ರಾಜಸ್ಥಾನದಲ್ಲಿ ಭೀಕರ ಅಪಘಾತ; ಟ್ರಕ್​ಗೆ ಬಸ್ ಡಿಕ್ಕಿ ಹೊಡೆದು ಐವರು ಸಾವು, 12 ಜನರ ಸ್ಥಿತಿ ಗಂಭೀರ

ರಾಜಸ್ಥಾನದ ಭರತ್‌ಪುರದಲ್ಲಿ ಶುಕ್ರವಾರ ಉತ್ತರ ಪ್ರದೇಶ (ಯುಪಿ) ಸಾರಿಗೆ ಬಸ್ ಟ್ರೈಲರ್ ಟ್ರಕ್‌ಗೆ ಡಿಕ್ಕಿ ಹೊಡೆದು ಐವರು ಮಹಿಳೆಯರು ಸಾವನ್ನಪ್ಪಿದ್ದಾರೆ ಮತ್ತು 12 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ರಾಜಸ್ಥಾನದಲ್ಲಿ ಭೀಕರ ಅಪಘಾತ; ಟ್ರಕ್​ಗೆ ಬಸ್ ಡಿಕ್ಕಿ ಹೊಡೆದು ಐವರು ಸಾವು, 12 ಜನರ ಸ್ಥಿತಿ ಗಂಭೀರ
ಭರತ್​ಪುರದಲ್ಲಿ ಭೀಕರ ಅಪಘಾತ
Follow us
ಸುಷ್ಮಾ ಚಕ್ರೆ
|

Updated on: May 17, 2024 | 8:15 PM

ಜೈಪುರ: ರಾಜಸ್ಥಾನ- ಉತ್ತರ ಪ್ರದೇಶ ಮಾರ್ಗದಲ್ಲಿ ಭರತ್‌ಪುರದಲ್ಲಿ (Bharatpur) ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ (Road Accident) ಗಾಯಗೊಂಡಿದ್ದ ಐವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಚಾಲಕನ ತಪ್ಪಿನಿಂದಾಗಿ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.

ಇಂದು ಮಧ್ಯಾಹ್ನ ರಾಜಸ್ಥಾನದ ಭರತ್‌ಪುರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಐವರ ದಾರುಣ ಸಾವಿಗೆ ಕಾರಣವಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 12 ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಬಸ್ ಮತ್ತು ಟ್ರಕ್ ಎರಡೂ ಜೈಪುರದಿಂದ ಆಗ್ರಾಕ್ಕೆ ಹೋಗುತ್ತಿದ್ದವು. ಅಷ್ಟರಲ್ಲಿ ಹಿಂದಿನಿಂದ ಟ್ರಕ್​ಗೆ ಬಸ್ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: ಅಂಜಲಿಯನ್ನು ಕೊಲೆ ಮಾಡಿದ ಆರೋಪಿ ವಿಶ್ವ ಯಾರು, ಈತನ ಹಿನ್ನೆಲೆ ಏನು? ಇಲ್ಲಿದೆ ಓದಿ

ಅಲಿಗಢದಿಂದ ಜೈಪುರಕ್ಕೆ ತೆರಳುತ್ತಿದ್ದ ಬಸ್ ಟ್ರಕ್ ಅನ್ನು ಹಿಂದಿಕ್ಕಲು ಪ್ರಯತ್ನಿಸುತ್ತಿದ್ದಾಗ ಹಲೈನಾ ಮಹುವಾ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಸಬ್ ಇನ್ಸ್‌ಪೆಕ್ಟರ್ ಬ್ರಿಜೇಂದ್ರ ಸಿಂಗ್ ತಿಳಿಸಿದ್ದಾರೆ.

ಅಪಘಾತದಲ್ಲಿ ಬಸ್ ಚಾಲಕನ ತಪ್ಪಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು 12 ಪ್ರಯಾಣಿಕರು ಗಾಯಗೊಂಡಿದ್ದು, ಚಿಕಿತ್ಸೆ ಮುಂದುವರಿದಿದೆ. ಗಾಯಗೊಂಡವರು ಮತ್ತು ಸತ್ತವರಲ್ಲಿ ಹೆಚ್ಚಿನವರು ಉತ್ತರ ಪ್ರದೇಶದವರು. ಬಸ್ ಆಗ್ರಾಕ್ಕೆ ಹೋಗುತ್ತಿದ್ದುದರಿಂದ ಅದರಲ್ಲಿ ಪ್ರಯಾಣಿಸುತ್ತಿದ್ದ ಹೆಚ್ಚಿನ ಪ್ರಯಾಣಿಕರು ಆಗ್ರಾದವರಾಗಿದ್ದರು.

ಆಗ್ರಾಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಮೃದುಲ್ ಕಚ್ವಾ ತಿಳಿಸಿದ್ದಾರೆ. ಇಲ್ಲಿಯವರೆಗೆ ಬಂದಿರುವ ಮಾಹಿತಿಯ ಪ್ರಕಾರ, 5 ಜನರು ಸಾವನ್ನಪ್ಪಿದ್ದಾರೆ ಮತ್ತು ಉಳಿದ ಜನರು ಪ್ರಸ್ತುತ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ತೆಲಂಗಾಣ: ಬಸ್​ ಹಾಗೂ ಲಾರಿ ನಡುವೆ ಅಪಘಾತ, ಹೊತ್ತಿ ಉರಿದ ಎರಡೂ ವಾಹನ, ಆರು ಮಂದಿ ಸಾವು

ಗಾಯಗೊಂಡ ಪ್ರಯಾಣಿಕರೊಬ್ಬರು ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಬಸ್ ಅತಿವೇಗದಲ್ಲಿ ಚಲಿಸುವ ಪ್ರಯತ್ನದ ಸಂದರ್ಭದಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಹೇಳಿದರು. ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗದ ಭಾಗಕ್ಕೆ ಭಾರೀ ಹಾನಿಯಾಗಿದೆ. ಮೃತದೇಹಗಳನ್ನು ಶವಾಗಾರದಲ್ಲಿ ಇರಿಸಲಾಗಿದ್ದು, ಅವರ ಕುಟುಂಬದವರು ಬಂದ ನಂತರ ಮರಣೋತ್ತರ ಪರೀಕ್ಷೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಸಾವಿಗೆ ಸಂತಾಪ ಸೂಚಿಸಿದ್ದು, ಗಾಯಾಳುಗಳು ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ. “ಗಾಯಗೊಂಡವರಿಗೆ ಸಾಧ್ಯವಿರುವ ಎಲ್ಲ ವೈದ್ಯಕೀಯ ನೆರವು ನೀಡಲು ಆಡಳಿತಕ್ಕೆ ಸೂಚನೆಗಳನ್ನು ನೀಡಲಾಗಿದೆ” ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್