ಮಾವನಿಂದ ಸೊಸೆ ಮೇಲೆ ಅತ್ಯಾಚಾರ; ಹೆಂಡತಿಯನ್ನೇ ತಾಯಿ ಎಂದ ಗಂಡ!

ತನ್ನ ಹೆಂಡತಿಯ ಮೇಲೆ ತನ್ನ ತಂದೆ ಅತ್ಯಾಚಾರವೆಸಗಿದ್ದಾನೆ ಎಂಬುದು ತಿಳಿಯುತ್ತಿದ್ದಂತೆ ಅಪ್ಪನನ್ನು ಪ್ರಶ್ನೆ ಮಾಡುವ ಬದಲು ಆ ವ್ಯಕ್ತಿ ತನ್ನ 26 ವರ್ಷದ ಪತ್ನಿಯನ್ನೇ ಥಳಿಸಿ ಆಕೆಯನ್ನು ಮನೆಯಿಂದ ಹೊರಹಾಕಿದ್ದಾನೆ. ಈ ವಿಚಿತ್ರ ಘಟನೆ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯಲ್ಲಿ ನಡೆದಿದೆ.

ಮಾವನಿಂದ ಸೊಸೆ ಮೇಲೆ ಅತ್ಯಾಚಾರ; ಹೆಂಡತಿಯನ್ನೇ ತಾಯಿ ಎಂದ ಗಂಡ!
ಅತ್ಯಾಚಾರImage Credit source: India Today
Follow us
ಸುಷ್ಮಾ ಚಕ್ರೆ
|

Updated on: Sep 14, 2023 | 6:43 PM

ಮುಜಾಫರ್​ನಗರ: ಗಂಡ ಮನೆಯಲ್ಲಿ ಇಲ್ಲದಿದ್ದಾಗ ಮಹಿಳೆಯೊಬ್ಬಳ ಮೇಲೆ ಆಕೆಯ ಗಂಡನ ತಂದೆಯೇ ಅತ್ಯಾಚಾರ ಎಸಗಿದ್ದಾರೆ. ಈ ವಿಷಯ ಯಾರಿಗೂ ಹೇಳದಂತೆ ಆಕೆಗೆ ಜೀವ ಬೆದರಿಕೆಯನ್ನೂ ಹಾಕಿದ್ದಾರೆ. ಆದರೆ, ಆ ಮಹಿಳೆ ಧೈರ್ಯ ಮಾಡಿ ಈ ವಿಷಯವನ್ನು ತನ್ನ ಗಂಡನ ಬಳಿ ಹೇಳಿದಾಗ ಆಕೆಗೆ ಆಘಾತ ಕಾದಿತ್ತು. ‘ನನ್ನ ಅಪ್ಪನ ಜೊತೆ ದೈಹಿಕ ಸಂಬಂಧ ಹೊಂದಿದ ನೀನು ನನ್ನ ಅಮ್ಮನ ಸಮಾನ. ನಿನ್ನೊಂದಿಗೆ ನಾನು ಸಂಸಾರ ಮಾಡಲು ಸಾಧ್ಯವಿಲ್ಲ’ ಎಂದು ಆ ವ್ಯಕ್ತಿ ಅತ್ಯಾಚಾರಕ್ಕೊಳಗಾದ ತನ್ನ ಹೆಂಡತಿಯನ್ನು ಮನೆಯಿಂದ ಹೊರಹಾಕಿದ್ದಾನೆ.

ಈ ವಿಚಿತ್ರ ಘಟನೆ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯಲ್ಲಿ ನಡೆದಿದೆ. ತನ್ನ ಹೆಂಡತಿಯ ಮೇಲೆ ತನ್ನ ತಂದೆ ಅತ್ಯಾಚಾರವೆಸಗಿದ್ದಾನೆ ಎಂಬುದು ತಿಳಿಯುತ್ತಿದ್ದಂತೆ ಅಪ್ಪನನ್ನು ಪ್ರಶ್ನೆ ಮಾಡುವ ಬದಲು ಆ ವ್ಯಕ್ತಿ ತನ್ನ 26 ವರ್ಷದ ಪತ್ನಿಯನ್ನೇ ಥಳಿಸಿ ಆಕೆಯನ್ನು ಮನೆಯಿಂದ ಹೊರಹಾಕಿದ್ದಾನೆ. ಈ ವಿಚಾರವಾಗಿ ನ್ಯಾಯ ಕೋರಿ ಆ ಮಹಿಳೆ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾಳೆ.

ಇದನ್ನೂ ಓದಿ: ಪತ್ನಿ ಕಾಟಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಪತಿ, ಆಡಿಯೋ ಮೆಸೇಜ್​ನಲ್ಲಿ ಹೆಂಡ್ತಿಯ ಕರಾಳ ಮುಖ ಬಿಚ್ಚಿಟ್ಟ

ನನ್ನ ತಂದೆ ನಿನ್ನೊಂದಿಗೆ ಬಲವಂತವಾಗಿ ದೈಹಿಕ ಸಂಬಂಧ ಹೊಂದಿದ್ದಾನೆ. ಈಗ ನೀನು ನನ್ನ ತಂದೆಯ ಹೆಂಡತಿಯಿದ್ದಂತೆ. ಅಂದರೆ, ನನಗೆ ನೀನು ತಾಯಿ ಇದ್ದಂತೆ. ಹೀಗಾಗಿ, ನೀನು ನನ್ನೊಡನೆ ಇರಲು ಸಾಧ್ಯವಿಲ್ಲ ಎಂದು ಆ ವ್ಯಕ್ತಿ ಹೇಳಿರುವುದಾಗಿ ಮಹಿಳೆ ದೂರು ನೀಡಿದ್ದಾಳೆ.

ಕಳೆದ ವರ್ಷ ವಿವಾಹವಾಗಿದ್ದ ಮಹಿಳೆ ಸೆಪ್ಟೆಂಬರ್ 7ರಂದು ಸಲ್ಲಿಸಿದ ದೂರಿನಲ್ಲಿ, ಆಗಸ್ಟ್ 5ರಂದು ನನ್ನ ಪತಿ ಮನೆಯಲ್ಲಿ ಇಲ್ಲದಿದ್ದಾಗ ನನ್ನ ಮಾವ ನನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಿದ್ದಾರೆ. ನನ್ನ ಗಂಡ ಅವರ ತಾಯಿಯನ್ನು ವೈದ್ಯರ ಬಳಿ ಕರೆದುಕೊಂಡು ಹೋಗಿದ್ದಾಗ ಮನೆಯಲ್ಲಿ ನಾನು ಮತ್ತು ನನ್ನ ಗಂಡನ ತಂದೆ ಇಬ್ಬರೇ ಇದ್ದೆವು. ಆಗ ಬಲವಂತವಾಗಿ ನನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಬಳಿಕ ನನಗೆ ಬೆದರಿಕೆಯನ್ನೂ ಹಾಕಿದ್ದಾರೆ ಎಂದು ಆಕೆ ಆರೋಪಿಸಿದ್ದಾರೆ.

ಇದನ್ನೂ ಓದಿ: ಕಲಬುರಗಿ: ಗುಂಡು ಹಾರಿಸಿ ಪತಿಯಿಂದಲೇ ಪತ್ನಿಯ ಕೊಲೆ; ಕಾರಣವೇನು ಗೊತ್ತಾ?

ಆ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆಕೆಯ ಮಾವ ಮತ್ತು ಗಂಡನ ವಿರುದ್ಧ ಕಾನೂನು ಕ್ರಮಗಳನ್ನು ಪ್ರಾರಂಭಿಸಿದ್ದಾರೆ. ಆದರೆ, ಆಕೆಯ ಮಾವ ಈ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಹಣದ ಲಾಭಕ್ಕಾಗಿ ಆಕೆ ತಮ್ಮ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಹೇಳಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ