Crime News: ಹೈದರಾಬಾದ್ ಶಾಲೆಯಲ್ಲಿ 4 ವರ್ಷದ ಬಾಲಕಿ ಮೇಲೆ ಪ್ರಿನ್ಸಿಪಾಲ್ ಚಾಲಕನಿಂದ ಅತ್ಯಾಚಾರ!

ಹೈದರಾಬಾದ್​ನ ಖಾಸಗಿ ಶಾಲೆಯೊಂದರ ಕೊಠಡಿಯಲ್ಲೇ ಈ ಘಟನೆ ನಡೆದಿದ್ದು, ಆ 4 ವರ್ಷದ ಬಾಲಕಿ ಯುಕೆಜಿ ವಿದ್ಯಾರ್ಥಿನಿಯಾಗಿದ್ದಳು.

Crime News: ಹೈದರಾಬಾದ್ ಶಾಲೆಯಲ್ಲಿ 4 ವರ್ಷದ ಬಾಲಕಿ ಮೇಲೆ ಪ್ರಿನ್ಸಿಪಾಲ್ ಚಾಲಕನಿಂದ ಅತ್ಯಾಚಾರ!
ಸಾಂದರ್ಭಿಕ ಚಿತ್ರ
Follow us
| Updated By: ಸುಷ್ಮಾ ಚಕ್ರೆ

Updated on: Oct 19, 2022 | 10:31 AM

ಹೈದರಾಬಾದ್: ಭಾರತದಲ್ಲಿ ಚಿಕ್ಕ ಮಕ್ಕಳ ಮೇಲೆ ಅತ್ಯಾಚಾರ (Rape) ಪ್ರಕರಣಗಳು ಕಡಿಮೆಯಾಗಿಲ್ಲ. ಪಕ್ಕದ ಹೈದರಾಬಾದ್‌ನ (Hyderabad) ಬಂಜಾರ ಹಿಲ್ಸ್ ಪ್ರದೇಶದಲ್ಲಿ ಕೇವಲ 4 ವರ್ಷದ ಬಾಲಕಿಯ ಮೇಲೆ ಆಕೆಯ ಶಾಲೆಯ ಪ್ರಿನ್ಸಿಪಾಲ್ ಅವರ ಚಾಲಕ ಅತ್ಯಾಚಾರ ಎಸಗಿರುವ ವಿಷಯ ಬೆಳಕಿಗೆ ಬಂದಿದ್ದು, ಇದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಹೈದರಾಬಾದ್​ನ ಖಾಸಗಿ ಶಾಲೆಯೊಂದರ ಕೊಠಡಿಯಲ್ಲೇ ಈ ಘಟನೆ ನಡೆದಿದ್ದು, ಆ 4 ವರ್ಷದ ಬಾಲಕಿ ಯುಕೆಜಿ ವಿದ್ಯಾರ್ಥಿನಿಯಾಗಿದ್ದಳು.

ಆ ಶಾಲೆಯ ಪ್ರಿನ್ಸಿಪಾಲ್ ಕಾರಿನ ಚಾಲಕನಾಗಿದ್ದ ರಜಿನಿಕುಮಾರ್ ಎಂಬಾತ ಕಳೆದ 2 ತಿಂಗಳಿನಿಂದ ಆ ಪುಟ್ಟ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ಎನ್ನಲಾಗಿದೆ. ಆಕೆಯ ಪೋಷಕರು ತಮ್ಮ ಮಗಳ ವರ್ತನೆಯಲ್ಲಿ ಬದಲಾವಣೆಯಾಗಿದ್ದನ್ನು ಕಂಡು ಅನುಮಾನ ಪಟ್ಟಿದ್ದರು. ಅಲ್ಲದೆ, ಸದಾ ಆಟವಾಡಿಕೊಂಡು ಇರುತ್ತಿದ್ದ ಆ ಬಾಲಕಿ ಇತ್ತೀಚೆಗೆ ಬಹಳ ಖಿನ್ನತೆಗೆ ಒಳಗಾಗಿದ್ದಳು, ಆಗಾಗ ಸುಮ್ಮನೆ ಅಳುತ್ತಿದ್ದಳು.

ಈ ಬಗ್ಗೆ ಅವರು ತಮ್ಮ ಮಗಳನ್ನು ವಿಚಾರಿಸಿದಾಗ ಆಕೆ ಆ ಚಾಲಕನ ಬಗ್ಗೆ ಹೇಳಿದ್ದಾಳೆ. ಆ ಪ್ರಿನ್ಸಿಪಾಲ್ ಕಾರಿನ ಚಾಲಕ ಸದಾ ಕ್ಲಾಸ್ ರೂಮ್‌ಗೆ ಬರುತ್ತಲೇ ಇರುತ್ತಿದ್ದ ಮತ್ತು ಮಕ್ಕಳಿಗೆ ತೊಂದರೆ ನೀಡುತ್ತಿದ್ದ. ಅನೇಕ ಮಕ್ಕಳು ಅವನನ್ನು ಕಂಡರೆ ಹೆದರುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: Crime News: ಮಹಿಳೆ ಕುತ್ತಿಗೆಗೆ ಚಾಕು ಇಟ್ಟು ಅತ್ಯಾಚಾರಕ್ಕೆ ಯತ್ನಿಸಿದ್ದ ವಿಕೃತ ಕಾಮಿಯ ಬಂಧನ

ಹಿರಿಯ ಪೊಲೀಸ್ ಅಧಿಕಾರಿ ಜೋಯಲ್ ಡೇವಿಸ್ ಪ್ರಕಾರ, ಈ ಪ್ರಕರಣದಲ್ಲಿ ಕಾರು ಚಾಲಕನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಆರೋಪಿಯನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಮಾತನಾಡಿರುವ ಅತ್ಯಾಚಾರಕ್ಕೊಳಗಾದ ಬಾಲಕಿಯ ತಾಯಿ, ನನ್ನ ಮಗಳು ಖಿನ್ನತೆಗೆ ಒಳಗಾಗಿದ್ದಳು. ಅವಳು ಯಾರೊಂದಿಗೂ ಹೆಚ್ಚು ಮಾತನಾಡುತ್ತಿರಲಿಲ್ಲ. ಆಕೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಕುಸಿದುಹೋಗಿದ್ದಳು. ನನ್ನ ಮಗಳ ಮೇಲೆ ಅತ್ಯಾಚಾರ ನಡೆಸಿದವನನ್ನು ಸಾರ್ವಜನಿಕವಾಗಿ ಬೆತ್ತಲೆಯಾಗಿ ಹೊಡೆಯಬೇಕು. ಕೂಡಲೇ ಪ್ರಾಂಶುಪಾಲರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ನಾವು ಶಾಲೆಗೆ ಪಾವತಿಸಿದ ದೇಣಿಗೆಯನ್ನು ಹಿಂತಿರುಗಿಸಬೇಕು. ನಾವು ನಮ್ಮ ಮಗಳನ್ನು ಮತ್ತೆ ಆ ಶಾಲೆಗೆ ಕಳುಹಿಸುವುದಿಲ್ಲ. ಇದು ಪ್ರತಿಷ್ಠಿತ ಶಾಲೆಯಾಗಿರಬಹುದು, ಆದರೆ ಪ್ರಿನ್ಸಿಪಾಲ್ ಸರಿಯಿಲ್ಲ. ಅವರ ಸುತ್ತಲೂ ಇರುವವರ ನಡತೆ ಸರಿಯಿಲ್ಲ ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್