Crime News: ಹಣಕ್ಕಾಗಿ ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಿದ ತಂದೆ-ತಾಯಿ; ಹೆತ್ತವರೇ ವಿಲನ್ ಆದ ಕತೆಯಿದು

ಹಿಮಾಚಲ ಪ್ರದೇಶದಲ್ಲಿ ಈ ಪ್ರಕರಣ ನಡೆದಿದ್ದು, ಹಣಕ್ಕಾಗಿ ಅಪ್ಪ, ಅಮ್ಮ, ಅಣ್ಣ ಸೇರಿ ಯುವತಿಯನ್ನು ವೇಶ್ಯಾವಾಟಿಕೆಗೆ ದೂಡಿದ್ದಾರೆ.

Crime News: ಹಣಕ್ಕಾಗಿ ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಿದ ತಂದೆ-ತಾಯಿ; ಹೆತ್ತವರೇ ವಿಲನ್ ಆದ ಕತೆಯಿದು
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Aug 19, 2021 | 7:17 PM

ನವದೆಹಲಿ: ಕೆಟ್ಟ ಮಕ್ಕಳಿರಬಹುದು ಆದರೆ ಕೆಟ್ಟ ತಂದೆ-ತಾಯಿ ಇರಲಾರರು ಎಂಬ ಮಾತೊಂದಿದೆ. ಈ ಮಾತು ಸುಳ್ಳು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ದುಡ್ಡಿಗಾಗಿ ಹೆತ್ತವರೇ ತಮ್ಮ ಮಗಳನ್ನು ವೇಶ್ಯಾವಾಟಿಕೆಗೆ ತಳ್ಳಿದ ನೀಚ ಕೃತ್ಯ ಬೆಳಕಿಗೆ ಬಂದಿದೆ. ಹಿಮಾಚಲ ಪ್ರದೇಶದಲ್ಲಿ ಈ ಪ್ರಕರಣ ನಡೆದಿದ್ದು, ಹಣಕ್ಕಾಗಿ ಅಪ್ಪ, ಅಮ್ಮ, ಅಣ್ಣ ಸೇರಿ ಯುವತಿಯನ್ನು ವೇಶ್ಯಾವಾಟಿಕೆಗೆ ದೂಡಿದ್ದಾರೆ. ತನಗೆ ಗೌರವದಿಂದ ಬದುಕಲು ಬಿಡಿ ಎಂದು ಬೇಡಿಕೊಂಡರೂ ಕೇಳದ ಅವರು ಆಕೆಗೆ ಹೊಡೆದು, ಈ ದಂಧೆಯಲ್ಲಿ ತೊಡಗುವಂತೆ ಮಾಡಿದ್ದಾರೆ.

ಕೆಲವು ಸಮಯವಾದ ಬಳಿಕ ಆ ಯುವತಿಗೆ ಅನಾರೋಗ್ಯ ಉಂಟಾಗಿದ್ದು, ಆಕೆಯಿಂದ ಇನ್ನು ತಮಗೆ ಉಪಯೋಗ ಇಲ್ಲವೆಂದು ತಿಳಿದ ಪೋಷಕರು ಆಕೆಗೆ ಚಿಕಿತ್ಸೆ ಕೂಡ ಕೊಡಿಸದೆ ದೂರದ ಸಂಬಂಧಿಯ ಮನೆಯಲ್ಲಿ ಬಿಟ್ಟು ಹೋಗಿದ್ದಾರೆ. ಬಳಿಕ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಆಕೆಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.

20 ವರ್ಷದ ಯುವತಿ ತನ್ನ ಹೆತ್ತವರಿಂದ ತನಗೆ ಆಗಿರುವ ಅನ್ಯಾಯದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾಳೆ. ಆಸ್ಪತ್ರೆಯಲ್ಲೇ ಆಕೆಯ ಹೇಳಿಕೆಗಳನ್ನು ದಾಖಲಿಸಿಕೊಂಡಿರುವ ಪೊಲೀಸರು ಆಕೆಯ ಅಪ್ಪ-ಅಮ್ಮನ ವಿರುದ್ಧ ಕೇಸ್ ದಾಖಲಿಸಿಕೊಂಡಿದ್ದಾರೆ. ನನ್ನ ಅಪ್ಪ, ಅಮ್ಮ, ಅಣ್ಣ ನನ್ನನ್ನು ಲೈಂಗಿಕ ಕಾರ್ಯಕರ್ತೆಯಾಗುವಂತೆ ಒತ್ತಾಯಿಸಿದರು. ನನ್ನ ಇಬ್ಬರು ಅಕ್ಕಂದಿರು ಕೂಡ ಇದಕ್ಕೆ ಬೆಂಬಲ ನೀಡಿದ್ದರು. ನಾನು ಅತ್ತು, ಜಗಳವಾಡಿದರೂ ಕೇಳದೆ ವೇಶ್ಯಾವಾಟಿಕೆಗೆ ತಳ್ಳಿದರು. ಅವರಿಂದ ನನ್ನ ಜೀವನವೇ ಹಾಳಾಯಿತು ಎಂದು ಆಕೆ ದೂರು ನೀಡಿದ್ದಾಳೆ.

ಇದನ್ನೂ ಓದಿ: Crime News: ಸುಪ್ರೀಂ ಕೋರ್ಟ್ ಎದುರೇ ಬೆಂಕಿ ಹಚ್ಚಿಕೊಂಡ ದಂಪತಿ; ಪ್ರಾಣಾಪಾಯದಿಂದ ಪಾರು

Crime News: ಪ್ರೀತಿಗಾಗಿ ಗೆಳೆಯನ ತಲೆಯನ್ನೇ ಕತ್ತರಿಸಿದ 17 ವರ್ಷದ ಯುವಕ; ತ್ರಿಕೋನ ಪ್ರೇಮಕತೆಯ ದುರಂತ ಅಂತ್ಯ

(Crime News: Himachal Girl Forced Into Prostitution By Parents and Elder Brother Shocking Story )

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ