Crime News: ಆಭರಣಕ್ಕಾಗಿ 7 ತಿಂಗಳ ಗರ್ಭಿಣಿ ಸೊಸೆಗೆ ಬೆಂಕಿ ಹಚ್ಚಿದ ಅತ್ತೆ-ಮಾವ

| Updated By: ಸುಷ್ಮಾ ಚಕ್ರೆ

Updated on: Jan 10, 2023 | 4:51 PM

ಖುಷ್ಬೂ 2022ರ ಏಪ್ರಿಲ್ ತಿಂಗಳಲ್ಲಿ ವಿವಾಹವಾಗಿದ್ದರು. ಮದುವೆ ಸಮಾರಂಭದಲ್ಲಿ ತಾವು ನೀಡಿದ್ದ ಆಭರಣಗಳನ್ನು ಹಿಂದಿರುಗಿಸಲು ಆಕೆಯ ಗಂಡನ ಮನೆಯವರು ಒತ್ತಾಯಿಸಿದ್ದರು. ಅದಕ್ಕೆ ಆಕೆ ಒಪ್ಪದಿದ್ದಾಗ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದರು ಎನ್ನಲಾಗಿದೆ.

Crime News: ಆಭರಣಕ್ಕಾಗಿ 7 ತಿಂಗಳ ಗರ್ಭಿಣಿ ಸೊಸೆಗೆ ಬೆಂಕಿ ಹಚ್ಚಿದ ಅತ್ತೆ-ಮಾವ
ಪ್ರಾತಿನಿಧಿಕ ಚಿತ್ರ
Follow us on

ನವದೆಹಲಿ: ತನ್ನ ಬಳಿಯಿದ್ದ ಆಭರಣವನ್ನು ವಾಪಾಸ್ ನೀಡಲು ಒಪ್ಪದ 7 ತಿಂಗಳ ಗರ್ಭಿಣಿಯೊಬ್ಬರಿಗೆ (Pregnant Lady) ಆಕೆಯ ಅತ್ತೆ-ಮಾವ ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿರುವ ಆಘಾತಕಾರಿ ಘಟನೆ (Shocking News) ದೆಹಲಿಯಲ್ಲಿ ನಡೆದಿದೆ. ಆ ಗರ್ಭಿಣಿಗೆ ಸುಟ್ಟ ಗಾಯಗಳಾಗಿದ್ದು, ಕೂಡಲೇ ಆಕೆಯನ್ನು ದೆಹಲಿಯ ಬವಾನಾ ಪ್ರದೇಶದಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಆಕೆಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆಕೆಯ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತೆ ಮತ್ತು ಆಕೆಯ ಪತಿ ದೆಹಲಿ ಪೊಲೀಸರಿಗೆ ವ್ಯತಿರಿಕ್ತ ಹೇಳಿಕೆಗಳನ್ನು ನೀಡಿರುವುದು ಕುತೂಹಲ ಮೂಡಿಸಿದೆ. ದೆಹಲಿ ಮಹಿಳಾ ಆಯೋಗ ಈ ಪ್ರಕರಣದಲ್ಲಿ ಆ ಗರ್ಭಿಣಿಯ ಪತಿ ಮತ್ತು ಅವರ ಕುಟುಂಬದ ಶಾಮೀಲಿದೆ ಎಂದು ಆರೋಪಿಸಿದೆ.

ಇದನ್ನೂ ಓದಿ: Yadagiri: ಅರಣ್ಯದಲ್ಲಿ ಹತ್ತಿದ್ದ ಬೆಂಕಿ ನಂದಿಸಲು ಹೋಗಿ ಬೆಂಕಿಗಾಹುತಿಯಾದ ಅರಣ್ಯ ವೀಕ್ಷಕ

ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರು 7 ತಿಂಗಳ ಗರ್ಭಿಣಿಯನ್ನು ಬವಾನಾದಲ್ಲಿ ಪೆಟ್ರೋಲ್ ಸುರಿದು ಆಕೆಯ ಪತಿ ಮತ್ತು ಅತ್ತೆ-ಮಾವ ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಿದ್ದಾರೆ. ಆ ಮಹಿಳೆಗೆ ಗಂಭೀರವಾದ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾವು ದೆಹಲಿ ಪೊಲೀಸರಿಗೆ ನೋಟಿಸ್ ನೀಡಿದ್ದೇವೆ. ಸಂತ್ರಸ್ತರಿಗೆ ಎಲ್ಲಾ ಸಹಾಯವನ್ನು ಒದಗಿಸಿದ್ದೇವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Mandya: ಮನೆಯಲ್ಲಿ ಮಲಗಿದ್ದ ಒಂಟಿ ಮಹಿಳೆಯ ಹತ್ಯೆ ಮಾಡಿ ಬೆಂಕಿ ಹಚ್ಚಿದ ಪಾಪಿಗಳು; ಬೆಚ್ಚಿಬಿದ್ದ ಗ್ರಾಮಸ್ಥರು

ಈ ಘಟನೆಯ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದು, ಖುಷ್ಬೂ ಎಂಬ ಮಹಿಳೆ 7 ತಿಂಗಳ ಗರ್ಭಿಣಿಯಾಗಿದ್ದು, ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಖಚಿತಪಡಿಸಿದ್ದಾರೆ. ಖುಷ್ಬೂ 2022ರ ಏಪ್ರಿಲ್ ತಿಂಗಳಲ್ಲಿ ವಿವಾಹವಾಗಿದ್ದರು. ಅವರು ಈಗ ಗರ್ಭಿಣಿಯಾಗಿದ್ದರು. ಮದುವೆ ಸಮಾರಂಭದಲ್ಲಿ ತಾವು ನೀಡಿದ್ದ ಆಭರಣಗಳನ್ನು ಹಿಂದಿರುಗಿಸಲು ಆಕೆಯ ಗಂಡನ ಮನೆಯವರು ಒತ್ತಾಯಿಸಿದ್ದರು. ಅದಕ್ಕೆ ಆಕೆ ಒಪ್ಪದಿದ್ದಾಗ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದರು ಎನ್ನಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ