ನವದೆಹಲಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಆರೋಪದ ಮೇಲೆ ಪದ್ಮ ಪ್ರಶಸ್ತಿ ಪುರಸ್ಕೃತ ಉದ್ಧವ್ ಭರಾಲಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಕೇಸ್ ದಾಖಲಿಸಲಾಗಿದೆ. ಆ ಬಾಲಕಿಯನ್ನು ಕೆಲವು ದಿನಗಳ ಹಿಂದೆ ಅವರು ದತ್ತು ಪಡೆದಿದ್ದರು. ತಾನೇ ದತ್ತು ಪಡೆದಿದ್ದ ಬಾಲಕಿಯ ಮೇಲೆ ಉದ್ಧವ್ ಭರಾಲಿ ಅತ್ಯಾಚಾರ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಡಿಸೆಂಬರ್ 17ರಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ (ಡಿಎಸ್ಎಲ್ಎ) ಮಾಹಿತಿ ಪಡೆದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ದೂರಿನ ಆಧಾರದ ಮೇಲೆ, ಅಸ್ಸಾಂ ಪೊಲೀಸರು ಮರುದಿನವೇ ಪದ್ಮ ಪ್ರಶಸ್ತಿ ಪುರಸ್ಕೃತ ವ್ಯಕ್ತಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿದೆ.
“ಇದು ಸಬ್‌ಜುಡಿಸ್ ಆಗಿರುವುದರಿಂದ ನಾವು ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ, ಆದರೆ ತನಿಖೆ ನಡೆಯುತ್ತಿದೆ” ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎಫ್‌ಐಆರ್ ನಂತರ, ಆ ವ್ಯಕ್ತಿ ಗುವಾಹಟಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ, ಬಂಧನಕ್ಕೆ ಮುಂಚಿತವಾಗಿ ಜಾಮೀನು ಕೋರಿದ್ದಾರೆ. ಡಿಸೆಂಬರ್ 28ರಂದು ಅವರಿಗೆ ಮಧ್ಯಂತರ ಜಾಮೀನು ನೀಡಲಾಗಿದೆ.
ನ್ಯಾಯಮೂರ್ತಿ ಅರುಣ್ ದೇವ್ ಚೌಧರಿ ನೀಡಿರುವ ತೀರ್ಪಿನಲ್ಲಿ “ಅರ್ಜಿದಾರರ ಪೂರ್ವಾಪರಗಳು, ಅವರ ಪ್ರತಿಷ್ಠೆಯನ್ನು ಹಾಳು ಮಾಡಲು ತ್ವರಿತವಾಗಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂಬ ಅವರ ಆರೋಪದ ಆಧಾರದಡಿ ಜಿಲ್ಲೆಯ ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯುಸಿ) ವಿರುದ್ಧದ ಪ್ರತಿ ಅರ್ಜಿಯನ್ನು ಪರಿಗಣಿಸಿ ಮಧ್ಯಂತರ ಜಾಮೀನು ನೀಡಲಾಯಿತು ಎಂದಿದ್ದಾರೆ.
ಎಫ್‌ಐಆರ್ ಸಂತ್ರಸ್ತೆಯ ಯಾವುದೇ ನಿರ್ದಿಷ್ಟ ಹೇಳಿಕೆಯನ್ನು ಬಹಿರಂಗಪಡಿಸಿಲ್ಲ ಎಂದು ಗಮನಿಸಿದ ನ್ಯಾಯಾಲಯವು ನ್ಯಾಯದ ಹಿತಾಸಕ್ತಿಯಲ್ಲಿ ಮಧ್ಯಂತರ ಆದೇಶವನ್ನು ನೀಡಲಾಗುವುದು ಎಂದು ಹೇಳಿದೆ. 7 ದಿನಗಳೊಳಗೆ ಪೊಲೀಸರ ಮುಂದೆ ಹಾಜರಾಗುವಂತೆ ಅರ್ಜಿದಾರರಿಗೆ ಸೂಚಿಸಿದೆ. ಆರೋಪಿಯನ್ನು ಅವರ ಮುಂದೆ ಹಾಜರುಪಡಿಸಲಾಗಿದ್ದು, ಆತನ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸದ್ಯಕ್ಕೆ ಸಂತ್ರಸ್ತೆ ಪ್ರಸ್ತುತ ವಿಶೇಷ ಪೊಲೀಸ್ ರಕ್ಷಣೆಯಲ್ಲಿ ಮಕ್ಕಳ ಆರೈಕೆ ಕೇಂದ್ರದಲ್ಲಿದ್ದಾರೆ.
ಇದನ್ನೂ ಓದಿ: ಆಟವಾಡಿಕೊಂಡಿದ್ದ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಂದು, ಶವ ಬಚ್ಚಿಟ್ಟ ಕಾಮುಕರು
15 ವರ್ಷದ ಬಾಲಕಿಯನ್ನು ಮದುವೆಯಾಗಿ ಅತ್ಯಾಚಾರ; ಮಗು ಹುಟ್ಟಿದ ಮೇಲೆ ಬಯಲಾಯ್ತು ಸತ್ಯ