Crime News: ಗುರುಗ್ರಾಮದಲ್ಲಿ ಭೀಕರ ಅಪಘಾತ; ಬಸ್​ ಚಾಲಕ ಸಾವು, 15 ಜನರಿಗೆ ಗಾಯ

ಈ ಅಪಘಾತದಲ್ಲಿ 25 ವರ್ಷದ ಬಸ್ ಚಾಲಕ ಪ್ರವೀಣ್ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಟ್ರಕ್ ಚಾಲಕ ಪರಾರಿಯಾಗಿದ್ದಾನೆ

Crime News: ಗುರುಗ್ರಾಮದಲ್ಲಿ ಭೀಕರ ಅಪಘಾತ; ಬಸ್​ ಚಾಲಕ ಸಾವು, 15 ಜನರಿಗೆ ಗಾಯ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Oct 27, 2022 | 3:28 PM

ಗುರುಗ್ರಾಮ: ದೆಹಲಿ-ಜೈಪುರ ಹೆದ್ದಾರಿಯಲ್ಲಿ ಇಂದು ಮುಂಜಾನೆ ನಡೆದ ಭೀಕರ ಅಪಘಾತದಲ್ಲಿ (Road Accident) ಬಸ್ ಚಾಲಕ ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆ 5.30ರ ಸುಮಾರಿಗೆ ರಾಜಸ್ಥಾನದ ರಸ್ತೆಯಲ್ಲಿ ಸಾಗುತ್ತಿದ್ದ ಖಾಸಗಿ ಬಸ್ ಬಿನೋಲಾ ಗ್ರಾಮದ ಬಳಿ ಟ್ರಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದರಿಂದ ಈ ಅಪಘಾತ ಸಂಭವಿಸಿದೆ.

ಈ ಘಟನೆಯಲ್ಲಿ 25 ವರ್ಷದ ಬಸ್ ಚಾಲಕ ಪ್ರವೀಣ್ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಟ್ರಕ್ ಚಾಲಕ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಟ್ರಕ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದ್ದರಿಂದ ಬಸ್ ಆ ಟ್ರಕ್​ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಭೀಕರ ಬಸ್ ಅಪಘಾತ; ದೀಪಾವಳಿಗೆ ಊರಿಗೆ ಹೋಗುತ್ತಿದ್ದ 14 ಜನ ಸಾವು

ಸುಮಾರು 30 ಪ್ರಯಾಣಿಕರನ್ನು ಹೊತ್ತ ಬಸ್ ಜೈಪುರದಿಂದ ದೆಹಲಿಗೆ ಹೊರಟಿತ್ತು ಎಂದು ಪೊಲೀಸರು ಹೇಳಿದ್ದಾರೆ. ಇನ್‌ಸ್ಪೆಕ್ಟರ್ ಪ್ರವೀಣ್ ಕುಮಾರ್ ನೇತೃತ್ವದ ಪೊಲೀಸ್ ತಂಡ, ಬಿಲಾಸ್‌ಪುರ ಪೊಲೀಸ್ ಠಾಣೆಯ ಎಸ್‌ಎಚ್‌ಒ ಮತ್ತು ಅಗ್ನಿಶಾಮಕ ದಳದ ತಂಡವು ಗಾಯಾಳುಗಳನ್ನು ರಕ್ಷಿಸಿದೆ. ನಂತರ 2 ವಾಹನಗಳ ನಡುವೆ ಸಿಲುಕಿದ್ದ ಬಸ್ ಚಾಲಕನನ್ನು ಹೊರತೆಗೆಯಲಾಗಿದೆ.

ಅಪಘಾತದಲ್ಲಿ ಗಾಯಗೊಂಡವರಲ್ಲಿ ನಾಲ್ವರನ್ನು ಪ್ರಥಮ ಚಿಕಿತ್ಸೆಯ ನಂತರ ಈಗಾಗಲೇ ಡಿಸ್ಚಾರ್ಜ್ ಮಾಡಲಾಗಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಸ್ ಕಂಡಕ್ಟರ್‌ನ ದೂರಿನ ಮೇರೆಗೆ ಟ್ರಕ್ ಚಾಲಕನ ವಿರುದ್ಧ ಬಿಲಾಸ್‌ಪುರ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 279 (ಅಪವೇಗದ ಚಾಲನೆ), 304 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ