ಸಚಿವ ರಾಮಲಿಂಗಾರೆಡ್ಡಿ ಮನೆಯ ಎದುರೇ ವ್ಯಕ್ತಿಯ ಬರ್ಬರ ಹತ್ಯೆ: ಹಳೆ ದ್ವೇಷ ಶಂಕೆ

ಸಚಿವ ರಾಮಲಿಂಗಾರೆಡ್ಡಿ ಮನೆಯ ಎದುರೇ ವ್ಯಕ್ತಿಯ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ನಗರದ ಲಕ್ಕಸಂದ್ರದಲ್ಲಿ ಸಂಜೆ ಏಳು ಗಂಟೆ ಸುಮಾರಿಗೆ ನಡೆದಿದೆ. ಹಳೆ ದ್ವೇಷ ಹಿನ್ನೆಲೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಆಡುಗೋಡಿ ಠಾಣೆಯ ಪೊಲೀಸರು ದೌಡಾಯಿಸಿದ್ದಾರೆ. 

ಸಚಿವ ರಾಮಲಿಂಗಾರೆಡ್ಡಿ ಮನೆಯ ಎದುರೇ ವ್ಯಕ್ತಿಯ ಬರ್ಬರ ಹತ್ಯೆ: ಹಳೆ ದ್ವೇಷ ಶಂಕೆ
ಮೃತ ವ್ಯಕ್ತಿ ಜೈಪ್ರಕಾಶ್ ಅಲಿಯಾಸ್ ನಾಯಿ ಅಪ್ಪಿ
Follow us
Prajwal Kumar NY
| Updated By: ಗಂಗಾಧರ​ ಬ. ಸಾಬೋಜಿ

Updated on:Dec 24, 2023 | 9:02 PM

ಬೆಂಗಳೂರು, ಡಿಸೆಂಬರ್​ 24: ಸಚಿವ ರಾಮಲಿಂಗಾರೆಡ್ಡಿ (Ramalingareddy) ಮನೆಯ ಎದುರೇ ವ್ಯಕ್ತಿಯ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ನಗರದ ಲಕ್ಕಸಂದ್ರದಲ್ಲಿ ಸಂಜೆ ಏಳು ಗಂಟೆ ಸುಮಾರಿಗೆ ನಡೆದಿದೆ. ಜೈಪ್ರಕಾಶ್ ಅಲಿಯಾಸ್ ನಾಯಿ ಅಪ್ಪಿ ಮೃತ ವ್ಯಕ್ತಿ. 2006ರಲ್ಲಿ ಕೊಲೆ ಪ್ರಕರಣವೊಂದರಲ್ಲಿ ಜೈಪ್ರಕಾಶ್ ಆರೋಪಿಯಾಗಿದ್ದ. ಹಳೆ ದ್ವೇಷ ಹಿನ್ನೆಲೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಆಡುಗೋಡಿ ಠಾಣೆಯ ಪೊಲೀಸರು ದೌಡಾಯಿಸಿದ್ದಾರೆ.

ಇಂದು ಹನುಮಜಯಂತಿ ಹಿನ್ನೆಲೆ ಲಕ್ಕಸಂದ್ರ ಬಸ್ ನಿಲ್ದಾಣ ಬಳಿಯ ಆಂಜಿನೇಯ ದೇವಸ್ಥಾನದ ಅನ್ನದಾನ ಕಾರ್ಯಕ್ರಮದಲ್ಲಿ ಮೃತ ಜೈಪ್ರಕಾಶ್ ಭಾಗಿಯಾಗಿದ್ದ. ಈ ವೇಳೆ ಕೆಲ ಹೊತ್ತು ಜೈ ಪ್ರಕಾಶ್​ನನ್ನ ನಾಲ್ಕೈದು ಜನ ಆರೋಪಿಗಳು ಅಬ್ಸರ್ವ್ ಮಾಡಿದ್ದಾರೆ.

ಇದನ್ನೂ ಓದಿ: ಎರಡು ಕಾರುಗಳ ಮಧ್ಯೆ ಡಿಕ್ಕಿ: ಯಾದಗಿರಿ ಮೂಲದ ಮೂವರು ಸೇರಿದಂತೆ ಐವರ ದುರ್ಮರಣ

ಏಳು ಗಂಟೆ ಸುಮಾರಿಗೆ ಏಕಾ ಏಕಿ ಮಾರಕಾಸ್ತ್ರಗಳಿಂದ ಅಟ್ಯಾಕ್ ಮಾಡಿದ್ದಾರೆ. ತಪ್ಪಿಸಿಕೊಳ್ಳೋಕೆ ಕೆಲ ದೂರ ಓಡಿದ್ದಾನೆ. ಈ ವೇಳೆ ವಿಜಯ ಸಾಗರ ಹೋಟೆಲ್​ಗೆ ಜೈಪ್ರಕಾಶ್ ನುಗ್ಗಿದ್ದು, ಹಿಂಬಾಲಿಸಿಕೊಂಡು ಬಂದ ಆರೋಪಿಗಳು ಹೋಟೆಲ್​ನಲ್ಲಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ, ಎಸ್ಕೇಪ್ ಆಗಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಐದು ತಂಡ ರಚಿಸಿ ಆರೋಪಿಗಳ ಹುಡುಕಾಟ: ಡಿಸಿಪಿ ಸಿಕೆ ಬಾಬ 

ಆಗ್ನೇಯ ವಿಭಾಗದ ಡಿಸಿಪಿ ಸಿಕೆ ಬಾಬ ಹೇಳಿಕೆ ನೀಡಿದ್ದು, ಸಂಜೆ‌ 6.30-6.40ಸುಮಾರಿಗೆ ಘಟನೆ ನಡೆದಿದೆ. ಜಯಪ್ರಕಾಶ್ ಎಂಬಾತ ಸಂಜೆ ಅನ್ನದಾನ ಕಾರ್ಯಕ್ರಮ ಮಾಡುತ್ತಿದ್ದ. ಅಲ್ಲಿಂದ ಓಡಿಸ್ಕೊಂಡು ಬಂದು ನಾಲ್ಕರಿಂದ ಐದು ಜನ ಆರೋಪಿಗಳು ಹೋಟೆಲ್ ಒಳಗಡೆ ಹತ್ಯೆ ಮಾಡಿದಾರೆ. ಈ ಹಿಂದೆ 2005-6ರಲ್ಲಿ ಕೊಲೆಯಾದವನ ಮೇಲೆ ಕೇಸ್ ಇದೆ.

ಇದನ್ನೂ ಓದಿ: ಲವ್ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಿಯತಮೆ ಬೆಂಕಿ ಹಚ್ಚಿದ ಪ್ರಕರಣ; ಆರೋಪಿ ಬಂಧನ

ಅದಾದ ಮೇಲೆ ಈತ ಆಟೋ ಓಡಿಸ್ಕೊಂಡು ಬೇರೆ ಏರಿಯಾದಲ್ಲಿ ವಾಸವಾಗಿದ್ದ. ಈ ಹಿಂದೆ ಮರ್ಡರ್ ಕೇಸ್​ ಒಂದರಲ್ಲಿ ಭಾಗಿಯಾಗಿದ್ದ. ನಂತರ ಆ್ಯಕ್ಟೀವ್ ಆಗಿರುವುದರ ಬಗ್ಗೆ ಮಾಹಿತಿ ಸದ್ಯಕ್ಕಿಲ್ಲ. ಹಳೆ ದ್ವೇಷ ಹಿನ್ನೆಲೆ ಕೊಲೆ ಮಾಡಿರುವ ಶಂಕೆ ಇದೆ. ಐದು ತಂಡ ರಚಿಸಿ ಆರೋಪಿಗಳ ಪತ್ತೆಗೆ ಹುಡುಕಾಟ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:48 pm, Sun, 24 December 23

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ