Crime News: ತ್ರಿಶೂಲದಿಂದ ಇರಿದು ಅರ್ಚಕನ ಬರ್ಬರ ಹತ್ಯೆ; ದೇವಸ್ಥಾನದಲ್ಲಿ ಅರೆ ಸುಟ್ಟ ಶವ ಪತ್ತೆ

Murder News Today: ತ್ರಿಶೂಲದಿಂದ ತಿವಿದು ಅರ್ಚಕನನ್ನು ಕೊಲೆ ಮಾಡಲಾಗಿದ್ದು, ಬಳಿಕ ಆ ಮೃತದೇಹಕ್ಕೆ ಬೆಂಕಿ ಹಚ್ಚಿದ್ದಾರೆ. ದೇವಸ್ಥಾನದ ಆವರಣದಲ್ಲಿ ಅರ್ಚಕನ ಶವ ಪತ್ತೆಯಾಗಿದೆ.

Crime News: ತ್ರಿಶೂಲದಿಂದ ಇರಿದು ಅರ್ಚಕನ ಬರ್ಬರ ಹತ್ಯೆ; ದೇವಸ್ಥಾನದಲ್ಲಿ ಅರೆ ಸುಟ್ಟ ಶವ ಪತ್ತೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Aug 20, 2021 | 8:50 PM

ಪಲ್ವಾಲ್: ದೇವಸ್ಥಾನದ ಅರ್ಚಕರೊಬ್ಬರನ್ನು ತ್ರಿಶೂಲದಿಂದ ಇರಿದು, ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹರಿಯಾಣ ರಾಜ್ಯದ ಪಲ್ವಾಲ್ ಜಿಲ್ಲೆಯಲ್ಲಿ ನಡೆದಿದೆ. ಅರ್ಚಕರನ್ನು ಕೊಲೆ ಮಾಡಿ, ಅವರ ಮೃತದೇಹಕ್ಕೆ ಬೆಂಕಿ ಹಚ್ಚಲಾಗಿದ್ದು, ದೇಗುಲದ ಆವರಣದಲ್ಲಿ ಅವರ ಅರೆ ಸುಟ್ಟ ಶವ ಪತ್ತೆಯಾಗಿದೆ. ಈ ಭಯಾನಕ ಘಟನೆಗೆ ಇಡೀ ಹರಿಯಾಣವೇ ಬೆಚ್ಚಿ ಬಿದ್ದಿದೆ.

ಪಲ್ವಾಲ್ ಜಿಲ್ಲೆಯ ಬಂಚಾರಿ ಗ್ರಾಮದಲ್ಲಿ ಗುರುವಾರ ಮುಂಜಾನೆ 7 ಗಂಟೆಗೆ ಈ ದುರ್ಘಟನೆ ನಡೆದಿದೆ. ಅರ್ಚಕನನ್ನು ಕೊಲೆ ಮಾಡಿ, ಮೃತದೇಹವನ್ನು ಸುಟ್ಟುಹಾಕಲು ಪ್ರಯತ್ನಿಸಿದ ಹಂತಕರು ಶವಕ್ಕೆ ದೇವಾಲಯದ ಆವರಣದಲ್ಲಿ ಬೆಂಕಿ ಹಚ್ಚಿದ್ದಾರೆ. ಆದರೆ, ಆ ಹೆಣ ಅರೆಬರೆ ಸುಟ್ಟು ಹೋಗಿದ್ದು, ಬೆಳಗ್ಗೆ ಗ್ರಾಮಸ್ಥರು ಪೊಲೀಸರಿಗೆ ಈ ವಿಷಯ ತಿಳಿಸಿದ್ದಾರೆ.

ವಿಷಯ ತಿಳಿದ ಕೂಡಲೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಮೃತಪಟ್ಟ ಅರ್ಚಕರನ್ನು ಚರಣಗಿರಿ ಮಹಾರಾಜ್ ಎಂದು ಗುರುತಿಸಲಾಗಿದೆ. ಬೆಡ್​ಶೀಟ್​ನಲ್ಲಿ ಸುತ್ತಲಾಗಿದ್ದ ಅರ್ಚಕನ ಶವಕ್ಕೆ ಬೆಂಕಿ ಹಚ್ಚಲಾಗಿದೆ. ಅರ್ಚಕನ ಎದೆ ಭಾಗಕ್ಕೆ ತ್ರಿಶೂಲದಿಂದ ಇರಿದಿರುವ ಗುರುತುಗಳು ಪತ್ತೆಯಾಗಿವೆ. ಆ ಮೃತದೇಹವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

20 ವರ್ಷಗಳಿಂದ ಆ ಗ್ರಾಮದಲ್ಲಿ ವಾಸವಾಗಿದ್ದ ಚರಣಗಿರಿ ಮಹಾರಾಜ್ ಅವರನ್ನು ಭೇಟಿಯಾಗಲು ಬುಧವಾರ ಸಂಜೆ ಅವರ ಸ್ನೇಹಿತ ಮೋನಿ ಮಹಾರಾಜ್ ಬಂದಿದ್ದರು. ಗೆಳೆಯ ಬಂದು ಮಾತನಾಡಿ ಹೋದ ಮರುದಿನವೇ ಚರಣಗಿರಿ ಮಹಾರಾಜ್ ಕೊಲೆಯಾಗಿದೆ. ಈ ಕೊಲೆ ನಡೆದ ಬಳಿಕ ಮೋನಿ ಮಹಾರಾಜ್ ನಾಪತ್ತೆಯಾಗಿದ್ದಾನೆ. ಆತನೇ ಈ ಕೊಲೆ ಮಾಡಿಸಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಗುರುವಾರ ಮಧ್ಯಾಹ್ನದ ವೇಳೆ ಗ್ರಾಮಸ್ಥರು ದೇವಸ್ಥಾನಕ್ಕೆ ಬಂದಾಗ ಅಲ್ಲಿ ರಕ್ತಸಿಕ್ತವಾಗಿ ಬಿದ್ದಿದ್ದ ಅರ್ಚಕರ ಮೃತದೇಹ ಕಂಡುಬಂದಿದೆ.

ಇದನ್ನೂ ಓದಿ: Crime News: ಹಣಕ್ಕಾಗಿ ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಿದ ತಂದೆ-ತಾಯಿ; ಹೆತ್ತವರೇ ವಿಲನ್ ಆದ ಕತೆಯಿದು

Murder: ಗೆಳೆಯನನ್ನೇ ಬರ್ಬರವಾಗಿ ಕೊಂದು, ರೂಮ್ ಕ್ಲೀನ್ ಮಾಡಿ ಮಲಗಿದ ಕೊಲೆಗಾರ

(Crime News: Haryana Priest Murdered With Trishul His Semi burnt Dead body Found Inside the Temple)

Published On - 8:49 pm, Fri, 20 August 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ