AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣ್ಣಾದ ಕೈಗಳಿಂದ ಸೈಕಲ್ ಮುಟ್ಟಿದ ಬಾಲಕಿಯ ಕತ್ತು ಸೀಳಿ ಕೊಂದ ಯುವಕ!

ಆರೋಪಿ ದೀಪಕ್ ತನ್ನ ಮನೆಯ ಮುಂದೆ ಸೈಕಲ್ ನಿಲ್ಲಿಸಿದ್ದಾಗ ಅವರ ಪಕ್ಕದ ಮನೆಯಲ್ಲಿ ವಾಸವಾಗಿದ್ದ 5 ವರ್ಷದ ಬಾಲಕಿ ರಿಮ್ಜಿಮ್ ಮಣ್ಣಾದ ಕೈಗಳಿಂದ ಆ ಸೈಕಲ್ ಮುಟ್ಟಿದ್ದಾಳೆ. ಇದರಿಂದ ಕೋಪಗೊಂಡ ದೀಪಕ್ ಚೂಪಾದ ಆಯುಧವನ್ನು ತೆಗೆದು ಬಾಲಕಿಯ ಕತ್ತು ಸೀಳಿ ಕೊಲೆ ಮಾಡಿದ್ದಾರೆ.

ಮಣ್ಣಾದ ಕೈಗಳಿಂದ ಸೈಕಲ್ ಮುಟ್ಟಿದ ಬಾಲಕಿಯ ಕತ್ತು ಸೀಳಿ ಕೊಂದ ಯುವಕ!
ಸಾಂದರ್ಭಿಕ ಚಿತ್ರImage Credit source: iStock
Follow us
ಸುಷ್ಮಾ ಚಕ್ರೆ
|

Updated on: Sep 21, 2023 | 7:26 PM

ಗೋರಖ್​ಪುರ: ಮನೆಯ ಮುಂದೆ ನಿಲ್ಲಿಸಿದ್ದ ತನ್ನ ಸೈಕಲನ್ನು 5 ವರ್ಷದ ಬಾಲಕಿಯೊಬ್ಬಳು ಮಣ್ಣಿನ ಕೈಗಳಿಂದ ಮುಟ್ಟಿದಳು ಎಂಬ ಕಾರಣಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬರು ಆಕೆಯ ಕುತ್ತಿಗೆ ಸೀಳಿ, ಕೊಲೆ ಮಾಡಿರುವ ಆಘಾತಕಾರಿ ಘಟನೆ ಮಹಾರಾಜ್‌ಗಂಜ್ ಜಿಲ್ಲೆಯ ರಾಮಚಂದ್ರಾಹಿ ಗ್ರಾಮದಲ್ಲಿ ನಡೆದಿದೆ. ಬುಧವಾರ ಸಂಜೆ ಈ ಘಟನೆ ನಡೆದಿದ್ದು, ಆರೋಪಿ ದೀಪಕ್ ತನ್ನ ಮನೆಯ ಮುಂದೆ ಸೈಕಲ್ ನಿಲ್ಲಿಸಿದ್ದಾಗ ಅವರ ಪಕ್ಕದ ಮನೆಯಲ್ಲಿ ವಾಸವಾಗಿದ್ದ ಗಣೇಶ್ ಧನಕರ್ ಅವರ 5 ವರ್ಷದ ಮಗಳು ರಿಮ್ಜಿಮ್ ಮಣ್ಣಾದ ಕೈಗಳಿಂದ ಆ ಸೈಕಲ್ ಮುಟ್ಟಿದ್ದಾಳೆ. ಇದರಿಂದ ಕೋಪಗೊಂಡ ದೀಪಕ್ ಚೂಪಾದ ಆಯುಧವನ್ನು ತೆಗೆದು ಬಾಲಕಿಯ ಕತ್ತು ಸೀಳಿ ಕೊಲೆ ಮಾಡಿದ್ದಾರೆ.

ಕೊಲೆ ಮಾಡಿದ ಆರೋಪಿಯನ್ನು 21 ವರ್ಷದ ದಿಲೀಪ್ ಎಂದು ಗುರುತಿಸಲಾಗಿದ್ದು, ಕೊಲೆ ಮಾಡಿದ ನಂತರ ಭಯದಿಂದ ಅವರು ಪೊಲೀಸರಿಂದ ತಪ್ಪಿಸಿಕೊಳ್ಳಲು ಟೆರೇಸ್​ನಿಂದ ಜಿಗಿದಿದ್ದಾರೆ. ಆ ಸಂದರ್ಭದಲ್ಲಿ ಅವರ ಎರಡೂ ಕಾಲುಗಳು ಮುರಿದಿವೆ. ನಂತರ ಅವರನ್ನು ಬಂಧಿಸಿ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಆಟೋದಲ್ಲಿ ಕಿಡ್ನಾಪ್ ಮಾಡಿಕೊಂಡು ಹೋಗಿ ಕುತ್ತಿಗೆ ಕೊಯ್ದು ಕೊಲೆ

ದೀಪಕ್ ವಿರುದ್ಧ ಮೃತ ಬಾಲಕಿಯ ಕುಟುಂಬಸ್ಥರು ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ಮಾಡಿದ್ದಾರೆ. ಆ ಯುವಕನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಘಟನೆಯ ನಂತರ ಇಡೀ ಗ್ರಾಮ ಉದ್ವಿಗ್ನಗೊಂಡಿದೆ. ಕತ್ತು ಸೀಳಿದ್ದರಿಂದ ಸ್ಥಳದಲ್ಲೇ ಮೃತಪಟ್ಟ 5 ವರ್ಷದ ಬಾಲಕಿಯ ಮೃತದೇಹವನ್ನು ನಿಚ್ಲಾಲ್ ಪೊಲೀಸರು ಶವಪರೀಕ್ಷೆಗೆ ಕಳುಹಿಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ
ಒಳ್ಳೆಯ ಕೆಲಸ ಮಾಡಿದವರನ್ನು ಅಭಿನಂದಿಸಲೇಬೇಕು: ಬಸನಗೌಡ ಯತ್ನಾಳ್
ಒಳ್ಳೆಯ ಕೆಲಸ ಮಾಡಿದವರನ್ನು ಅಭಿನಂದಿಸಲೇಬೇಕು: ಬಸನಗೌಡ ಯತ್ನಾಳ್