಡ ಉದಾಹರಣೆಗಳು ಸಾಕಷ್ಟಿವೆ. ಅದೇ ರೀತಿ ದಾವಣಗೆರೆಯಲ್ಲಿ ತನ್ನ ಅಕ್ರಮ ಸಂಬಂಧವನ್ನು ಮುಚ್ಚಿಡಲು ಗಂಡನನ್ನೇ ಹೆಂಡತಿ ಕೊಲೆ ಮಾಡಿದ್ದಾಳೆ. ತನ್ನ ಪ್ರಿಯಕರನ ಜೊತೆ ಸೇರಿ ಮಹಿಳೆಯೊಬ್ಬಳು ಗಂಡನ ಕೊಲೆ ಮಾಡಿದ್ದಾಳೆ. ಕೊಲೆ ನಡೆದು ಎರಡು ದಿನಗಳ ಬಳಿಕ ಈ ಘಟನೆ ಬೆಳಕಿಗೆ ಬಂದಿದೆ.

ದಾವಣಗೆರೆಯಲ್ಲಿ ವಡ್ನಾಳ್ ಬನ್ನಿಹಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ವಡ್ನಾಳ್ ಬನ್ನಿಹಟ್ಟಿ ಗ್ರಾಮದಲ್ಲಿ 38 ವರ್ಷದ ಲೋಕೇಶಪ್ಪ ಎಂಬ ವ್ಯಕ್ತಿಯನ್ನು ಆತನ ಹೆಂಡತಿ 30 ವರ್ಷದ ಪುಷ್ಪಾ ಅಲಿಯಾಸ್ ಕುಸುಮಾ ಕೊಲೆ ಮಾಡಿದ್ದಾಳೆ. ತನ್ನ ಪ್ರಿಯಕರನಾದ ಚನ್ನಗಿರಿ ತಾಲೂಕಿನ ಕೆರೆಬಿಳಚಿ ಗ್ರಾಮದ ನಿವಾಸಿಯಾದ 35 ವರ್ಷದ ಪ್ರಭು ಲಿಂಗಪ್ಪ ಜೊತೆ ಸೇರಿಕೊಂಡು ಪುಷ್ಪಾ ಈ ಕೃತ್ಯ ಎಸಗಿದ್ದಾಳೆ.

ಜುಲೈ 27ರ ತಡರಾತ್ರಿ ಮನೆಯಲ್ಲೇ ಲೋಕೇಶಪ್ಪನನ್ನು ಕೊಲೆ ಮಾಡಲಾಗಿದೆ. ಆದರೆ, ಈ ಬಗ್ಗೆ ತನಗೇನೂ ಗೊತ್ತೇ ಇಲ್ಲ ಎಂಬಂತೆ ಪತ್ನಿ ಪುಷ್ಪಾ ನಟಿಸಿದ್ದಳು. ಪೊಲೀಸ್ ವಿಚಾರಣೆಯಲ್ಲಿ‌ ಪುಷ್ಪಾ ಹಾಗೂ ಪ್ರಭು ಸೇರಿ ಈ ಕೊಲೆ ಮಾಡಿದ ವಿಷಯ ಬಯಲಾಗಿದೆ. ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಬ್ಬರನ್ನೂ ಪೊಲೀಸ್ ಕಸ್ಟಡಿಯಲ್ಲಿ ಇರಿಸಲಾಗಿದೆ.

ತನ್ನ ಪ್ರಿಯಕರನ ಜೊತೆ ಸೇರಿ ಗಂಡನ ಕತ್ತು ಹಿಸುಕಿ ಕೊಲೆ ಮಾಡಿರುವ ಪುಷ್ಪಾ ಬಳಿಕ ಅಮಾಯಕಳಂತೆ ವರ್ತಿಸಿದ್ದಳು. ಪ್ರಿಯಕರ ಪ್ರಭು ಲಿಂಗಪ್ಪನ ಜೊತೆ ಪುಷ್ಪಾ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಳು. ಈ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡ ಲೋಕೇಶಪ್ಪನನ್ನು ಕೊಲೆ ಮಾಡಲು ನಿರ್ಧರಿಸಿದ್ದಳು. ಅದಕ್ಕಾಗಿ ಜುಲೈ 27ರ ತಡರಾತ್ರಿ ತಮ್ಮ ಮನೆಯಲ್ಲೇ ಲೋಕೇಶಪ್ಪನನ್ನು ಇಬ್ಬರೂ ಸೇರಿ ಕೊಲೆ ಮಾಡಿದ್ದರು.

ಇದನ್ನೂ ಓದಿ: Crime News: ಅಕ್ರಮ ಸಂಬಂಧ ತಂದ ಕಂಟಕ; ಹೆಂಡತಿಯ ಪ್ರಿಯಕರನ ಗುಪ್ತಾಂಗಕ್ಕೆ ಶೂಟ್ ಮಾಡಿದ ಗಂಡ!

Crime News: ಮನೆಯಿಂದ ಓಡಿಹೋಗಿ ಮದುವೆಯಾಗಿದ್ದಕ್ಕೆ ಅಣ್ಣಂದಿರಿಂದಲೇ ತಂಗಿಯ ಬರ್ಬರ ಹತ್ಯೆ

(Crime News: Davanagere Wife Murders Husband with her Lover over Extra Marital Affair)

Published On - 8:09 pm, Thu, 29 July 21

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ