AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಪೊಲೀಸ್ ಜೀಪ್​ನಲ್ಲಿ ಕರೆದೊಯ್ಯುವಾಗ ಸಬ್ ಇನ್​ಸ್ಪೆಕ್ಟರ್ ಕಿವಿ ಕಚ್ಚಿದ ಆಸಾಮಿ!

ಆರೋಪಿ ಸ್ಟೇನಿ ರೋಡ್ರಿಗಸ್ ಬೈಕ್​ನಲ್ಲಿ ಅಪಘಾತ ಮಾಡಿದ್ದು, ಗಸ್ತು ತಿರುಗುತ್ತಿದ್ದ ಪೊಲೀಸ್ ಸಿಬ್ಬಂದಿ ಆತನನ್ನು ವಶಕ್ಕೆ ಪಡೆದಿದ್ದರು. ಆತನನ್ನು ಪೊಲೀಸ್ ಠಾಣೆಗೆ ಕರೆದೊಯ್ಯುವಾಗ ಜೀಪ್​ನಲ್ಲಿದ್ದ ಪೊಲೀಸ್ ಅಧಿಕಾರಿಯ ಕಿವಿಯನ್ನು ಕಚ್ಚಿ ಗಾಯಗೊಳಿಸಿದ್ದಾರೆ.

Crime News: ಪೊಲೀಸ್ ಜೀಪ್​ನಲ್ಲಿ ಕರೆದೊಯ್ಯುವಾಗ ಸಬ್ ಇನ್​ಸ್ಪೆಕ್ಟರ್ ಕಿವಿ ಕಚ್ಚಿದ ಆಸಾಮಿ!
ಪೊಲೀಸ್Image Credit source: Istockphoto.com
ಸುಷ್ಮಾ ಚಕ್ರೆ
|

Updated on: Feb 04, 2023 | 6:05 PM

Share

ಕಾಸರಗೋಡು: ರಸ್ತೆಯಲ್ಲಿ ವೇಗವಾಗಿ ಹೋಗುತ್ತಿದ್ದಾಗ ಅಪಘಾತ (Road Accident) ಮಾಡಿ, ಪೊಲೀಸರಿಂದ ತಪ್ಪಿಸಿಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಈ ವೇಳೆ ಆತನನ್ನು ಪೊಲೀಸ್ ಜೀಪ್​ನಲ್ಲಿ ಪೊಲೀಸ್ ಠಾಣೆಗೆ ಕರೆದೊಯ್ಯುವಾಗ ಆ ವ್ಯಕ್ತಿ ಜೀಪ್​ನಲ್ಲಿದ್ದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ ಬಲ ಕಿವಿಯನ್ನು ಕಚ್ಚಿರುವ ಘಟನೆ ಕೇರಳದ (Kerala)  ಕಾಸರಗೋಡಿನಲ್ಲಿ ನಡೆದಿದೆ.

ಗುರುವಾರ ರಾತ್ರಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಿ ಜೀಪ್​ನಲ್ಲಿ ಕರೆದೊಯ್ಯುತ್ತಿದ್ದಾಗ ಆ ವ್ಯಕ್ತಿ ಎಸ್​ಐ ಕಿವಿಯನ್ನು ಕಚ್ಚಿದ್ದಾರೆ. ಈ ವೇಳೆ ಕಾಸರಗೋಡಿನ ಟೌನ್ ಪೊಲೀಸ್ ಠಾಣೆಯ ಎಸ್‌ಐ ವಿಷ್ಣು ಪ್ರಸಾದ್ ಅವರಿಗೆ ಗಾಯಗೊಂಡಿದ್ದು, ತಕ್ಷಣ ವೈದ್ಯಕೀಯ ಚಿಕಿತ್ಸೆ ಕೊಡಿಸಲಾಗಿದೆ.

ಇದನ್ನೂ ಓದಿ: Bengaluru Crime: ಬೆಂಗಳೂರಿನಲ್ಲೊಂದು ಭೀಕರ ಘಟನೆ; ಗರ್ಲ್​ಫ್ರೆಂಡ್​ನ 3 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿ, ಕೊಲೆ

ಆರೋಪಿ ಸ್ಟೇನಿ ರೋಡ್ರಿಗಸ್ ಬೈಕ್​ನಲ್ಲಿ ಅಪಘಾತ ಮಾಡಿದ್ದು, ಗಸ್ತು ತಿರುಗುತ್ತಿದ್ದ ಪೊಲೀಸ್ ಸಿಬ್ಬಂದಿ ಆತನನ್ನು ವಶಕ್ಕೆ ಪಡೆದಿದ್ದರು. ಆತನನ್ನು ಪೊಲೀಸ್ ಠಾಣೆಗೆ ಕರೆದೊಯ್ಯುವಾಗ ಪೊಲೀಸ್ ಸಬ್ ಇನ್​ಸ್ಪೆಕ್ಟರ್ ಜೀಪ್​ನ ಮುಂದಿನ ಸೀಟಿನಲ್ಲಿ ಕುಳಿತಿದ್ದರು.

ತನ್ನನ್ನು ವಶಕ್ಕೆ ಪಡೆದಿದ್ದಕ್ಕೆ ಕೋಪಗೊಂಡಿದ್ದ ಸ್ಟೇನಿ ಕೋಪದ ಭರದಲ್ಲಿ ಹಿಂದಿನ ಸೀಟಿನಿಂದ ಬಗ್ಗಿ ತನ್ನ ಮುಂದೆ ಕುಳಿತಿದ್ದ ಎಸ್​ಐ ಅವರ ಅವರ ಬಲ ಕಿವಿಯನ್ನು ಕಚ್ಚಿ ಗಾಯಗೊಳಿಸಿದ್ದಾರೆ. ನಂತರ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ಧಾವಿಸಿದ ನಂತರ ಎಸ್‌ಐ ಅವರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಎಸ್​ಐ ಕಿವಿಗೆ ಗಾಯವಾಗಿದ್ದು, ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ