AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಸೂಟ್‌ಕೇಸ್‌ನಲ್ಲಿ ತುಂಡಾಗಿ ಕತ್ತರಿಸಿದ ಮಹಿಳೆಯ ಶವ ಪತ್ತೆ

ತಮಿಳುನಾಡಿನ ಚೆನ್ನೈನಲ್ಲಿ ಮಹಿಳೆಯ ಮೃತದೇಹವನ್ನು ಕತ್ತರಿಸಿ, ಸೂಟ್​ಕೇಸ್​ನೊಳಗೆ ತುಂಬಿಸಲಾಗಿತ್ತು. ಆ ಸೂಟ್​ಕೇಸ್ ಚೆನ್ನೈನ ರಸ್ತೆಯಲ್ಲಿ ಬಿದ್ದಿತ್ತು. ಅದನ್ನು ಪತ್ತೆಹಚ್ಚಿದ ಪೊಲೀಸರು ಶವವನ್ನು ಪತ್ತೆಹಚ್ಚಿ, ಕೊಲೆಗಾರನನ್ನು ಬಂಧಿಸಿದ್ದಾರೆ. ಮೃತ ಮಹಿಳೆಯ ಮನೆಯಿಂದ 100 ಮೀಟರ್ ದೂರದಲ್ಲಿಯೇ ಸೂಟ್‌ಕೇಸ್‌ನಲ್ಲಿ ಆ ಮಹಿಳೆಯ ಛಿದ್ರಗೊಂಡ ಮೃತದೇಹ ಸೂಟ್​ಕೇಸ್​ನೊಳಗೆ ಪತ್ತೆಯಾಗಿದೆ.

Crime News: ಸೂಟ್‌ಕೇಸ್‌ನಲ್ಲಿ ತುಂಡಾಗಿ ಕತ್ತರಿಸಿದ ಮಹಿಳೆಯ ಶವ ಪತ್ತೆ
ಮೃತ ಮಹಿಳೆ
ಸುಷ್ಮಾ ಚಕ್ರೆ
|

Updated on: Sep 19, 2024 | 6:38 PM

Share

ಚೆನ್ನೈ: ಇಂದು ಬೆಳಗ್ಗೆ ಚೆನ್ನೈನಲ್ಲಿ ರಸ್ತೆ ಬದಿಯಲ್ಲಿ ಎಸೆದಿದ್ದ ಸೂಟ್‌ಕೇಸ್‌ನಲ್ಲಿ ಮಹಿಳೆಯ ಛಿದ್ರಗೊಂಡ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯನ್ನು ಬೇರೆಡೆ ಕೊಲೆ ಮಾಡಿ ಸೂಟ್‌ಕೇಸ್ ಅನ್ನು ತೊರೈಪಾಕ್ಕಂನ ಐಟಿ ಕಾರಿಡಾರ್‌ಗೆ ಹೊಂದಿಕೊಂಡಿರುವ ವಸತಿ ಪ್ರದೇಶದಲ್ಲಿ ಬಿಸಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಚೆನ್ನೈನ ಕುಮಾರನ್ ಕುಡಿಲ್ ನಿವಾಸಿಯೊಬ್ಬರು ಮುಂಜಾನೆ 5.30ರ ಸುಮಾರಿಗೆ ತೊರೈಪಾಕ್ಕಂ ಪ್ರದೇಶದಲ್ಲಿ ಬಿದ್ದಿರುವ ಸೂಟ್‌ಕೇಸ್ ಬಗ್ಗೆ ಪೊಲೀಸರಿಗೆ ತಿಳಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಪೊಲೀಸರು ಆಕೆಯ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪೊಲೀಸರು ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನೂ ವಶಪಡಿಸಿಕೊಂಡಿದ್ದಾರೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: ಬೇರೆ ಜೈಲಿಗೆ ಶಿಫ್ಟ್​ ಮಾಡಿ ಅಂತ ಮನವಿ ಸಲ್ಲಿಸ್ತಾರಾ ಕೊಲೆ ಆರೋಪಿ ದರ್ಶನ್​?

ಮೃತ ಮಹಿಳೆಯನ್ನು ಮನಾಲಿಯ 32 ವರ್ಷದ ದೀಪಾ ಎಂದು ಗುರುತಿಸಲಾಗಿದ್ದು, ಆಕೆ ಅವಿವಾಹಿತೆಯಾಗಿದ್ದಳು. ಚೆನ್ನೈನ ದಕ್ಷಿಣ ಉಪನಗರದ ತೊರೈಪಾಕ್ಕಂ ಬಳಿ ಈ ಭೀಕರ ಹತ್ಯೆ ನಡೆದಿದೆ. ಪೊಲೀಸರು ಶಿವಗಂಗಾ ಜಿಲ್ಲೆಯ ನಿವಾಸಿ ಮಣಿಕಂದನ್ ಎಂಬ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.

ಈ ವರ್ಷದ ಆಗಸ್ಟ್‌ನಲ್ಲಿ ಚೆನ್ನೈನ ಟ್ರಿಪ್ಲಿಕೇನ್ ಪ್ರದೇಶದಲ್ಲಿ 28 ವರ್ಷದ ಮಹಿಳೆಯನ್ನು ಹೊಟೇಲ್ ಕೊಠಡಿಯೊಳಗೆ ವ್ಯಕ್ತಿಯೊಬ್ಬ ಕತ್ತು ಹಿಸುಕಿ ಕೊಂದಿದ್ದ.

ಕಳೆದ ವರ್ಷ 20 ವರ್ಷದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಚೆನ್ನೈನ ಹೋಟೆಲ್‌ನಲ್ಲಿ ಆಕೆಯ ಗೆಳೆಯನಿಂದ ಕೊಲ್ಲಲ್ಪಟ್ಟಳು. ನಂತರ ಆತ ಆಕೆಯ ಮೃತದೇಹದ ಫೋಟೋವನ್ನು ತನ್ನ ವಾಟ್ಸಾಪ್ ಸ್ಟೋರಿಯಲ್ಲಿ ಪೋಸ್ಟ್ ಮಾಡಿದ್ದ. ಆಶಿಕ್ ಎಂದು ಗುರುತಿಸಲಾದ ಆ ಆರೋಪಿಯ ವಾಟ್ಸಾಪ್ ಸ್ಟೇಟಸ್ ಅನ್ನು ಮೃತ ಮಹಿಳೆಯ ಸ್ನೇಹಿತರು ಗಮನಿಸಿದ ನಂತರ ಕೊಲೆ ಬೆಳಕಿಗೆ ಬಂದಿತ್ತು.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಶೀಲ ಶಂಕಿಸಿ ಹೆಂಡತಿಯ ಕೊಲೆ; ಅಪರಾಧಿಗೆ ಜೀವಾವಧಿ ಶಿಕ್ಷೆ ಪ್ರಕಟ

ಅಧಿಕಾರಿಗಳ ಪ್ರಕಾರ, ಮಣಿಕಂಠನ್ ತಾನೇ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ. ಕೊಲೆಯ ಉದ್ದೇಶ ಮತ್ತು ಸನ್ನಿವೇಶಗಳ ಕುರಿತು ಹೆಚ್ಚಿನ ವಿವರಗಳನ್ನು ಇನ್ನೂ ತನಿಖೆ ಮಾಡಲಾಗುತ್ತಿದೆ. ಥೋರೈಪಕ್ಕಂ ಪೊಲೀಸರು ತನಿಖೆ ಆರಂಭಿಸಿದ್ದು, ಕೊಲೆ ಬೇರೆಡೆ ನಡೆದಿದ್ದು, ಶವವನ್ನು ಆ ಪ್ರದೇಶದಲ್ಲಿ ಬಿಸಾಡಲಾಗಿದೆ ಎಂದು ಶಂಕಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ