ಹೈದರಾಬಾದ್: ಹೈದರಾಬಾದ್‌ನಲ್ಲಿ 10 ವರ್ಷದ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ 10 ಜನರನ್ನು ಬಂಧಿಸಲಾಗಿದೆ. ಆರೋಪಿಗಳು ಅಪರಾಧ ಮಾಡುವ ಮೊದಲು ಆಕೆಗೆ ಮಾದಕವಸ್ತು ಮಿಶ್ರಿತ ಪಾನೀಯಗಳನ್ನು ಸೇವಿಸುವಂತೆ ಒತ್ತಾಯಿಸಿದ್ದರು. ಈ ಅತ್ಯಾಚಾರದ ಘಟನೆಯ ನಂತರ ಆಕೆ ಗರ್ಭಿಣಿಯಾಗಿದ್ದಾಳೆ. ಈ ಹಿನ್ನೆಲೆಯಲ್ಲಿ ಆರೋಪಿಗಳ ಗುಂಪನ್ನು ಬಂಧಿಸಲಾಗಿದೆ.
4ನೇ ಕ್ಲಾಸ್ನ ಬಾಲಕಿಯ ಜೊತೆ ಜೂನ್ 25ರಂದು ನಗರದ ಕಾಚಿಗುಡಾ ಪ್ರದೇಶದಿಂದ ನರೇಶ್ ಮತ್ತು ವಿಜಯ್ ಕುಮಾರ್ ಎಂಬುವರು ಸಾಮಾನ್ಯ ಸ್ನೇಹಿತನ ಮೂಲಕ ಸ್ನೇಹ ಬೆಳೆಸಿದ್ದರು. ಅವರು ತಮ್ಮ ಇತರೆ ಗೆಳೆಯರ ಜೊತೆ ಸೇರಿ ಆ ಅಪ್ರಾಪ್ತ ಬಾಲಕಿಯ ಮೇಲೆ ಹಲವಾರು ಬಾರಿ ಲೈಂಗಿಕ ದೌರ್ಜನ್ಯ ನಡೆಸಿದ್ದರು. ಅಲ್ಲದೆ, ಮಾದಕವಸ್ತು ತುಂಬಿದ ಪಾನೀಯಗಳನ್ನು ಸೇವಿಸುವಂತೆ ಒತ್ತಾಯಿಸಿ, ಕುಡಿಸಿದ್ದರು.
ಇದನ್ನೂ ಓದಿ: ಫಿಸಿಯೋಥೆರಪಿ ವೇಳೆ ಮಹಿಳೆ ಮೇಲೆ ಅತ್ಯಾಚಾರ; ಕಾಂಗ್ರೆಸ್ ಮುಖಂಡನ ಮಗನ ಬಂಧನ
ನಿರಂತರವಾಗಿ ಅತ್ಯಾಚಾರ ನಡೆಸಿದ್ದರಿಂದ ಆ ಬಾಲಕಿ ಗರ್ಭಿಣಿಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಕೂಟರ್, ದ್ವಿಚಕ್ರವಾಹನ ಸೇರಿದಂತೆ ಮೊಬೈಲ್, ವಾಹನಗಳು, ಸಿಮ್ ಕಾರ್ಡ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜೂನ್ 29ರಂದು ಬಂಧಿತರಾಗಿರುವ ಎಲ್ಲಾ ಆರೋಪಿಗಳು ಅಪರಾಧ ಚಟುವಟಿಕೆಗಳು ಮತ್ತು ಮಾದಕ ದ್ರವ್ಯ ಸೇವನೆಯ ಇತಿಹಾಸವನ್ನು ಹೊಂದಿದ್ದಾರೆ.
ಆರೋಪಿಗಳನ್ನು ಮರುದಿನ ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿಗೆ ಒಪ್ಪಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳಿಗೆ ಕಠಿಣ ಶಿಕ್ಷೆ ಕೊಡಬೇಕೆಂದು ಪ್ರತಿಭಟನೆಗಳು ನಡೆಯುತ್ತಿವೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ