AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಹಣಕ್ಕಾಗಿ ವಾಗ್ವಾದ; ತಾಯಿಯ ತಲೆ ಕತ್ತರಿಸಿ ಕೊಂದ ಮಗ

ತ್ರಿಪುರದಲ್ಲಿ ಅತ್ಯಂತ ಆಘಾತಕಾರಿ ಘಟನೆಯೊಂದು ನಡೆದಿದ್ದು, ಅಮ್ಮ- ಮಗನ ನಡುವೆ ಹಣದ ವಿಷಯಕ್ಕೆ ವಾಗ್ವಾದ ನಡೆದಿದೆ. ಈ ವೇಳೆ ಗಲಾಟೆ ಹೆಚ್ಚಾಗಿ ವಿವಾದದ ನಂತರ ಯುವಕ ತನ್ನ ತಾಯಿಯ ತಲೆ ಕತ್ತರಿಸಿರುವ ಭಯಾನಕ ಘಟನೆ ನಡೆದಿದೆ. ಆ ಯುವಕನನ್ನು ಬಂಧಿಸಲಾಗಿದೆ.

Crime News: ಹಣಕ್ಕಾಗಿ ವಾಗ್ವಾದ; ತಾಯಿಯ ತಲೆ ಕತ್ತರಿಸಿ ಕೊಂದ ಮಗ
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on:Jul 19, 2024 | 5:57 PM

Share

ತ್ರಿಪುರ: ಆಘಾತಕಾರಿ ಘಟನೆಯೊಂದರಲ್ಲಿ ಹಣದ ವಿವಾದದ ಹಿನ್ನೆಲೆಯಲ್ಲಿ ತ್ರಿಪುರದ ಖೋವೈ ಜಿಲ್ಲೆಯ ರತನ್‌ಪುರದಲ್ಲಿ 24 ವರ್ಷದ ಯುವಕನೊಬ್ಬ ತನ್ನ 55 ವರ್ಷದ ತಾಯಿಯ ತಲೆಯನ್ನು ಕತ್ತರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆ ಮಹಿಳೆಯ ಕುಟುಂಬಸ್ಥರು ನೀಡಿದ ದೂರಿನ ಆಧಾರದಲ್ಲಿ ಆಕೆಯನ್ನು ಬಂಧಿಸಲಾಗಿದೆ.

ಪೊಲೀಸ್ ಅಧಿಕಾರಿಯೊಬ್ಬರು ಈ ಬಗ್ಗೆ ಮಾಹಿತಿ ನೀಡಿದ್ದು, ಹರಿಚರಣ್ ಝರಾ ತನ್ನ ತಾಯಿ ಪರ್ಬತಿ ಝರಾ ಅವರ ಬಳಿ ಹಣ ಕೇಳಿದ್ದರು. ಅದು ಇಬ್ಬರ ನಡುವೆ ಜಗಳಕ್ಕೆ ಕಾರಣವಾಯಿತು. ಅದೇ ಜಗಳದಿಂದಾಗಿ ಆತ ತಾಯಿಯ ಶಿರಚ್ಛೇದ ಮಾಡಿದ್ದಾನೆ ಎಂದಿದ್ದಾರೆ.

ಇದನ್ನೂ ಓದಿ: ಹೆತ್ತ ತಾಯಿಯನ್ನೇ ಕೊಂದು ನೇಣು ಹಾಕಿದ ಮಕ್ಕಳು; ಆ ಒಂದು ತಪ್ಪಿನಿಂದ ಕೊಲೆ ಬಯಲು 

ಮಂಗಳವಾರ ತಡರಾತ್ರಿ ಹರಿಚರಣ್ ಪರ್ಬತಿಯ ತಲೆಯ ಮೇಲೆ ಚೂಪಾದ ಆಯುಧದಿಂದ ಹೊಡೆದು ಕತ್ತರಿಸಿದ್ದಾನೆ ಎಂದು ಹೇಳಲಾಗಿದೆ. ನಾವು ಹರಿಚರಣ್‌ನನ್ನು ಹತ್ಯೆಗೈದ ಆಯುಧದೊಂದಿಗೆ ಬಂಧಿಸಿದ್ದೇವೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಆ ಮನೆಯಲ್ಲಿ ರಕ್ತದ ಮಡುವಿನಲ್ಲಿ ಪಾರ್ಬತಿ ಅವರ ಶವ ಪತ್ತೆಯಾಗಿದೆ. ಫೋರೆನ್ಸಿಕ್ ತಂಡವು ಸ್ಥಳಕ್ಕೆ ಭೇಟಿ ನೀಡಿದ್ದು, ಅಪರಾಧ ನಡೆದ ಸ್ಥಳದಿಂದ ಮಾದರಿಗಳನ್ನು ಸಂಗ್ರಹಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:29 pm, Fri, 19 July 24

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು