Crime News: ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಯ ಬರ್ಬರ ಹತ್ಯೆ; ಹರಿಯಾಣದ ಇಬ್ಬರ ಬಂಧನ

ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಟ್ರೇಲಿಯಾದಲ್ಲಿ ವಾಸವಾಗಿದ್ದ ಹರಿಯಾಣ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

Crime News: ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಯ ಬರ್ಬರ ಹತ್ಯೆ; ಹರಿಯಾಣದ ಇಬ್ಬರ ಬಂಧನ
ನವಜೀತ್ ಸಂಧು
Follow us
ಸುಷ್ಮಾ ಚಕ್ರೆ
|

Updated on: May 08, 2024 | 9:07 PM

ನವದೆಹಲಿ: ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ (Melbourne) ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಈ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಯಾಣ (Haryana) ಮೂಲದ ಕರ್ನಾಲ್‌ನ ಇಬ್ಬರು ಸಹೋದರರನ್ನು ಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್‌ನಲ್ಲಿ ಬಂಧಿಸಲಾಗಿದೆ. ಹತ್ಯೆಗೀಡಾದ ಕರ್ನಾಲ್ ಮೂಲದ ವಿದ್ಯಾರ್ಥಿ ಆಸ್ಟ್ರೇಲಿಯಾದಲ್ಲಿ ಎಂಟೆಕ್ ಪದವಿ ಓದುತ್ತಿದ್ದರು.

ವಿಕ್ಟೋರಿಯಾ ಪೊಲೀಸರು ನಡೆಸಿದ ಶೋಧ ಕಾರ್ಯಾಚರಣೆಯ ನಂತರ ಮಂಗಳವಾರ ಬೆಳಿಗ್ಗೆ ಗೌಲ್ಬರ್ನ್‌ನಲ್ಲಿ ಅಭಿಜಿತ್ (26) ಮತ್ತು ರಾಬಿನ್ ಗಾರ್ಟನ್ (27) ಎಂಬ ಇಬ್ಬರನ್ನು ಬಂಧಿಸಲಾಗಿದೆ. ದಿ ಟೈಮ್ಸ್ ಆಫ್ ಇಂಡಿಯಾದ ಪ್ರಕಾರ, ಕೊಲೆ ಮಾಡಿರುವ ಸಹೋದರರು ಕರ್ನಾಲ್‌ನ ಬಸ್ತಾರಾ ಗ್ರಾಮದ ನಿವಾಸಿಗಳಾಗಿದ್ದು, ಅವರನ್ನು ನ್ಯಾಯಾಲಯಕ್ಕೆ ವಿಚಾರಣೆಗೆ ಕರೆದೊಯ್ಯಲಾಗಿದೆ. ಬಳಿಕ ಪೊಲೀಸರು ತಮ್ಮ ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆಯಿದೆ.

ಇದನ್ನೂ ಓದಿ: ಗಂಡ-ಹೆಂಡತಿ ಜಗಳ: ನಡುರಸ್ತೆಯಲ್ಲೇ ಚಾಕುವಿನಿಂದ ಇರಿದು ಪತ್ನಿಯ ಭೀಕರ ಕೊಲೆ

ಮೆಲ್ಬೋರ್ನ್‌ನ ಆಗ್ನೇಯದಲ್ಲಿರುವ ಓರ್ಮಂಡ್ ಮನೆಯಲ್ಲಿ 22 ವರ್ಷದ ನವಜೀತ್ ಸಂಧು ಮತ್ತು 30 ವರ್ಷದ ಶರ್ವನ್ ಕುಮಾರ್‌ ಇಬ್ಬರೂ ವಾಸವಾಗಿದ್ದರು. ಅವರ ಮೇಲೆ ದಾಳಿ ಮಾಡಿದ ಸಹೋದರರಿಬ್ಬರು ಅಲ್ಲಿಂದ ಪರಾರಿಯಾಗಿದ್ದರು. ಭಾನುವಾರದಿಂದ ಅವರು ನಾಪತ್ತೆಯಾಗಿದ್ದರು. ಈ ದಾಳಿಯಲ್ಲಿ ಒಬ್ಬಾತ ಮೃತಪಟ್ಟಿದ್ದು, ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.

ಕರ್ನಾಲ್‌ನ ಗಗ್ಸಿನಾ ಗ್ರಾಮದ ನವಜೀತ್ ಸಂಧು ಅವರ ಎದೆಗೆ ಭಾನುವಾರ ರಾತ್ರಿ ಮಾರಣಾಂತಿಕವಾಗಿ ಇರಿದಿದ್ದರು. ಕರ್ನಾಲ್‌ನ ನಿವಾಸಿಯಾದ ಅವರ ಚಿಕ್ಕಪ್ಪ ಯಶವೀರ್ ಪ್ರಕಾರ, ಸಂಧು ಅವರು ಕೆಲವು ಬಾಡಿಗೆ ವಿಚಾರದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಗಳ ನಡುವಿನ ಜಗಳದಲ್ಲಿ ಮಧ್ಯಪ್ರವೇಶಿಸಲು ಪ್ರಯತ್ನಿಸಿದಾಗ ಆತನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿತ್ತು.

ಇದನ್ನೂ ಓದಿ: ವಿಜಯಪುರ: ಗರ್ಭಿಣಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದವರಿಗೆ ಗಲ್ಲು ಶಿಕ್ಷೆ; ಏನಿದು ಪ್ರಕರಣ?

ನವಜೀತ್ ನವೆಂಬರ್ 2022ರಲ್ಲಿ ಅಧ್ಯಯನ ವೀಸಾದಲ್ಲಿ ಆಸ್ಟ್ರೇಲಿಯಾಕ್ಕೆ ಆಗಮಿಸಿದರು. ಅವರು ಮೆಲ್ಬೋರ್ನ್‌ನಲ್ಲಿ MTech ಪದವಿಯನ್ನು ಪಡೆಯುತ್ತಿದ್ದರು. ಆರೋಪಿಗಳು ಕೂಡ ಮೆಲ್ಬೋರ್ನ್‌ನಲ್ಲಿ ವಾಸಿಸುತ್ತಿದ್ದರು ಎಂದು ವರದಿ ತಿಳಿಸಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ