ಬಾಲಕಿಯನ್ನು ಕೊಂದು ಕೈ-ಕಾಲು ಕಟ್ಟಿ ಬ್ಯಾಗ್​ನಲ್ಲಿ ತುಂಬಿದ ಹಂತಕರು

ಬ್ಯಾಗ್​ನೊಳಗಿದ್ದ ಬಾಲಕಿಯ ಮೃತದೇಹದ ಕೈ ಮತ್ತು ಕಾಲುಗಳನ್ನು ಕಟ್ಟಲಾಗಿದ್ದು, ಆಕೆಯನ್ನು ಕೊಲೆ ಮಾಡಿರುವುದು ಸ್ಪಷ್ಟವಾಗಿದೆ. ಬಾಲಕಿಯನ್ನು ಕೊಲೆ ಮಾಡಿದ್ದಷ್ಟೇ ಅಲ್ಲದೆ ಸಾಕ್ಷ್ಯಗಳನ್ನು ನಾಶಪಡಿಸಲು ಪ್ರಯತ್ನಿಸಿದ್ದಾರೆ. ಆ ಬಾಲಕಿ ಯಾರೆಂಬ ಬಗ್ಗೆ ಇನ್ನೂ ಸುಳಿವು ಸಿಕ್ಕಿಲ್ಲ.

ಬಾಲಕಿಯನ್ನು ಕೊಂದು ಕೈ-ಕಾಲು ಕಟ್ಟಿ ಬ್ಯಾಗ್​ನಲ್ಲಿ ತುಂಬಿದ ಹಂತಕರು
ಸಾಂದರ್ಭಿಕ ಚಿತ್ರ
Follow us
ಸುಷ್ಮಾ ಚಕ್ರೆ
|

Updated on: Sep 14, 2023 | 6:18 PM

ಪುರಿ: ಒಡಿಶಾದ ಕನಾಸ್ ಪ್ರದೇಶದಲ್ಲಿ ಬಾಲಕಿಯೊಬ್ಬಳನ್ನು ಕೊಂದು, ಆಕೆಯ ಮೃತದೇಹವನ್ನು ಬ್ಯಾಗ್‌ನಲ್ಲಿ ತುಂಬಿ ಎಸೆದಿರುವ ಆಘಾತಕಾರಿ ಘಟನೆ ನಡೆದಿದೆ. ಬ್ಯಾಗ್​ನೊಳಗಿದ್ದ ಬಾಲಕಿಯ ಮೃತದೇಹದ ಕೈ ಮತ್ತು ಕಾಲುಗಳನ್ನು ಕಟ್ಟಲಾಗಿದ್ದು, ಆಕೆಯನ್ನು ಕೊಲೆ ಮಾಡಿರುವುದು ಸ್ಪಷ್ಟವಾಗಿದೆ. ಆದರೆ, ಆಕೆ ಯಾರು, ಯಾರು ಕೊಲೆ ಮಾಡಿದ್ದಾರೆಂಬ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಪುರಿ ಪೊಲೀಸರು ತಿಳಿಸಿದ್ದಾರೆ.

ಬಾಲಕಿಯನ್ನು ಕೊಲೆ ಮಾಡಿದ್ದಷ್ಟೇ ಅಲ್ಲದೆ ಸಾಕ್ಷ್ಯಗಳನ್ನು ನಾಶಪಡಿಸಲು ಪ್ರಯತ್ನಿಸಿದ್ದಾರೆ. ಗಡಿಸಗಡ ಪೊಲೀಸ್ ವ್ಯಾಪ್ತಿಯ ದಯಾ ನದಿಯ ದಡದಲ್ಲಿ ಆ ಬಾಲಕಿಯ ಶವ ಪತ್ತೆಯಾಗಿದೆ. ಆ ಬಾಲಕಿ ಯಾರೆಂಬ ಬಗ್ಗೆ ಇನ್ನೂ ಸುಳಿವು ಸಿಕ್ಕಿಲ್ಲ. ಮೃತಳನ್ನು ಗುರುತಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ. ಇದಕ್ಕಾಗಿ ವಿಶೇಷ ಪೊಲೀಸ್ ತಂಡಗಳು ಪುರಿ ಮತ್ತು ಹತ್ತಿರದ ಜಿಲ್ಲೆಗಳ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಕಾಣೆಯಾದ ಪ್ರಕರಣಗಳನ್ನು ಪರಿಶೀಲಿಸುತ್ತಿವೆ ಎಂದು ಪುರಿ ಎಸ್​ಪಿ ಕನ್ವರ್ ವಿಶಾಲ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ತನ್ನ ಮಗಳನ್ನು ಪ್ರೀತಿಸುತ್ತಿದ್ದ ಬಾಲಕನನ್ನು ಹೊಡೆದು ಕೊಲೆ ಮಾಡಿದ ತಂದೆ ಅರೆಸ್ಟ್

ಈ ಪ್ರಕರಣದ ತನಿಖೆಗೆ ಈಗಾಗಲೇ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ. ಹೆಚ್ಚಿನ ತನಿಖೆಯನ್ನು ಪ್ರಾರಂಭಿಸಲಾಗಿದೆ. ಗುರುತು ಪತ್ತೆಯಾದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಫೋರೆನ್ಸಿಕ್ ತಜ್ಞರ ಸಮ್ಮುಖದಲ್ಲಿ ತಜ್ಞರ ತಂಡವು ಮರಣೋತ್ತರ ಪರೀಕ್ಷೆಯನ್ನು ನಡೆಸಲಿದೆ. ಈ ಸಂಪೂರ್ಣ ಪ್ರಕ್ರಿಯೆಯನ್ನು ವೀಡಿಯೊಗ್ರಾಫ್ ಮಾಡಲಾಗುವುದು ಎಂದು ಸಿಂಗ್ ಹೇಳಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ