AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಸಾಫ್ಟ್​ವೇರ್​ ಇಂಜಿನಿಯರ್​ನನ್ನು ಕೊಂದು ಹೂತಿಟ್ಟ ಗೆಳೆಯರು!

ಗೆಳೆಯರ ನಡುವಿನ ಜಗಳ ಒಬ್ಬನ ಪ್ರಾಣವನ್ನೇ ಬಲಿ ತೆಗೆದುಕೊಂಡಿದೆ. ಕುಡಿದ ಅಮಲಿನಲ್ಲಿ ಜಗಳವಾಡಿಕೊಂಡ ಸಾಫ್ಟ್​ವೇರ್ ಇಂಜಿನಿಯರ್​​ನನ್ನು ಕೊಲೆ ಮಾಡಿದ ಸ್ನೇಹಿತರು ಬಳಿಕ ಆತನನ್ನು ಹೂತಿಟ್ಟು, ತಮ್ಮ ಕೃತ್ಯವನ್ನು ಮುಚ್ಚಿಡಲು ಪ್ರಯತ್ನಿಸಿದ್ದಾರೆ. ಅಷ್ಟಕ್ಕೂ ಅವರ ನಡುವೆ ಜಗಳವಾಗಿದ್ದು ಏಕೆ? ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

Crime News: ಸಾಫ್ಟ್​ವೇರ್​ ಇಂಜಿನಿಯರ್​ನನ್ನು ಕೊಂದು ಹೂತಿಟ್ಟ ಗೆಳೆಯರು!
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Jun 27, 2024 | 5:43 PM

Share

ಚೆನ್ನೈ: ಕುಡಿದ ಮತ್ತಿನಲ್ಲಿ ಜಗಳವಾಡಿ ಗೆಳೆಯನನ್ನು ಕೊಂದ ಇಬ್ಬರು ಯುವಕರನ್ನು ಚೆನ್ನೈನಲ್ಲಿ ಬಂಧಿಸಲಾಗಿದೆ. ಐಟಿ ಉದ್ಯೋಗಿಯಾಗಿದ್ದ ಚೆನ್ನೈನ ಮರೈಮಲೈ ನಗರದ ನಿವಾಸಿ 26 ವರ್ಷದ ಟಿ. ವಿಘ್ನೇಶ್ ಎಂಬಾತನನ್ನು ಕೊಲೆ ಮಾಡಿದ್ದ ಬಿಹಾರ ಮೂಲದ ವಿಶ್ವನಾಥನ್ (23) ಮತ್ತು ದಿಲ್ಕುಶ್ ಕುಮಾರ್ (22) ಎಂಬುವರನ್ನು ಬಂಧಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವ ಅಪ್ರಾಪ್ತನನ್ನು ಕೂಡ ವಶಕ್ಕೆ ತೆಗೆದುಕೊಳ್ಳಲಾಗಿದೆ.

ಶೋಲಿಂಗನಲ್ಲೂರಿನ ಐಟಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ವಿಘ್ನೇಶ್ ಕಳೆದ ಒಂದು ವಾರಕ್ಕೂ ಹೆಚ್ಚು ಕಾಲದಿಂದ ನಾಪತ್ತೆಯಾಗಿದ್ದರು. ಆತನ ಕುಟುಂಬದವರು ನೀಡಿದ ದೂರಿನ ಮೇರೆಗೆ ಮರೈಮಲೈ ನಗರ ಪೊಲೀಸರು ನಡೆಸಿದ ತನಿಖೆಯಲ್ಲಿ ಆತನ ಸ್ನೇಹಿತ ವಿಶ್ವನಾಥನನ್ನು ಬಂಧಿಸಲಾಗಿದೆ. ಆತನ ವಿಚಾರಣೆ ವೇಳೆ ವಿಘ್ನೇಶ್‌ನ ಮೊಬೈಲ್‌ಗೆ ಕೊನೆಯ ಕರೆ ವಿಶ್ವನಾಥನ್‌ನಿಂದ ಎಂದು ತಿಳಿದುಬಂದಿದೆ. ಅವರು ಆರಂಭದಲ್ಲಿ ತಾವು ಕೊಲೆ ಮಾಡಿಲ್ಲ ಎಂದು ನಿರಾಕರಿಸಿದರು. ಆದರೆ, ನಂತರ ಅದನ್ನು ಒಪ್ಪಿಕೊಂಡರು.

ಇದನ್ನೂ ಓದಿ: ಸಾಮೂಹಿಕ ಅತ್ಯಾಚಾರ ನಡೆಸಿ 13 ವರ್ಷದ ಬಾಲಕಿಯ ಕೊಲೆ; ಹರಿದ್ವಾರ ಹೆದ್ದಾರಿಯಲ್ಲಿ ಶವ ಪತ್ತೆ

ಪೊಲೀಸರ ಪ್ರಕಾರ ವಿಘ್ನೇಶ್, ವಿಶ್ವನಾಥನ್ ಮತ್ತು ದಿಲ್ಕುಶ್ ಕುಮಾರ್ ಇತ್ತೀಚೆಗೆ ಒಟ್ಟಿಗೆ ಮದ್ಯ ಸೇವಿಸಿದ್ದರು. ಆಗ ವಿಘ್ನೇಶ್ ಮತ್ತು ದಿಲ್ಕುಶ್​ ಕುಮಾರ್ ನಡುವೆ ವಾಗ್ವಾದ ನಡೆದಿತ್ತು. ಇದೇ ವೇಳೆ ವಿಘ್ನೇಶ್ ದಿಲ್ಕುಶ್ ಕುಮಾರ್​ಗೆ ಥಳಿಸಿದ್ದಾನೆ. ಅವನ ಮೇಲೆ ಸೇಡು ತೀರಿಸಿಕೊಳ್ಳಲು ವಿಶ್ವನಾಥನ್ ಮತ್ತು ದಿಲ್ಕುಶ್ ಕುಮಾರ್ ವಿಘ್ನೇಶ್‌ನನ್ನು ಕೊಲ್ಲಲು ಪ್ಲಾನ್ ಮಾಡಿದ್ದರು. ಆಗ ಕುಡಿತಕ್ಕೆ ಕರೆದೊಯ್ದು ಚಾಕುವಿನಿಂದ ಇರಿದು ಹತ್ಯೆಗೈದಿದ್ದಾರೆ.

ನಂತರ ಮೃತದೇಹವನ್ನು ಮರೈಮಲೈ ನಗರದ ಕೆರೆಯ ದಡದಲ್ಲಿ ಹೂತು ಹಾಕಿದ್ದಾರೆ. ನಂತರ ದಿಲ್ಕುಶ್ ಕುಮಾರ್ ಅವರನ್ನು ಕೂಡ ಬಂಧಿಸಲಾಗಿದ್ದು, ಅವರೊಂದಿಗಿದ್ದ ಅಪ್ರಾಪ್ತರನ್ನು ವಶಕ್ಕೆ ಪಡೆಯಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’