ಹೈದರಾಬಾದ್‌ನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಮೇಲೆ ಬಾಲ್ಯ ಸ್ನೇಹಿತರಿಂದ ಸಾಮೂಹಿಕ ಅತ್ಯಾಚಾರ

ಹೈದರಾಬಾದ್​ನಲ್ಲಿ ಸಾಫ್ಟ್​ವೇರ್ ಇಂಜಿನಿಯರ್ ಆಗಿರುವ ಯುವತಿಯ ಮೇಲೆ ಆಕೆಯ ಬಾಲ್ಯ ಸ್ನೇಹಿತ ಮತ್ತು ಆತನ ಕಸಿನ್ ಅತ್ಯಾಚಾರ ನಡೆಸಿದ್ದಾರೆ. ಶಾಲೆಯಲ್ಲಿ ತನ್ನ ಸಹಪಾಠಿಯಾಗಿದ್ದ ಸ್ನೇಹಿತ ಮತ್ತು ಆತನ ಸೋದರಸಂಬಂಧಿ ಕುಡಿದ ಅಮಲಿನಲ್ಲಿ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿ ಯುವತಿ ಪೊಲೀಸರಿಗೆ ದೂರು ನೀಡಿದ್ದಾರೆ.

ಹೈದರಾಬಾದ್‌ನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಮೇಲೆ ಬಾಲ್ಯ ಸ್ನೇಹಿತರಿಂದ ಸಾಮೂಹಿಕ ಅತ್ಯಾಚಾರ
ಸಾಂದರ್ಭಿಕ ಚಿತ್ರ
Follow us
ಸುಷ್ಮಾ ಚಕ್ರೆ
|

Updated on: Jul 30, 2024 | 8:35 PM

ಹೈದರಾಬಾದ್: ಹೈದರಾಬಾದ್​ನಲ್ಲಿ ಭೀಕರ ಘಟನೆಯೊಂದು ನಡೆದಿದ್ದು, 24 ವರ್ಷದ ಯುವತಿಯ ಮೇಲೆ ಆಕೆಯ ಬಾಲ್ಯದ ಸ್ನೇಹಿತ ಮತ್ತು ಆತನ ಸೋದರ ಸಂಬಂಧಿ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹೈದರಾಬಾದ್‌ನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಯುವತಿಯ ಮೇಲೆ ಮದ್ಯದ ಅಮಲಿನಲ್ಲಿ ರೆಸ್ಟೋರೆಂಟ್ ರೂಂನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ.

ಟೆಕ್ಕಿ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ಸೋಮವಾರ ರಾತ್ರಿ ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದಿದ್ದಾಳೆ. ಹೊಸ ಕೆಲಸ ಸಿಕ್ಕಿದ್ದರಿಂದ ಬಾಲ್ಯದ ಗೆಳೆಯ ಹಾಗೂ ಶಾಲೆಯಲ್ಲಿ ತನ್ನ ಸಹಪಾಠಿಯಾಗಿದ್ದ ಯುವಕನ ಜೊತೆ ಸಂಭ್ರಮ ಆಚರಿಸಲು ಬಯಸಿದ್ದ ಆಕೆ ಪಾರ್ಟಿಯೊಂದನ್ನು ಆಯೋಜಿಸಿದ್ದಳು. ಆಕೆ ಹೇಳಿದ ರೆಸ್ಟೋರೆಂಟ್​ಗೆ ತನ್ನ ಕಸಿನ್ ಜೊತೆ ಬಂದಿದ್ದ ಆಕೆಯ ಗೆಳೆಯ ಮದ್ಯದ ಅಮಲಿನಲ್ಲಿ ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಆಕೆ ಆರೋಪಿಸಿದ್ದಾಳೆ.

ಇದನ್ನೂ ಓದಿ: Crime News: ಚಲಿಸುತ್ತಿದ್ದ ಕಾರಿನಲ್ಲಿ 13 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಆಕೆಯ ಅಪ್ಪನಿಗೆ ವಿಡಿಯೋ ಕಳಿಸಿ ಬ್ಲಾಕ್​ಮೇಲ್

ವನಸ್ಥಲಿಪುರಂನಲ್ಲಿರುವ ರೆಸ್ಟೋರೆಂಟ್ ಕಮ್-ಬಾರ್‌ಗೆ ಅವರು ತೆರಳಿದ್ದರು. ಮೂವರೂ ರೆಸ್ಟೋರೆಂಟ್‌ನಲ್ಲಿ ಮದ್ಯ ಸೇವಿಸಿದ್ದಾರೆ. ನಂತರ ಆ ವ್ಯಕ್ತಿ ಅವಳನ್ನು ರೆಸ್ಟೋರೆಂಟ್ ಆವರಣದಲ್ಲಿರುವ ಕೋಣೆಗೆ ಕರೆದೊಯ್ದಿದ್ದಾನೆ. ಕುಡಿದ ಮತ್ತಿನಲ್ಲಿದ್ದ ತನ್ನ ಸ್ನೇಹಿತ ಆ ಕೋಣೆಯೊಳಗೆ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ. ಇದಲ್ಲದೆ, ಆತನ ಸೋದರಸಂಬಂಧಿ ನಂತರ ಕೋಣೆಗೆ ನುಗ್ಗಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Viral Video: ವ್ಯಕ್ತಿಯ ಕುತ್ತಿಗೆಗೆ ಸುತ್ತಿಕೊಂಡು ನುಂಗಲೆತ್ನಿಸಿದ 15 ಅಡಿ ಉದ್ದದ ಹೆಬ್ಬಾವು; ಶಾಕಿಂಗ್ ವಿಡಿಯೋ ವೈರಲ್

ಇದರಿಂದ ಆಘಾತಗೊಂಡ ಆಕೆ ರೂಂನಿಂದ ಹೊರಬಂದ ನಂತರ ತನ್ನ ಸಹೋದರನಿಗೆ ಕರೆ ಮಾಡಿ ಅಈ ವಿಷಯದ ಬಗ್ಗೆ ತಿಳಿಸಿದಳು. ಮಹಿಳೆಯ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ನಡುವೆ ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ