Crime News: ಸಿನಿಮಾದಲ್ಲಿ ಅವಕಾಶ ನೀಡುವುದಾಗಿ ನಂಬಿಸಿ ಸೆಕ್ಸ್​ ದಂಧೆ; ನಿರ್ಮಾಪಕ ಸೇರಿ ಮೂವರ ಬಂಧನ

ಸಿನಿಮಾಗಳಲ್ಲಿ ನಟಿಸುವ ಅವಕಾಶ ನೀಡುತ್ತೇನೆಂದು ನಂಬಿಸುತ್ತಿದ್ದ ನಿರ್ಮಾಪಕ ಆಡಿಷನ್​ಗೆ ಬಂದ ಯುವತಿಯರನ್ನು ಸೆಕ್ಸ್​ ದಂಧೆಗೆ ಬಳಸಿಕೊಳ್ಳುತ್ತಿದ್ದ ಎಂಬ ಆತಂಕಕಾರಿ ವಿಷಯ ಮಹಾರಾಷ್ಟ್ರದ ಥಾಣೆಯಲ್ಲಿ ಬೆಳಕಿಗೆ ಬಂದಿದೆ.

Crime News: ಸಿನಿಮಾದಲ್ಲಿ ಅವಕಾಶ ನೀಡುವುದಾಗಿ ನಂಬಿಸಿ ಸೆಕ್ಸ್​ ದಂಧೆ; ನಿರ್ಮಾಪಕ ಸೇರಿ ಮೂವರ ಬಂಧನ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jul 21, 2021 | 6:23 PM

ಥಾಣೆ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಯ ಗಂಡ ರಾಜ್ ಕುಂದ್ರಾ (Shilpa Shetty Husband Raj Kundra) ಅವರನ್ನು ಪೋರ್ನೋಗ್ರಫಿ ಕೇಸ್​ನಲ್ಲಿ ಬಂಧಿಸಿದ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ಮತ್ತೊಂದು ಸೆಕ್ಸ್​ ದಂಧೆ (Sex Racket) ಪ್ರಕರಣ ಬೆಳಕಿಗೆ ಬಂದಿದೆ. ಥಾಣೆ ಜಿಲ್ಲೆಯ ಮಿರಾ ಪ್ರದೇಶದಲ್ಲಿ ಸೆಕ್ಸ್​ ರಾಕೆಟ್ ನಡೆಸುತ್ತಿದ್ದ ಆರೋಪದಲ್ಲಿ ಸಿನಿಮಾ ನಿರ್ಮಾಪಕ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಸಿನಿಮಾಗಳಲ್ಲಿ ನಟಿಸುವ ಅವಕಾಶ ನೀಡುತ್ತೇನೆಂದು ನಂಬಿಸುತ್ತಿದ್ದ ನಿರ್ಮಾಪಕ (Film Producer) ಆಡಿಷನ್​ಗೆ ಬಂದ ಯುವತಿಯರನ್ನು ಸೆಕ್ಸ್​ ದಂಧೆಗೆ ಬಳಸಿಕೊಳ್ಳುತ್ತಿದ್ದ ಎಂಬ ಆತಂಕಕಾರಿ ವಿಷಯ ಬೆಳಕಿಗೆ ಬಂದಿದೆ.

ಮಿರಾ ರಸ್ತೆಯಲ್ಲಿರುವ ಹೌಸಿಂಗ್ ಕಾಂಪ್ಲೆಕ್ಸ್​ನಲ್ಲಿ ಹಲವು ವರ್ಷಗಳಿಂದ ಈ ಸೆಕ್ಸ್​ ದಂಧೆ ನಡೆಸಲಾಗುತ್ತಿತ್ತು. ಸಿನಿಮಾಗಳಲ್ಲಿ ನಟಿಸಲು ಅವಕಾಶ ಕೇಳಿಕೊಂಡು ಬರುವ ಯುವತಿಯರನ್ನು ಈ ದಂಧೆಗೆ ಬಳಸಿಕೊಳ್ಳಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಕನ್ನಯ್ಯಲಾಲ್ ಬಾಲಚಂದಾನಿ ಎಂಬ ನಿರ್ಮಾಪಕನಿಗೆ ವನಿತಾ ಇಂಗ್ಲೆ ಎಂಬ ಮಹಿಳೆ ಯುವತಿಯರನ್ನು ಪೂರೈಕೆ ಮಾಡುತ್ತಿದ್ದಳು. ಆ ಯುವತಿಯರನ್ನು ಸೆಕ್ಸ್​ ದಂಧೆಗೆ ಬಳಸಿಕೊಳ್ಳಲಾಗುತ್ತಿತ್ತು.

ಸೆಕ್ಸ್​ ದಂಧೆ ಬಯಲಾಗಿದ್ದು ಹೇಗೆ?: ಮಿರಾ ರಸ್ತೆಯ ಸುತ್ತಮುತ್ತ ಸೆಕ್ಸ್​ ದಂಧೆ ನಡೆಸಲಾಗುತ್ತಿದೆ ಎಂಬ ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಆರೋಪಿಗಳನ್ನು ಹಿಡಿಯಲು ಬಲೆ ಬೀಸಿದ್ದರು. ತಾವೇ ಒಬ್ಬ ವ್ಯಕ್ತಿಯನ್ನು ಗ್ರಾಹಕನ ರೀತಿಯಲ್ಲಿ ಆ ದಂಧೆ ನಡೆಯುವ ಸ್ಥಳಕ್ಕೆ ಕಳುಹಿಸಿದ್ದರು. ಬಳಿಕ ರೇಡ್ ಮಾಡಿ ಅಲ್ಲಿದ್ದ ಮೂವರು ಕಿಂಗ್​ಪಿನ್​ಗಳನ್ನು ಬಂಧಿಸಿದ್ದಾರೆ. ಹಾಗೇ, ಅಲ್ಲಿದ್ದ ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದೆ.

ಆ ನಿರ್ಮಾಪಕ ಯಾರೆಂಬ ಬಗ್ಗೆ ಇನ್ನೂ ಸಂಪೂರ್ಣ ಮಾಹಿತಿಯನ್ನು ಪೊಲೀಸರು ನೀಡಿಲ್ಲ. ಈ ಸೆಕ್ಸ್​ ದಂಧೆಯಲ್ಲಿ ಇನ್ನೂ ಯಾವೆಲ್ಲ ಪ್ರಭಾವಿಗಳ ಕೈವಾಡವಿದೆ ಎಂಬ ಬಗ್ಗೆ ತನಿಖೆಯನ್ನು ಮುಂದುವರೆಸಲಾಗಿದೆ.

ಇದನ್ನೂ ಓದಿ: Raj Kundra: ರಾಜಕಾರಣಿಗಳು ಅಶ್ಲೀಲ ವಿಡಿಯೋ ನೋಡುತ್ತಿದ್ದಾರೆ; ಬಂಧನದ ಬೆನ್ನಲ್ಲೇ ರಾಜ್ ಕುಂದ್ರಾ ಹಳೇ ಟ್ವೀಟ್​ಗಳು ವೈರಲ್

Raj Kundra: ಪತಿ ರಾಜ್​ ಕುಂದ್ರಾರ ನೀಲಿ ಚಿತ್ರ ದಂಧೆಯಲ್ಲಿ ಶಿಲ್ಪಾ ಶೆಟ್ಟಿಯೂ ಭಾಗಿ?!-ಮೌನ ಮುರಿದ ಮುಂಬೈ ಪೊಲೀಸರು

(Film Producer and Two Others Held for Running Sex Racket in Thane near Mumbai)

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ