Shocking News: ಸೆಕ್ಯುರಿಟಿಯನ್ನು ಕೊಂದು ಪರಾರಿಯಾದ ಜೀವಾವಧಿ ಶಿಕ್ಷೆಗೊಳಗಾಗಿದ್ದ ಅತ್ಯಾಚಾರಿ

Crime News: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಅತ್ಯಾಚಾರ ಆರೋಪಿ ಜಾರ್ಖಂಡ್ ಪೊಲೀಸರನ್ನು ಯಾಮಾರಿಸಿ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದಾನೆ. ಬಳಿಕ ಭದ್ರತಾ ಸಿಬ್ಬಂದಿಯನ್ನು ಕೊಂದು ಪರಾರಿಯಾಗಿದ್ದಾನೆ. ಆಸ್ಪತ್ರೆಯಿಂದ ಪರಾರಿಯಾಗಿರುವ ಕೈದಿ ಶಾಹಿದ್ ಅನ್ಸಾರಿಯನ್ನು ಸೆರೆಹಿಡಿಯಲು ಶೋಧ ಕಾರ್ಯ ನಡೆಯುತ್ತಿದೆ.

Shocking News: ಸೆಕ್ಯುರಿಟಿಯನ್ನು ಕೊಂದು ಪರಾರಿಯಾದ ಜೀವಾವಧಿ ಶಿಕ್ಷೆಗೊಳಗಾಗಿದ್ದ ಅತ್ಯಾಚಾರಿ
ಸಾಂದರ್ಭಿಕ ಚಿತ್ರ
Follow us
ಸುಷ್ಮಾ ಚಕ್ರೆ
|

Updated on: Aug 12, 2024 | 9:00 PM

ರಾಂಚಿ: ಜಾರ್ಖಂಡ್‌ನ ಹಜಾರಿಬಾಗ್‌ನ ಆಸ್ಪತ್ರೆಯೊಂದರಲ್ಲಿ ಭದ್ರತಾ ಸಿಬ್ಬಂದಿಯನ್ನು ಕೊಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಯೊಬ್ಬ ಪೊಲೀಸ್ ಕಸ್ಟಡಿಯಿಂದ ಪರಾರಿಯಾಗಿದ್ದಾನೆ. ಆರೋಪಿ ಶಾಹಿದ್ ಅನ್ಸಾರಿ ಚಿಕಿತ್ಸೆ ಪಡೆಯುತ್ತಿದ್ದ ಶೇಖ್ ಭಿಖಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.

ಕಬ್ಬಿಣದ ರಾಡ್‌ ಹಿಡಿದುಕೊಂಡು ಪರಾರಿಯಾಗಲು ಪ್ರಯತ್ನಿಸಿದ್ದ ಶಾಹಿದ್ ಅನ್ಸಾರಿ ಘಟನಾ ಸ್ಥಳದಿಂದ ಪರಾರಿಯಾಗುವ ಮೊದಲು ಸಿಬ್ಬಂದಿ ಮೇಲೆ ದಾಳಿ ಮಾಡಿ ಕೊಂದಿದ್ದಾನೆ. ಹಜಾರಿಬಾಗ್ ಪೊಲೀಸ್ ವರಿಷ್ಠಾಧಿಕಾರಿ ಅರವಿಂದ್ ಕುಮಾರ್ ಸಿಂಗ್, ಉಪ ವಿಭಾಗಾಧಿಕಾರಿ (SDO) ಮತ್ತು ಇತರ ಅಧಿಕಾರಿಗಳು ತನಿಖೆಯ ಮೇಲ್ವಿಚಾರಣೆಗಾಗಿ ಆಸ್ಪತ್ರೆಗೆ ತಲುಪಿದರು. ಸಹಾಯಕ್ಕಾಗಿ ಫೋರೆನ್ಸಿಕ್ ತಂಡಗಳನ್ನು ಕರೆಯಲಾಗಿದೆ ಮತ್ತು ಪರಾರಿಯಾದವರನ್ನು ಹಿಡಿಯಲು ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ದೆಹಲಿ ಕೋರ್ಟ್​ ಆವರಣದಲ್ಲಿ ವಕೀಲರಿಂದ ಯುವತಿ ಮೇಲೆ ಅತ್ಯಾಚಾರ, ಪ್ರಕರಣ ದಾಖಲು

ಧನಬಾದ್ ಮೂಲದ ಶಾಹಿದ್ ಅನ್ಸಾರಿಯನ್ನು ಧನಬಾದ್ ಜೈಲಿನಿಂದ ಹಜಾರಿಬಾಗ್ ಕೇಂದ್ರ ಕಾರಾಗೃಹಕ್ಕೆ ವರ್ಗಾಯಿಸಲಾಗಿತ್ತು. ಈತ ಧನಬಾದ್‌ನಲ್ಲಿ ಎರಡು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಒಂದು ಪ್ರಕರಣದಲ್ಲಿ, ಆತನ ಮೇಲೆ ಅತ್ಯಾಚಾರ ಮತ್ತು ಪೋಕ್ಸೊ ಕಾಯ್ದೆ ಸೇರಿದಂತೆ ಹಲವಾರು ಗಂಭೀರ ಅಪರಾಧಗಳ ಆರೋಪ ಹೊರಿಸಲಾಗಿದ್ದು, ಇನ್ನೊಂದು ಪ್ರಕರಣದಲ್ಲಿ ಕೊಲೆ ಮತ್ತು ಇತರ ಗಂಭೀರ ಅಪರಾಧಗಳ ಆರೋಪ ಹೊರಿಸಲಾಗಿತ್ತು. ನ್ಯಾಯಾಲಯ ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಇದನ್ನೂ ಓದಿ: 3 ವರ್ಷದ ಬಾಲಕಿ ಮೇಲೆ ನರ್ಸರಿ ಸ್ಕೂಲ್ ವ್ಯಾನ್ ಚಾಲಕನಿಂದ ಅತ್ಯಾಚಾರ!

ಕಳೆದ 14 ದಿನಗಳಿಂದ ಅನ್ಸಾರಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆತನ ದೇಹದ ಬಲಭಾಗದಲ್ಲಿ ಮರಗಟ್ಟುವಿಕೆ ಉಂಟಾಗಿದ್ದರಿಂದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆತ ದಾಖಲಾಗಿದ್ದ ವೈದ್ಯಕೀಯ ಕಾಲೇಜಿನ ಸಿಸಿಟಿವಿ ದೃಶ್ಯಾವಳಿಯಲ್ಲಿ ಅನ್ಸಾರಿ ಅಪರಾಧ ಎಸಗಿ ಆವರಣದಿಂದ ಓಡಿ ಹೋಗುತ್ತಿರುವುದನ್ನು ನೋಡಬಹುದು.

ಆತ ಪರಾರಿಯಾಗುವ ಸಮಯದಲ್ಲಿ ಯಾವುದೇ ಭದ್ರತಾ ಸಿಬ್ಬಂದಿ ಆಸ್ಪತ್ರೆಯ ಹೊರಗೆ ನಿಂತಿರಲಿಲ್ಲ. ಪೊಲೀಸ್ ಅಧಿಕಾರಿಗಳು ತಮ್ಮ ತನಿಖೆಯನ್ನು ಮುಂದುವರೆಸಿದ್ದು, ಶಾಹಿದ್ ಅನ್ಸಾರಿಯನ್ನು ಸೆರೆಹಿಡಿಯುವ ಪ್ರಯತ್ನಗಳು ಮುಂದುವರೆದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್