Crime News: ಹುಟ್ಟುಹಬ್ಬದ ದಿನವೇ ಮಹಿಳೆಗೆ ಡ್ರಗ್ಸ್ ನೀಡಿ ಅತ್ಯಾಚಾರ

ತನ್ನ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಮಹಿಳೆಗೆ ಆ ದಿನವೇ ಕರಾಳ ದಿನವಾಗಿ ಮಾರ್ಪಟ್ಟಿದೆ. ಆಕೆಗೆ ಮಾದಕ ದ್ರವ್ಯ ನೀಡಿ, ಆಕೆಯ ಮೇಲೆ ಅತ್ಯಾಚಾರ ಎಸಗಿರುವ ಹೀನಕೃತ್ಯ ಮಹಾರಾಷ್ಟ್ರದಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದೆ.

Crime News: ಹುಟ್ಟುಹಬ್ಬದ ದಿನವೇ ಮಹಿಳೆಗೆ ಡ್ರಗ್ಸ್ ನೀಡಿ ಅತ್ಯಾಚಾರ
ಅತ್ಯಾಚಾರ
Follow us
ಸುಷ್ಮಾ ಚಕ್ರೆ
|

Updated on: Sep 06, 2024 | 10:09 PM

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದ ಹುಟ್ಟುಹಬ್ಬದ ಪಾರ್ಟಿಯಲ್ಲಿ 22 ವರ್ಷದ ಮಹಿಳೆಗೆ ಡ್ರಗ್ಸ್ ನೀಡಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಓರ್ವ ಮಹಿಳೆ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಇಂದು ಪಿಟಿಐ ವರದಿ ಮಾಡಿದೆ.

ಬುಧವಾರ ಮತ್ತು ಗುರುವಾರ ಮಧ್ಯರಾತ್ರಿ ಬದ್ಲಾಪುರದ ಶಿರ್ಗಾಂವ್ ಪ್ರದೇಶದ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳಾದ ಸಂತೋಷ್ ಶಿವರಾಮ್ ರೂಪವತೆ (40), ಶಿವಂ ಸಂಜಯ್ ರಾಜೇ (23), ಮತ್ತು ಅಲಿಸ್ಕಾ ಅಲಿಯಾಸ್ ಭೂಮಿಕಾ ರವೀಂದ್ರ ಮೆಶ್ರಾಮ್ (20) ಅವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: Crime News: ಮಹಿಳೆಯ ಮೇಲೆ ಅತ್ಯಾಚಾರ, ಬೆತ್ತಲೆಯಾಗಿ ಡ್ಯಾನ್ಸ್ ಮಾಡಿಸಿದ ಕಾಮುಕರು

ಅತ್ಯಾಚಾರಕ್ಕೊಳಗಾದ ಮಹಿಳೆಯ ಗೆಳತಿ ಅಲಿಸ್ಕಾ ಆಕೆಯ ಹುಟ್ಟುಹಬ್ಬ ಆಚರಿಸುವುದಾಗಿ ಆಕೆಯನ್ನು ತನ್ನ ಮನೆಗೆ ಆಹ್ವಾನಿಸಿದ್ದಳು. ಈ ವೇಳೆ ಇತರ ಇಬ್ಬರು ಆರೋಪಿಗಳು ಅಲ್ಲಿ ಹಾಜರಿದ್ದರು. ಪಾರ್ಟಿಯ ನಂತರ ಇಬ್ಬರು ವ್ಯಕ್ತಿಗಳು ಮಲಗುವ ಕೋಣೆಯಲ್ಲಿ ಮದ್ಯ ಸೇವಿಸಲು ಪ್ರಾರಂಭಿಸಿದರು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಈ ವೇಳೆ ಪಾರ್ಟಿ ಮುಗಿಸಿ ಮಹಿಳೆ ಹೊರಡಲು ಎದ್ದಾಗ, ಆಕೆಯ ಗೆಳತಿ ಅಲಿಸ್ಕಾ ಇನ್ನೂ ಸ್ವಲ್ಪ ಹೊತ್ತು ಇದ್ದು ಹೋಗುವಂತೆ ಹೇಳಿದಳು. ನನಗೆ ಸುಸ್ತಾಗುತ್ತಿದೆ ಎಂದು ಆಕೆ ಹೇಳಿದಾಗ ನಿಂಬೆ ಹಣ್ಣಿನ ಪಾನಕ ಮಾಡಿಕೊಡುವುದಾಗಿ ಅಡುಗೆಮನೆಗೆ ಹೋಗಿ ಆ ಜ್ಯೂಸ್​ನಲ್ಲಿ ಡ್ರಗ್ಸ್​ ಬೆರೆಸಿದ್ದಾಳೆ. ಅದನ್ನು ಸೇವಿಸಿದ ನಂತರ ಆ ಮಹಿಳೆ ತಲೆತಿರುಗುವಿಕೆಯನ್ನು ಅನುಭವಿಸಲು ಪ್ರಾರಂಭಿಸಿದಳು ಎಂದು ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: ಮಹಿಳೆಗೆ ಮದ್ಯ ಕುಡಿಸಿ ಬೆಳ್ಳಂಬೆಳಗ್ಗೆ ರಸ್ತೆಯಲ್ಲೇ ಅತ್ಯಾಚಾರ

ಆಗ ಆಕೆಯನ್ನು ಕುಡಿದ ಅಮಲಿನಲ್ಲಿದ್ದ ಇಬ್ಬರು ರೂಮಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾರೆ. ನಂತರ ಪ್ರಜ್ಞಾಹೀನಳಾಗಿದ್ದ ಆಕೆಯನ್ನು ಬಾತ್​ರೂಮಿನಲ್ಲಿ ಮಲಗಿಸಿ ಅಲ್ಲಿಂದ ಪರಾರಿಯಾಗಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ