ಸಾಮೂಹಿಕ ಅತ್ಯಾಚಾರ ನಡೆಸಿ 13 ವರ್ಷದ ಬಾಲಕಿಯ ಕೊಲೆ; ಹರಿದ್ವಾರ ಹೆದ್ದಾರಿಯಲ್ಲಿ ಶವ ಪತ್ತೆ

|

Updated on: Jun 26, 2024 | 8:14 PM

Crime News: 13 ವರ್ಷದ ಬಾಲಕಿಯೊಬ್ಬಳ ಮೇಲೆ ಕೆಲವು ದುಷ್ಟರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಅತ್ಯಾಚಾರ ನಡೆಸಿದ್ದ ಪ್ರಮುಖ ಆರೋಪಿ ಆದಿತ್ಯರಾಜ್ ಸೈನಿ ಸ್ಥಳೀಯ ಬಿಜೆಪಿ ಒಬಿಸಿ ಮೋರ್ಚಾ ಸದಸ್ಯನಾಗಿದ್ದ. ರಾಜ್ಯ ಬಿಜೆಪಿ ಈಗಾಗಲೇ ಆತನನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿದೆ.

ಸಾಮೂಹಿಕ ಅತ್ಯಾಚಾರ ನಡೆಸಿ 13 ವರ್ಷದ ಬಾಲಕಿಯ ಕೊಲೆ; ಹರಿದ್ವಾರ ಹೆದ್ದಾರಿಯಲ್ಲಿ ಶವ ಪತ್ತೆ
ಸಾಂದರ್ಭಿಕ ಚಿತ್ರ
Follow us on

ಹರಿದ್ವಾರ: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ 13 ವರ್ಷದ ಬಾಲಕಿಯೊಬ್ಬಳು ಹರಿದ್ವಾರದ (Haridwar)  ಹೆದ್ದಾರಿಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಸ್ಥಳೀಯ ಬಿಜೆಪಿ ಕಾರ್ಯಕರ್ತ ಮತ್ತು ಆತನ ಸಹಚರರು ಆ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ (Gang Rape) ನಡೆಸಿದ ನಂತರ ಹತ್ಯೆ (Murder) ಮಾಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಮಂಗಳವಾರ ಬೆಳಗ್ಗೆ ಬಹದ್ರಾಬಾದ್ ಪ್ರದೇಶದ ಹೆದ್ದಾರಿಯಲ್ಲಿ ಆ ಬಾಲಕಿಯ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣದ ಪ್ರಮುಖ ಆರೋಪಿ ಆದಿತ್ಯರಾಜ್ ಸೈನಿ ಸ್ಥಳೀಯ ಬಿಜೆಪಿ ಒಬಿಸಿ ಮೋರ್ಚಾ ಸದಸ್ಯನಾಗಿದ್ದ. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಆದಿತ್ಯ ಕೊಠಾರಿ ನೀಡಿರುವ ಪತ್ರದ ಪ್ರಕಾರ ಮಂಗಳವಾರವೇ ಆತನನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ.

ಇದನ್ನೂ ಓದಿ: ಕೂಲಿ ಹಣ ನೀಡದಿದ್ದಕ್ಕೆ ಮಹಿಳೆಯ ಬರ್ಬರ ಹತ್ಯೆ; ಆರೋಪಿ ಅರೆಸ್ಟ್​

ಗ್ರಾಮದ ಮುಖ್ಯಸ್ಥನಾಗಿದ್ದ ಆದಿತ್ಯರಾಜ್ ಭಾನುವಾರ ಸಂಜೆ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ತನ್ನ ಮಗಳೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ಬಾಲಕಿಯ ತಾಯಿ ಹೇಳಿಕೊಂಡಿದ್ದಾರೆ. ಆಕೆ ಮಗಳ ಮೊಬೈಲ್‌ಗೆ ಕರೆ ಮಾಡಿದಾಗ ಆದಿತ್ಯರಾಜ್‌ ರಿಸೀವ್ ಮಾಡಿದ್ದು, ನಿನ್ನ ಮಗಳು ನನ್ನೊಂದಿಗಿದ್ದಾಳೆ ಎಂದು ಹೇಳಿದ್ದ. ಬಳಿಕ ಫೋನ್ ಸ್ವಿಚ್ ಆಫ್ ಆಗಿತ್ತು ಎಂದು ಮೃತ ಬಾಲಕಿಯ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.

ಮರುದಿನ ಬೆಳಿಗ್ಗೆ ತನಕ ಆ ಬಾಲಕಿ ಮನೆಗೆ ಹಿಂತಿರುಗದ ಹಿನ್ನೆಲೆಯಲ್ಲಿ ಆ ಮಹಿಳೆ ಆದಿತ್ಯನ ಮನೆಗೆ ಹೋಗಿದ್ದಾಳೆ. ಅಲ್ಲಿ ಆರೋಪಿ ಸಹಚರ ಅಮಿತ್ ಸೈನಿ ಸಹ ವಾಸಿಸುತ್ತಿದ್ದ. ಆದರೆ ಆಕೆಯ ಮಗಳು ಎಲ್ಲೂ ಕಾಣಲಿಲ್ಲ. ಈ ವಿಷಯವನ್ನು ಪೊಲೀಸರಿಗೆ ತಿಳಿಸುವುದಾಗಿ ಹೇಳಿದಾಗ, ಆದಿತ್ಯರಾಜ್ ಹಾಗೆ ಮಾಡದಂತೆ ಒತ್ತಡ ಹೇರಿದ ಮತ್ತು ಹಾಗೆ ಮಾಡಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ.

ಇದನ್ನೂ ಓದಿ: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಕೊಲೆಗೆ ಯತ್ನ; ಕಾಮುಕ ಅರೆಸ್ಟ್​

ಆದರೆ, ಬಾಲಕಿಯ ತಾಯಿ ಸೋಮವಾರ ಪೊಲೀಸರಿಗೆ ತನ್ನ ಮಗಳು ನಾಪತ್ತೆಯಾಗಿದ್ದಾಳೆ ಎಂದು ದೂರು ನೀಡಿದ್ದಾಳೆ. ಮಂಗಳವಾರ ಮಗಳ ಶವ ಪತ್ತೆಯಾದ ನಂತರ, ಆದಿತ್ಯರಾಜ್ ಮತ್ತು ಅಮಿತ್ ಸೇರಿ ತನ್ನ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕೊಂದಿದ್ದಾರೆ ಎಂದು ಆಕೆ ಆರೋಪಿಸಿದ್ದಾರೆ.

ಆಕೆಯ ದೂರಿನ ಆಧಾರದ ಮೇಲೆ, ಇಬ್ಬರ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಎಸ್‌ಪಿ ಪ್ರಮೇಂದ್ರ ದೋಭಾಲ್ ಹೇಳಿದ್ದಾರೆ.

ಈ ಪ್ರಕರಣ ಬಹಳ ಗಂಭೀರವಾಗಿದೆ. ಇದರ ತನಿಖೆಗಾಗಿ 5 ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ