Shocking News: ಗೆಳೆಯನ ತಾಯಿಯ ಮೇಲೆ ಯುವಕನಿಂದ ಅತ್ಯಾಚಾರ; ಹೇಯ ಕೃತ್ಯ ಬಯಲು

Crime News Today: ತನ್ನ ಗೆಳೆಯನ ತಾಯಿಯ ಮೇಲೆ ಮೋಹ ಬೆಳೆಸಿಕೊಂಡಿದ್ದ ಯುವಕನೊಬ್ಬ ಆಕೆಗೆ ಹೆದರಿಸಿ, ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಮಗನೊಂದಿಗೆ ಮನೆಗೆ ಆಗಾಗ ಬರುತ್ತಿದ್ದ ಆತನ ಸ್ನೇಹಿತನಿಂದಲೇ ತಾಯಿ ಅತ್ಯಾಚಾರಕ್ಕೆ ಒಳಗಾಗಿರುವ ಅಮಾನವೀಯ ಕೃತ್ಯವೊಂದು ಬೆಳಕಿಗೆ ಬಂದಿದೆ.

Shocking News: ಗೆಳೆಯನ ತಾಯಿಯ ಮೇಲೆ ಯುವಕನಿಂದ ಅತ್ಯಾಚಾರ; ಹೇಯ ಕೃತ್ಯ ಬಯಲು
ಅತ್ಯಾಚಾರ

Updated on: Jul 15, 2024 | 6:11 PM

ನವದೆಹಲಿ: ಭೋಪಾಲ್‌ನಲ್ಲಿ 43 ವರ್ಷದ ಮಹಿಳೆಯೊಬ್ಬಳ ಮೇಲೆ ಆಕೆಯ ಮಗನ ಸ್ನೇಹಿತ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಭೂಪಾಲ್​ನ ಅವಧಪುರಿಯಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ತನ್ನ ಗೆಳೆಯನ ತಾಯಿಯ ಮೇಲೆಯೇ ಯುವಕನೊಬ್ಬ ಅತ್ಯಾಚಾರವೆಸಗಿದ್ದಾನೆ. ಅತ್ಯಾಚಾರವನ್ನು ಆಕೆ ವಿರೋಧಿಸಿದ್ದಕ್ಕಾಗಿ ಆಕೆಯ ಮಗನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ಆಕೆಯನ್ನು ಬ್ಲಾಕ್​ಮೇಲ್ ಮಾಡಿ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಆರೋಪಿಯು ಮಹಿಳೆಯ ಮೇಲೆ ದೌರ್ಜನ್ಯವೆಸಗಿದ್ದಾನೆ. ಅತ್ಯಾಚಾರದ ವಿಷಯವನ್ನು ಯಾರಿಗಾದರೂ ಹೇಳಿದರೆ ಆಕೆಯ ಮಗನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ಇದಾದ ಬಳಿಕ ಆರೋಪಿ ಆ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಸ್ಥಳದಿಂದ ಪರಾರಿಯಾಗಿದ್ದಾನೆ. ಮರುದಿನ ಮಹಿಳೆ ಪೊಲೀಸರಿಗೆ ದೂರು ನೀಡಿ ಆರೋಪಿಗಳ ವಿರುದ್ಧ ಕೇಸ್ ದಾಖಲಿಸಿದ್ದಾರೆ.

ಇದನ್ನೂ ಓದಿ: Crime News: ಅಶ್ಲೀಲ ವಿಡಿಯೋ ನೋಡಿ ಬಾಲಕನ ಮೇಲೆ ಅತ್ಯಾಚಾರವೆಸಗಿ ಕೊಂದ ಮದರಸಾ ಶಿಕ್ಷಕ

ಅತ್ಯಾಚಾರಕ್ಕೊಳಗಾದ ಮಹಿಳೆಯ ಮಗನ ಸ್ನೇಹಿತನಾಗಿರುವ ಆರೋಪಿಯು ಅತ್ಯಾಚಾರದ ಪ್ರಯತ್ನವನ್ನು ವಿರೋಧಿಸಿದರೆ ತನ್ನ ಮಗನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿ ನಂತರ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಈ ಅತ್ಯಾಚಾರ ಘಟನೆಯು ಜುಲೈ 12ರಂದು ಭೋಪಾಲ್‌ನ ಅವಧಪುರಿ ಪ್ರದೇಶದಲ್ಲಿ ಸಂಭವಿಸಿದೆ.

ಇದನ್ನೂ ಓದಿ: ಪಕ್ಕದ ಮನೆಯವನಿಂದ ಅತ್ಯಾಚಾರ; ಬಾತ್​ರೂಂ ಕ್ಲೀನರ್ ಸೇವಿಸಿ ಯುವತಿ ಆತ್ಮಹತ್ಯೆಗೆ ಯತ್ನ

ಟೈಮ್ಸ್ ಆಫ್ ಇಂಡಿಯಾದ ವರದಿ ಪ್ರಕಾರ, ಆರೋಪಿ ಮತ್ತು ಅತ್ಯಾಚಾರಕ್ಕೊಳಗಾದ ಮಹಿಳೆ ಒಂದೇ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಶುಕ್ರವಾರ ರಾತ್ರಿ ಆಕೆಯ ಮಗ ಮತ್ತು ಆರೋಪಿ ಹೊರಗೆ ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ. ಮಧ್ಯರಾತ್ರಿ, ಆರೋಪಿಯು ಗೆಳೆಯನೊಂದಿಗೆ ಮನೆಗೆ ಬಂದು ಮನೆ ಬಾಗಿಲು ತಟ್ಟಿದ್ದಾನೆ. ಆಕೆಯ ಮಗ ಕಂಠಪೂರ್ತಿ ಕುಡಿದಿದ್ದರಿಂದ ಮೈಮೇಲೆ ಪ್ರಜ್ಞೆ ಇರಲಿಲ್ಲ. ಆಗ ಆತನ ತಾಯಿಯ ಮೇಲೆ ಆಕೆಯ ಮಗನ ಸ್ನೇಹಿತ ಅತ್ಯಾಚಾರ ನಡೆಸಿದ್ದಾನೆ. ಈ ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿ ಇನ್ನೂ ತಲೆಮರೆಸಿಕೊಂಡಿದ್ದಾನೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow Us