ಪೊಲೀಸರ ವೇಷದಲ್ಲಿ ನುಗ್ಗಿ ಕೆಫೆ ಮಾಲೀಕನ ಮನೆಯಿಂದ 25 ಲಕ್ಷ ರೂ. ದೋಚಿದ ಕಳ್ಳರು

ತಾವು ಕ್ರೈಂ ಬ್ರಾಂಚ್‌ ಅಧಿಕಾರಿಗಳು ಎಂದು ಹೇಳಿಕೊಂಡು ಮುಂಬೈನ ಸಿಯಾನ್ ಪ್ರದೇಶದಲ್ಲಿ ಕೆಫೆ ಮಾಲೀಕನ ಮನೆಗೆ ನುಗ್ಗಿದ 6 ಜನರು 25 ಲಕ್ಷ ರೂ. ಹಣವನ್ನು ದೋಚಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸರ ವೇಷದಲ್ಲಿ ನುಗ್ಗಿ ಕೆಫೆ ಮಾಲೀಕನ ಮನೆಯಿಂದ 25 ಲಕ್ಷ ರೂ. ದೋಚಿದ ಕಳ್ಳರು
ಪೊಲೀಸರು
Follow us
ಸುಷ್ಮಾ ಚಕ್ರೆ
|

Updated on: May 16, 2024 | 4:54 PM

ಮುಂಬೈ: ಮಹಾರಾಷ್ಟ್ರದ (Maharashtra) ಮುಂಬೈ ನಗರದ ಮಾಟುಂಗಾ ಪ್ರದೇಶದಲ್ಲಿ ಜನಪ್ರಿಯ ಕೆಫೆ ನಡೆಸುತ್ತಿರುವ ವ್ಯಕ್ತಿಯೊಬ್ಬರ ಮನೆಗೆ ನುಗ್ಗಿದ 6 ದರೋಡೆಕೋರರು ತಾವು ಮುಂಬೈ ಕ್ರೈಂ ಬ್ರಾಂಚ್ (Mumbai Crime Branch) ಸಿಬ್ಬಂದಿ ಎಂದು ಹೇಳಿ ಸಿಯಾನ್ ಆಸ್ಪತ್ರೆ ಬಳಿಯ ಆ ಮಾಲೀಕರ ಮನೆಗೆ ಹೋಗಿ 25 ಲಕ್ಷ ರೂ. ಹಣ ದೋಚಿರುವ ಘಟನೆ ನಡೆದಿದೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ಪೋಲೀಸರಂತೆ ಪೋಸು ಕೊಟ್ಟು ಕೆಫೆ ಮಾಲೀಕರ ಮನೆಗೆ ನುಗ್ಗಿದ ಆರು ಮಂದಿ 25 ಲಕ್ಷ ರೂ. ಹಣ ಕದ್ದಿದ್ದಾರೆ. ಅವರಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಕ್ರೈಂ ಬ್ರಾಂಚ್‌ನವರು ಎಂದು ಹೇಳಿಕೊಂಡ 6 ಮಂದಿ ಮುಂಬೈನ ಸಿಯೋನ್ ಪ್ರದೇಶದಲ್ಲಿ ಕೆಫೆ ಮಾಲೀಕರ ಮನೆಗೆ ನುಗ್ಗಿ 25 ಲಕ್ಷ ರೂಪಾಯಿಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಇದನ್ನೂ ಓದಿ: ‘ಇದು ದರೋಡೆ ಪ್ಲ್ಯಾನ್​’: ಬೆಂಗಳೂರಿನಲ್ಲಿ ನಡೆದ ಹಲ್ಲೆ ಬಗ್ಗೆ ವಿವರ ನೀಡಿದ ಹರ್ಷಿಕಾ

ನಮ್ಮನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ. ನೀವು ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಹಣ ಇಟ್ಟುಕೊಂಡಿದ್ದೀರಿ ಎಂಬ ಮಾಹಿತಿ ಇದೆ ಎಂದು ಆ ಪೊಲೀಸರ ವೇಷದಲ್ಲಿ ಬಂದ ದರೋಡೆಕೋರರು ಹೇಳಿದ್ದಾರೆ. ಇದನ್ನು ಕೇಳಿ ಗಾಬರಿಯಾದ ಕೆಫೆ ಮಾಲೀಕರು ತಮ್ಮ ಮನೆಯನ್ನು ಸರ್ಚ್ ಮಾಡಲು ಅವಕಾಶ ನೀಡಿದ್ದಾರೆ. ಈ ವೇಳೆ ಅವರು 25 ಲಕ್ಷ ರೂ. ಹಣ ದೋಚಿಕೊಂಡು ಹೋಗಿದ್ದಾರೆ ಎಂದು ದೂರು ನೀಡಲಾಗಿದೆ.

ಮುಂಬೈನಲ್ಲಿ ಮೇ 20ರಂದು ಐದನೇ ಹಂತದ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ ನಡೆಯಲಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮನೆಗೆ ನುಗ್ಗಿ ಗನ್ ತೋರಿಸಿ 40 ಲಕ್ಷ ಹಣ ದರೋಡೆ

ಕೆಫೆ ವ್ಯಾಪಾರದಿಂದ ಸಂಗ್ರಹವಾಗಿದ್ದ 25 ಲಕ್ಷ ರೂ. ಹಣ ಮಾತ್ರ ನಮ್ಮ ಮನೆಯಲ್ಲಿದೆ. ಇದು ನನ್ನ ಸ್ವಂತ ದುಡ್ಡು. ಚುನಾವಣೆಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಕೆಫೆ ಮಾಲೀಕರು ದರೋಡೆಕೋರರಿಗೆ ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ. ತನಿಖೆಯ ವೇಳೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಅಪರಾಧದಲ್ಲಿ ನಿವೃತ್ತ ಪೊಲೀಸ್ ಪೇದೆ ಮತ್ತು ಪೊಲೀಸ್ ಮೋಟಾರು ಸಾರಿಗೆ ಇಲಾಖೆಯ ಸಿಬ್ಬಂದಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ