Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ದುರ್ವಾಸನೆ ಬರುತ್ತಿದ್ದ ಮನೆಯ ಬಾಗಿಲು ತೆರೆದಾಗ ಕಾದಿತ್ತು ಆಘಾತ!

ಮನೆಯ ಕರೆಂಟ್ ಬಿಲ್ ಅಧಿಕವಾಗಿದೆ ಎಂಬ ಕಾರಣಕ್ಕೆ ಆಕ್ರೋಶಗೊಂಡ ವ್ಯಕ್ತಿಯೊಬ್ಬರು ಮಹಾವಿತರಣ್ ಕಚೇರಿಯಲ್ಲಿ ಮಹಿಳಾ ಉದ್ಯೋಗಿಯೊಬ್ಬರನ್ನು ಹೊಡೆದು ಕೊಂದಿರುವ ಘಟನೆ ಇತ್ತೀಚೆಗೆ ನಡೆದಿತ್ತು. ಇದೀಗ ಮುಂಬೈನಲ್ಲೂ ಇಂಥದ್ದೇ ಆಘಾತಕಾರಿ ಘಟನೆ ನಡೆದಿದೆ. ಮುಂಬೈನ ಗೋವಂಡಿಯಲ್ಲಿ ವಿದ್ಯುತ್ ಬಿಲ್ ವಿವಾದದಿಂದಾಗಿ ಮನೆಯಲ್ಲಿ ಬಾಡಿಗೆಗಿದ್ದಾತ ತನ್ನ ಮನೆಯ ಮಾಲೀಕರನ್ನೇ ಕೊಲೆ ಮಾಡಿದ್ದಾನೆ.

Crime News: ದುರ್ವಾಸನೆ ಬರುತ್ತಿದ್ದ ಮನೆಯ ಬಾಗಿಲು ತೆರೆದಾಗ ಕಾದಿತ್ತು ಆಘಾತ!
ಕೊಲೆImage Credit source: istock
Follow us
ಸುಷ್ಮಾ ಚಕ್ರೆ
|

Updated on: May 06, 2024 | 4:36 PM

ಮುಂಬೈ: ವಿದ್ಯುತ್ ಬಿಲ್ (Electricity Bill) ಅಧಿಕವಾಗಿದೆ ಎಂಬ ಕಾರಣಕ್ಕೆ ಆಕ್ರೋಶಗೊಂಡ ಗ್ರಾಹಕರೊಬ್ಬರು ಮಹಾವಿತರಣ್ ಕಚೇರಿಯಲ್ಲಿ ಮಹಿಳಾ ಉದ್ಯೋಗಿಯೊಬ್ಬರನ್ನು ಹೊಡೆದು ಕೊಂದ (Murder) ಘಟನೆ ಇತ್ತೀಚೆಗೆ ನಡೆದಿದೆ. ಆದರೆ ಇದೀಗ ಮುಂಬೈನಲ್ಲೂ ಇದೇ ರೀತಿಯ ಆಘಾತಕಾರಿ ಘಟನೆ (Shocking News) ನಡೆದಿದೆ. ವಿದ್ಯುತ್ ಬಿಲ್ ವಿವಾದದಿಂದ ವ್ಯಕ್ತಿಯೊಬ್ಬ ತನ್ನ ಸ್ವಂತ ಮಾಲೀಕನನ್ನು ಕೊಂದಿರುವ ಘಟನೆ ಗೋವಂಡಿಯಲ್ಲಿ ನಡೆದಿದೆ. ಈ ಪ್ರಕರಣದಲ್ಲಿ 63 ವರ್ಷದ ಆರೋಪಿಯನ್ನು ಶಿವಾಜಿ ನಗರ ಪೊಲೀಸರು ಬಂಧಿಸಿದ್ದು, ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಏನಿದು ಘಟನೆ?:

ಗೋವಂಡಿಯಲ್ಲಿ ಈ ಅಮಾನವೀಯ ರೀತಿಯ ಕೊಲೆ ನಡೆದಿದೆ. ಪೊಲೀಸ್ ಮಾಹಿತಿ ಪ್ರಕಾರ, ಆರೋಪಿಯ ಹೆಸರು ಅಬ್ದುಲ್ ಶೇಖ್ (ವಯಸ್ಸು 63) ಮತ್ತು ಮೃತರ ಹೆಸರು ಗಣಪತಿ ಝಾ (ವಯಸ್ಸಿನ 49). ಇವರು ಬಂಗನವಾಡಿಯಲ್ಲಿ ವಾಸವಾಗಿದ್ದರು. ಗುರುವಾರದಿಂದ ಬಂಗನವಾಡಿಯ ಗಣಪತಿ ಅವರ ನಿವಾಸದಿಂದ ದುರ್ವಾಸನೆ ಬರುತ್ತಿರುವ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಂದು ಬಾಗಿಲು ತೆರೆದು ಒಳಗೆ ಪ್ರವೇಶಿಸಿದಾಗ ಎದುರಿಗಿದ್ದ ದೃಶ್ಯ ಕಂಡು ಬೆಚ್ಚಿಬಿದ್ದರು. ಮನೆಯೊಳಗೆ ಗಣಪತಿ ಅವರ ಶವ ಕೊಳೆತ ಸ್ಥಿತಿಯಲ್ಲಿ ಬಿದ್ದಿತ್ತು.

ಇದನ್ನೂ ಓದಿ: ಗಂಡ-ಹೆಂಡತಿ ಜಗಳ: ನಡುರಸ್ತೆಯಲ್ಲೇ ಚಾಕುವಿನಿಂದ ಇರಿದು ಪತ್ನಿಯ ಭೀಕರ ಕೊಲೆ

ಎರಡು ದಿನಗಳ ಹಿಂದೆ ಗಣಪತಿ ಅವರು ಮೃತಪಟ್ಟಿರುವುದು ದೃಢಪಟ್ಟಿದೆ. ಈ ಪ್ರಕರಣವನ್ನು ಭೇದಿಸಲು ಪೊಲೀಸರು ಅಕ್ಕಪಕ್ಕದ ಮನೆಯವರನ್ನು ಹಾಗೂ ಕುಟುಂಬಸ್ಥರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಆಗ ಮೃತರ ಸಹೋದರ ದಿನೇಶ್ ಅವರಿಂದ ಮಹತ್ವದ ಮಾಹಿತಿ ಸಿಕ್ಕಿದೆ. ಕೆಲವು ದಿನಗಳ ಹಿಂದೆ ಗಣಪತಿ ತನ್ನ ಮನೆಯಲ್ಲಿ ಬಾಡಿಗೆಗಿದ್ದ ಅಬ್ದುಲ್ ಶೇಖ್ ಎಂಬಾತನ ಜತೆ ಜಗಳ ಮಾಡಿಕೊಂಡಿರುವುದು ಪೊಲೀಸರಿಗೆ ಗೊತ್ತಾಗಿದೆ. ನಂತರ ಪೊಲೀಸರು ಅಬ್ದುಲ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆತ ತಪ್ಪೊಪ್ಪಿಕೊಂಡಿದ್ದಾನೆ.

ಸುತ್ತಿಗೆಯಿಂದ ಹೊಡೆದು ಕೊಲೆ:

ಏಪ್ರಿಲ್ 30ರಂದು ಗಣಪತಿ ಮತ್ತು ಮನೆಯ ಬಾಡಿಗೆದಾರ ಅಬ್ದುಲ್ ನಡುವೆ ಜಗಳವಾಗಿತ್ತು. ಹೆಚ್ಚುತ್ತಿರುವ ವಿದ್ಯುತ್‌ ಬಿಲ್‌ ವಿಚಾರವಾಗಿ ಇಬ್ಬರೂ ಜಗಳವಾಡಿದ್ದರು. ಈ ಜಗಳದ ವೇಳೆ ಗಣಪತಿ ಅಬ್ದುಲ್​ನನ್ನು ನಿಂದಿಸಿದ್ದರು. ಇದರಿಂದ ಕುಪಿತಗೊಂಡ ಅಬ್ದುಲ್ ಶೇಖ್ ಮರದ ಕೋಲಿನಿಂದ ಗಣಪತಿಗೆ ಥಳಿಸಿದ್ದ. ಆಗ ಗಣಪತಿಯು ತನ್ನನ್ನು ರಕ್ಷಿಸಿಕೊಳ್ಳಲು ಆತನ ವಿರುದ್ಧವೂ ಹಲ್ಲೆ ಮಾಡಿದ್ದರು. ಆದರೆ ಅಷ್ಟರಲ್ಲಾಗಲೇ ಆರೋಪಿ ಅಬ್ದುಲ್ ಮನೆ ಮಾಲೀಕ ಗಣಪತಿಯ ಮುಖಕ್ಕೆ ಸುತ್ತಿಗೆಯಿಂದ ಹೊಡೆದಿದ್ದರಿಂದ ಅವರು ಗಂಭೀರವಾಗಿ ಗಾಯಗೊಂಡಿದ್ದರು.

ಇದನ್ನೂ ಓದಿ: ಗಂಡ-ಹೆಂಡತಿ ಜಗಳ: ನಡುರಸ್ತೆಯಲ್ಲೇ ಚಾಕುವಿನಿಂದ ಇರಿದು ಪತ್ನಿಯ ಭೀಕರ ಕೊಲೆ

ಕೊನೆಗೆ ಗಾಯಗೊಂಡಿದ್ದ ಗಣಪತಿಯನ್ನು ಅಬ್ದುಲ್ ಶೇಖ್ ಹಾಗೇ ಬಿಟ್ಟು ಹೊರಟು ಹೋಗಿದ್ದ. ಗಣಪತಿ ತೀವ್ರ ಗಾಯಗೊಂಡು ತಮ್ಮ ನಿವಾಸದಲ್ಲಿ ಮೃತಪಟ್ಟಿದ್ದಾರೆ. ಎರಡು ದಿನಗಳ ನಂತರ ದುರ್ವಾಸನೆ ಶುರುವಾದಾಗ ಅಕ್ಕಪಕ್ಕದವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಕೊಲೆ ಮಾಡಿದ ಕೃತ್ಯ ಬಯಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ