ಗಂಡ, ಮಕ್ಕಳೆದುರೇ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ

ಆರೋಪಿಗಳು ಚಾಕುಗಳು ಮತ್ತು ಇತರ ಹರಿತವಾದ ಆಯುಧಗಳನ್ನು ಹಿಡಿದುಕೊಂಡು ಮನೆಗೆ ನುಗ್ಗಿದ್ದರು. ನಾಲ್ಕು ಕುಟುಂಬಗಳು ವಾಸಿಸುತ್ತಿದ್ದ ಮನೆಗೆ ನುಗ್ಗಿ ಅಲ್ಲಿರುವ ಬೆಲೆ ಬಾಳುವ ವಸ್ತುಗಳನ್ನು ದೋಚಿದ್ದಾರೆ. ನಂತರ ಅಲ್ಲಿದ್ದ ಮೂವರು ಮಹಿಳೆಯರನ್ನು ಕಟ್ಟಿ ಹಾಕಿ ಅತ್ಯಾಚಾರವೆಸಗಿದ್ದಾರೆ.

ಗಂಡ, ಮಕ್ಕಳೆದುರೇ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ
ಅತ್ಯಾಚಾರImage Credit source: iStock
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Sep 22, 2023 | 7:31 PM

ಚಂಡೀಗಢ: ಗಂಡ ಮತ್ತು ಮಕ್ಕಳ ಎದುರಲ್ಲೇ ಮೂವರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಅಮಾನುಷ ಘಟನೆ ಹರಿಯಾಣದ ಪಾಣಿಪತ್‌ನಲ್ಲಿ ನಡೆದಿದೆ. ಮೂವರು ಮಹಿಳೆಯರ ಮೇಲೆ ನಾಲ್ವರು ಅಪರಿಚಿತ ವ್ಯಕ್ತಿಗಳು ಅವರ ಕುಟುಂಬದವರ ಮುಂದೆ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆ ಬುಧವಾರ ತಡರಾತ್ರಿ ನಡೆದಿದ್ದು, ಆರೋಪಿಗಳು ಚಾಕುಗಳು ಮತ್ತು ಇತರ ಹರಿತವಾದ ಆಯುಧಗಳನ್ನು ಹಿಡಿದುಕೊಂಡು ಮನೆಗೆ ನುಗ್ಗಿದ್ದರು. ನಾಲ್ಕು ಕುಟುಂಬಗಳು ವಾಸಿಸುತ್ತಿದ್ದ ಮನೆಗೆ ನುಗ್ಗಿ ಅಲ್ಲಿರುವ ಬೆಲೆ ಬಾಳುವ ವಸ್ತುಗಳನ್ನು ದೋಚಿದ್ದಾರೆ. ನಂತರ ಆ ಮನೆಯಲ್ಲಿದ್ದ ಮೂವರು ಮಹಿಳೆಯರನ್ನು ಹಗ್ಗದಿಂದ ಕಟ್ಟಿ ಹಾಕಿ, ಅವರ ಗಂಡಂದಿರಿಗೆ ಚಾಕು ತೋರಿಸಿ ಹೆದರಿಸಿ, ಅವರೆದುರೇ ಅವರ ಹೆಂಡತಿಯರ ಮೇಲೆ ಅತ್ಯಾಚಾರ ನಡೆಸಿದ್ದಾರೆ.

ಇದನ್ನೂ ಓದಿ: ಮಾವನಿಂದ ಸೊಸೆ ಮೇಲೆ ಅತ್ಯಾಚಾರ; ಹೆಂಡತಿಯನ್ನೇ ತಾಯಿ ಎಂದ ಗಂಡ!

ಚಾಕು ಹಿಡಿದು ಬಂದಿದ್ದ ಆರೋಪಿಗಳು ನಗದು ಹಾಗೂ ಚಿನ್ನಾಭರಣವನ್ನು ದೋಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಾಮೂಹಿಕ ಅತ್ಯಾಚಾರ ಸಂಭವಿಸಿದ ಸ್ಥಳದಿಂದ ಸುಮಾರು 1 ಕಿಮೀ ದೂರದಲ್ಲಿ ಬುಧವಾರ ತಡರಾತ್ರಿ ಮತ್ತೊಂದು ಘಟನೆ ನಡೆದಿದೆ. ಅಪರಿಚಿತರು ಮಹಿಳೆಯೊಬ್ಬರ ಮೇಲೆ ದಾಳಿ ಮಾಡಿದ್ದು, ಆಕೆಯ ಪತಿಯ ಬಳಿಯಿದ್ದ ಹಣವನ್ನು ದೋಚಿಕೊಂಡು, ಆ ಮಹಿಳೆಯನ್ನು ಕೊಲೆ ಮಾಡಿದ್ದಾರೆ.

ಇದನ್ನೂ ಓದಿ: ಕೆಲಸಕ್ಕಿಟ್ಟಿದ್ದ ಯುವಕರಿಂದಲೇ ಭೀಕರವಾಗಿ ಕೊಲೆಯಾದ ಮಾಲೀಕ; ಆರೋಪಿಗಳು ಮಾಡಿದ್ದ ಖತರ್ನಾಕ್​ ಪ್ಲ್ಯಾನ್​ ಹೇಗಿತ್ತು ಗೊತ್ತಾ?

ಆರೋಪಿಗಳು ದಂಪತಿಯ ಮನೆಗೆ ಬಲವಂತವಾಗಿ ನುಗ್ಗಿ ದೈಹಿಕವಾಗಿ ಹಲ್ಲೆ ನಡೆಸಿದ್ದರಿಂದ ಈ ಎರಡೂ ಘಟನೆಗಳನ್ನು ಒಂದೇ ತಂಡ ಮಾಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಈ ಎರಡೂ ಘಟನೆಗಳು ಒಂದೇ ಗ್ರಾಮದಲ್ಲಿ ನಡೆದಿವೆ. ಆದರೆ, ಈ ಎರಡೂ ಪ್ರಕರಣಗಳಲ್ಲಿ ಇನ್ನೂ ತನಿಖೆ ನಡೆಯುತ್ತಿದ್ದು, ಯಾರನ್ನೂ ಬಂಧಿಸಿಲ್ಲ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ