AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಬಾಲಿವುಡ್ ಸಿನಿಮಾ ನೋಡಿ ಮನೆಕೆಲಸದ ಬಾಲಕನಿಂದ ವಿಕಲಚೇತನ ಯುವಕನ ಕೊಲೆ

ಬಾಲಾಪರಾಧಿಯು ಬಾಲಿವುಡ್​ನ ತೋ ಚೋರ್ ಮೇ ಸಿಪಾಹಿ ಸಿನಿಮಾದಿಂದ ಸ್ಫೂರ್ತಿ ಪಡೆದಿದ್ದ. ಆತ ಆ ಸಿನಿಮಾದಲ್ಲಿ ತೋರಿಸಿರುವಂತೆ ಕಪ್ಪು ಬಣ್ಣದ ಗ್ಲೌಸ್​ ಹಾಕಿಕೊಂಡು, ಅದನ್ನು ಆ ಸ್ಥಳದಲ್ಲಿಯೇ ಬಿಟ್ಟು ಹೋಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Crime News: ಬಾಲಿವುಡ್ ಸಿನಿಮಾ ನೋಡಿ ಮನೆಕೆಲಸದ ಬಾಲಕನಿಂದ ವಿಕಲಚೇತನ ಯುವಕನ ಕೊಲೆ
ಪ್ರಾತಿನಿಧಿಕ ಚಿತ್ರImage Credit source: India Today
TV9 Web
| Updated By: ಸುಷ್ಮಾ ಚಕ್ರೆ|

Updated on: Sep 02, 2022 | 1:02 PM

Share

ನವದೆಹಲಿ: ಸಿನಿಮಾಗಳು ಜನರ ಮೇಲೆ ಬಹಳ ಗಾಢವಾದ ಪರಿಣಾಮ ಬೀರುತ್ತವೆ. ಸಿನಿಮಾವನ್ನು ನೋಡಿಯೇ ಅದೆಷ್ಟೋ ಕೊಲೆಗಳನ್ನು (Murder) ಮಾಡಿದ ಉದಾಹರಣೆಗಳೂ ಇವೆ. ಇದೀಗ ಸಿನಿಮಾದ ಪ್ರಭಾವದಿಂದ ಸಿನಿಮೀಯ ಶೈಲಿಯಲ್ಲಿ ದಕ್ಷಿಣ ದೆಹಲಿಯ ಸಫ್ದರ್‌ಜಂಗ್ ಪ್ರದೇಶದಲ್ಲಿ ವಿಕಲಚೇತನ ಯುವಕನನ್ನು ಕೊಂದ ಆರೋಪದ ಮೇಲೆ 17 ವರ್ಷದ ಬಾಲಕನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಆ ಬಾಲಕ ಮನೆಗೆಲಸದ ಸಹಾಯಕನಾಗಿ ಯುವಕನ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಆ ವಿಕಲಚೇತನ ಯುವಕನ ಪೋಷಕರು ದೇವಸ್ಥಾನಕ್ಕೆ ಹೋಗಿದ್ದರು. ಆಗ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ 17 ವರ್ಷದ ಬಾಲಕ ಆ ಯುವಕನನ್ನು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಾಪರಾಧಿಯು ಬಾಲಿವುಡ್​ನ ತೋ ಚೋರ್ ಮೇ ಸಿಪಾಹಿ ಸಿನಿಮಾದಿಂದ ಸ್ಫೂರ್ತಿ ಪಡೆದಿದ್ದ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಆತ ಆ ಸಿನಿಮಾದಲ್ಲಿ ತೋರಿಸಿರುವಂತೆ ಕಪ್ಪು ಬಣ್ಣದ ಗ್ಲೌಸ್​ ಹಾಕಿಕೊಂಡು, ಅದನ್ನು ಆ ಸ್ಥಳದಲ್ಲಿಯೇ ಬಿಟ್ಟು ಹೋಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Big News: ಶಾಪಿಂಗ್​​ಗೆಂದು ಹೋಗಿದ್ದ ಬಿಜೆಪಿ ನಾಯಕನ ಮೇಲೆ ಗುಂಡು ಹಾರಿಸಿ ಹತ್ಯೆ

ಪೊಲೀಸರ ಪ್ರಕಾರ, ಮೃತನ ಪೋಷಕರು ಮತ್ತು ಅಜ್ಜಿ ದೇವಸ್ಥಾನಕ್ಕೆ ಹೋಗಿದ್ದರು. ಅದಾದ 1 ಗಂಟೆಯ ನಂತರ ಆ ಮೃತ ವ್ಯಕ್ತಿಯ ಸಹೋದರಿ ತನ್ನ ವಿಕಲಚೇತನನಾದ ತಮ್ಮನನ್ನು 3 ತಿಂಗಳ ಹಿಂದೆ ತಮ್ಮ ಮನೆಯಲ್ಲಿ ಕೆಲಸಕ್ಕೆ ಸೇರಿದ್ದ ಸೇವಕನ ಜೊತೆಗೆ ಕಳುಹಿಸಿದ್ದಳು. ಆದರೆ, ಅವಳು ಮನೆಗೆ ಹಿಂತಿರುಗಿ ಬಂದಾಗ ತನ್ನ ಸಹೋದರ ಪ್ರಜ್ಞಾಹೀನ ಸ್ಥಿತಿಯಲ್ಲಿ ಹಾಸಿಗೆಯ ಮೇಲೆ ಮಲಗಿದ್ದ. ಆಗ ತನ್ನ ಮನೆಯ ಸಹಾಯಕ ಕಾಣೆಯಾಗಿರುವುದನ್ನು ನೋಡಿ ಅವಳಿಗೆ ಗಾಬರಿಯಾಗಿದೆ.

ಆಗ ಆ ಮನೆಯನ್ನು ಪರಿಶೀಲಿಸಿದಾಗ ಕೆಲವು ಆಭರಣಗಳು, ಮೊಬೈಲ್ ಫೋನ್ ಮತ್ತು ಸುಮಾರು 40 ಸಾವಿರ ರೂ. ನಗದು ನಾಪತ್ತೆಯಾಗಿರುವುದು ದೃಢಪಟ್ಟಿದೆ. ಕೊಲೆ ಮಾಡಿರುವ ಅಪರಾಧಿ ಬಿಹಾರದ ಸೀತಾಮರ್ಹಿಯಲ್ಲಿರುವ ತನ್ನ ಹುಟ್ಟೂರಿಗೆ ಪರಾರಿಯಾಗಲು ಪ್ರಯತ್ನಿಸುತ್ತಿದ್ದಾಗ ನವದೆಹಲಿ ರೈಲು ನಿಲ್ದಾಣದಿಂದ ಬಂಧಿಸಲಾಯಿತು. ಆತನ ಬಳಿಯಿದ್ದ ಚಿನ್ನಾಭರಣ ಹಾಗೂ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: ಕೊಲೆ ಆರೋಪದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ಕಾಂಗ್ರೆಸ್ ನಾಯಕನಿಗೆ ಹಾಲಿನ ಅಭಿಷೇಕ

ಪೊಲೀಸ್ ವಿಚಾರಣೆಯ ಸಮಯದಲ್ಲಿ ತಾನೇ ಕೊಲೆ ಮಾಡಿದ್ದಾಗಿ 17 ವರ್ಷದ ಬಾಲಕ ಒಪ್ಪಿಕೊಂಡಿದ್ದು, ನಾನು ಮನೆಯನ್ನು ಕ್ಲೀನ್ ಮಾಡುತ್ತಿದ್ದಾಗ ನನಗೆ ಸಾಕಷ್ಟು ಅವಮಾನ ಮಾಡುತ್ತಿದ್ದರು. ನಾನು ಆ ಮನೆಯನ್ನು ಬಿಟ್ಟು ಹೊರಡುವ ಮೊದಲು ಹಣ ಸಂಪಾದಿಸಬೇಕೆಂದು ಆ ಮನೆಯನ್ನು ದರೋಡೆ ಮಾಡಲು ಯೋಚಿಸಿದ್ದೆ. ಆದರೆ ವಿಕಲಚೇತನ ಯುವಕ ನಾನು ದರೋಡೆ ಮಾಡುವುದನ್ನು ನೋಡಿದ್ದರಿಂದ ಭಯದಿಂದ ಆತನನ್ನು ಕೊಲೆ ಮಾಡಿದೆ ಎಂದು ಹೇಳಿಕೆ ನೀಡಿದ್ದಾನೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?