Crime News: ಜೈಲಿನಲ್ಲಿ 14 ವರ್ಷದ ಬಾಲಕಿ, ಆತನ ಗಂಡ ಸಾವು; ಕೋಪದಿಂದ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಜನ

ಬಿಹಾರದ ಅರಾರಿಯಾ ಜಿಲ್ಲೆಯಲ್ಲಿರುವ ತಾರಾಬರಿ ಗ್ರಾಮದ ಪೊಲೀಸ್ ಠಾಣೆಯಲ್ಲಿ 14 ವರ್ಷದ ಬಾಲಕಿ ಮತ್ತು ಆಕೆಯನ್ನು ಮದುವೆಯಾಗಿದ್ದ ವ್ಯಕ್ತಿ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಪೊಲೀಸ್ ಠಾಣೆಯನ್ನು ಧ್ವಂಸಗೊಳಿಸಿ, ಬೆಂಕಿ ಹಚ್ಚಿದ್ದಾರೆ.

Crime News: ಜೈಲಿನಲ್ಲಿ 14 ವರ್ಷದ ಬಾಲಕಿ, ಆತನ ಗಂಡ ಸಾವು; ಕೋಪದಿಂದ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಜನ
ಬಿಹಾರದ ಪೊಲೀಸ್ ಸ್ಟೇಷನ್​ಗೆ ಬೆಂಕಿ ಹಚ್ಚಿದ ಜನರು
Follow us
ಸುಷ್ಮಾ ಚಕ್ರೆ
|

Updated on: May 18, 2024 | 7:25 PM

ಪಾಟ್ನಾ: ಬಿಹಾರದ (Bihar) ಅರಾರಿಯಾ ಜಿಲ್ಲೆಯಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಒಬ್ಬ ವ್ಯಕ್ತಿ ಮತ್ತು ಆತನ ಅಪ್ರಾಪ್ತ ‘ಪತ್ನಿ’ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಆಂಗ್ರಿ ಗ್ರಾಮಸ್ಥರು ಪೊಲೀಸ್ ಅಧಿಕಾರಿಗಳ ಮೇಲೆ ಕಲ್ಲುಗಳನ್ನು ಎಸೆದಿದ್ದಾರೆ. ಬಳಿಕ ಪೊಲೀಸ್ ಠಾಣೆಯನ್ನು (Police Station) ಧ್ವಂಸಗೊಳಿಸಿ, ಬೆಂಕಿ ಹಚ್ಚಿದ್ದಾರೆ. ಇದರಿಂದ ಆ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದಾಗ ಉಂಟಾದ ತಳ್ಳಾಟದಲ್ಲಿ ಇಬ್ಬರು ಗ್ರಾಮಸ್ಥರು ಗಾಯಗೊಂಡಿದ್ದಾರೆ.

ಮಾಹಿತಿಯ ಪ್ರಕಾರ, ಈ ಊರಿನ ವ್ಯಕ್ತಿಯ ಹೆಂಡತಿ ತೀರಿಹೋಗಿದ್ದಳು. ಹೀಗಾಗಿ, 2 ದಿನಗಳ ಹಿಂದೆ ತನ್ನ ಹೆಂಡತಿಯ 14 ವರ್ಷದ ತಂಗಿಯನ್ನು ಮದುವೆಯಾಗಿದ್ದನು. ಗುರುವಾರ (ಮೇ 16) ಮಧ್ಯಾಹ್ನ ತಾನು ಮದುವೆಯಾಗಿದ್ದ 14 ವರ್ಷದ ಬಾಲಕಿಯನ್ನು ಆತ ತನ್ನ ಮನೆಗೆ ಕರೆದುಕೊಂಡು ಹೋಗಿದ್ದ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ತಿಳಿದ ನಂತರ ಅವರನ್ನು ಠಾಣೆಗೆ ಕರೆತರಲಾಯಿತು.

ಇದನ್ನೂ ಓದಿ: Crime News: ಹೆಂಡತಿಗೆ ಹೊಡೆದ ಸೈನಿಕನನ್ನು ಶೂಟ್ ಮಾಡಿ ಕೊಂದ ಮಾವ

18 ವರ್ಷದೊಳಗೆ ಹೆಣ್ಣುಮಕ್ಕಳು ಮದುವೆಯಾಗುವಂತಿಲ್ಲ ಎಂಬ ಕಾನೂನು ಇರುವುದರಿಂದ ಅವರಿಬ್ಬರನ್ನೂ ವಶಕ್ಕೆ ಪಡೆಯಲಾಗಿತ್ತು. ಈ ಪ್ರಕರಣದಲ್ಲಿ ಪ್ರಾಥಮಿಕ ಎಫ್‌ಐಆರ್ ದಾಖಲಾಗಿದ್ದು, ಮದುವೆಯಾದ ಯುವಕ ಮತ್ತು ಆ ಬಾಲಕಿಯನ್ನು ವಿಚಾರಣೆಗಾಗಿ ಕರೆತರಲಾಗಿತ್ತು. ಇಬ್ಬರನ್ನು ಬಂಧಿಸಿದ ಕೂಡಲೇ ಕೋಪಗೊಂಡ ಸ್ಥಳೀಯರು ಪೊಲೀಸರ ವಿರುದ್ಧ ಪ್ರತಿಭಟನೆ ಮತ್ತು ಘೋಷಣೆಗಳನ್ನು ಪ್ರಾರಂಭಿಸಿದರು.

ಇದಾದ ನಂತರ ಪೊಲೀಸ್ ಕಸ್ಟಡಿಯಲ್ಲಿ ಇದ್ದಾಗಲೇ ಆ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದರು. ದಂಪತಿಗಳ ಸಾವಿನ ಬಗ್ಗೆ ತಿಳಿದ ಗ್ರಾಮಸ್ಥರು, ಪೊಲೀಸರೇ ಅವರಿಬ್ಬರನ್ನೂ ಥಳಿಸಿ ಕೊಲೆ ಮಾಡಿದ್ದಾರೆ ಎಂದು ಊರಿನವರು ಆರೋಪಿಸಿದ್ದಾರೆ. ಕೋಪಗೊಂಡ ಗ್ರಾಮಸ್ಥರು ಮೊದಲು ಪೊಲೀಸರಿಗೆ ಕಲ್ಲು ಎಸೆದರು. ನಂತರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದರು.

ಇದನ್ನೂ ಓದಿ: Crime News: ಪಾಟ್ನಾ ಶಾಲೆಯ ಚರಂಡಿಯಲ್ಲಿ 3 ವರ್ಷದ ಬಾಲಕ ಶವವಾಗಿ ಪತ್ತೆ; ಕಟ್ಟಡಕ್ಕೆ ಬೆಂಕಿ ಹಚ್ಚಿದ ಪೋಷಕರು

ಪೊಲೀಸ್ ಠಾಣೆಯಲ್ಲಿರುವ ಸಿಸಿಟಿವಿ ವೀಡಿಯೋದಲ್ಲಿ ಜೈಲಿನ ಸೆಲ್‌ನ ಒಳಗಿನ ದೃಶ್ಯ ಸೆರೆಯಾಗಿದ್ದು, ವ್ಯಕ್ತಿಯೊಬ್ಬ ಲಾಕಪ್ ಬಾಗಿಲಿಗೆ ಹತ್ತುವುದು ಮತ್ತು ಬಟ್ಟೆಯನ್ನು ಬಳಸಿ ನೇಣು ಹಾಕಿಕೊಳ್ಳುವುದನ್ನು ನೋಡಬಹುದು. ಗ್ರಾಮಸ್ಥರ ಆಕ್ರೋಶದ ಮಾಹಿತಿ ತಿಳಿದ ನಂತರ ವಿವಿಧ ಠಾಣೆಗಳ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಸ್ಥಿತಿಯನ್ನು ಹತೋಟಿಗೆ ತಂದರು.

ಈ ಗೊಂದಲದಲ್ಲಿ 5-6 ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದು, ಅವರಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಇದಕ್ಕೆ ಪ್ರತಿಯಾಗಿ ಪೊಲೀಸರು ಸುಮಾರು 6 ಸುತ್ತು ಗುಂಡು ಹಾರಿಸಿದರು. ಇದರಲ್ಲಿ ಇಬ್ಬರ ಕಾಲು ಮತ್ತು ಕೈಗೆ ಗುಂಡು ತಗುಲಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಅವ್ಯವಸ್ಥೆಗೆ ಕಾರಣರಾದ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಇದೇ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ ಪ್ರಕರಣದ ಬಗ್ಗೆಯೂ ತನಿಖೆ ನಡೆಯುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ