AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಹುಡುಗಿಗೆ ಮೆಸೇಜ್ ಕಳಿಸಿದ್ದಕ್ಕೆ ಕೇರಳದ ಯುವಕನ ಕತ್ತು ಹಿಸುಕಿ ಕೊಲೆ

ನಿನ್ನೆ ರಾತ್ರಿ ವಿಪಿನ್ ಮೇಲೆ ಹಲ್ಲೆ ನಡೆಸಿದ ಯುವಕರ ಗುಂಪು ಆತನನ್ನು ಥಳಿಸಿತ್ತು. ಹುಡುಗಿಗೆ ಮಸೇಜ್ ಕಳಿಸಿದ್ದರಿಂದ ಈ ಕೊಲೆ ನಡೆಸಿದ್ದು, ಇದರ ಹಿಂದೆ ಬೇರಾವ ಕಾರಣವೂ ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Crime News: ಹುಡುಗಿಗೆ ಮೆಸೇಜ್ ಕಳಿಸಿದ್ದಕ್ಕೆ ಕೇರಳದ ಯುವಕನ ಕತ್ತು ಹಿಸುಕಿ ಕೊಲೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 12, 2021 | 7:21 PM

Share

ಅಲಪ್ಪುಳ: ಹುಡುಗಿಯೊಬ್ಬಳಿಗೆ ಮೆಸೇಜ್ ಕಳಿಸಿದ ಎಂಬ ಕಾರಣಕ್ಕೆ 7 ಜನರ ಗುಂಪೊಂದು ಯುವಕನನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಕೇರಳದ ಪೂಚಕ್ಕಲ್ ಎಂಬಲ್ಲಿ ನಡೆದಿದೆ. 37 ವರ್ಷದ ವಿಪಿನ್ ಲಾಲ್ ಹುಡುಗಿಯೊಬ್ಬಳಿಗೆ ಅಸಭ್ಯವಾಗಿ ಮೆಸೇಜ್ ಮಾಡಿದ್ದ. ಈ ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಿನ್ನೆ ರಾತ್ರಿ ವಿಪಿನ್ ಮೇಲೆ ಹಲ್ಲೆ ನಡೆಸಿದ ಯುವಕರ ಗುಂಪು ಆತನನ್ನು ಥಳಿಸಿತ್ತು. ಹುಡುಗಿಗೆ ಮಸೇಜ್ ಕಳಿಸಿದ್ದರಿಂದ ಈ ಕೊಲೆ ನಡೆಸಿದ್ದು, ಇದರ ಹಿಂದೆ ಬೇರಾವ ಕಾರಣವೂ ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಹುಡುಗಿಗೆ ಕಳುಹಿಸಿದ ಮೆಸೇಜ್ ನೋಡಿ ಕೋಪಗೊಂಡ ಆಕೆಯ ಸಂಬಂಧಿಕರು ನಿನ್ನೆ ನಡು ರಸ್ತೆಯಲ್ಲಿ ವಿಪಿನ್ ಲಾಲ್​ನನ್ನು ಅಡ್ಡ ಹಾಕಿದ್ದರು. ರಸ್ತೆಯಲ್ಲೇ ಥಳಿಸಿದ ಆ ಗುಂಪು ಬಳಿಕ ಆತನ ಉಸಿರುಗಟ್ಟಿಸಿ ಕೊಂದಿದ್ದಾರೆ.

ಹುಡುಗಿಗೆ ಏನು ಮೆಸೇಜ್ ಕಳುಹಿಸಿದ ಕಾರಣಕ್ಕೆ ಈ ಗಲಾಟೆ ನಡೆದಿದೆ ಎಂಬುದು ಇನ್ನೂ ಖಚಿತವಾಗಿಲ್ಲ. ಎರಡೂ ಕುಟುಂಬಗಳು ಈ ಹಿಂದಿನಿಂದಲೂ ಪರಿಚಿತರಾಗಿದ್ದರು ಎನ್ನಲಾಗಿದೆ. ಮೆಸೇಜ್​ಗೆ ಸಂಬಂಧಿಸಿದ ಗಲಾಟೆಯೇ ಈ ಹತ್ಯೆಗೆ ಕಾರಣ ಎನ್ನಲಾಗಿದೆ. ಈ ಕೊಲೆಯ ಹಿಂದಿರುವ ಇನ್ನೂ ಕೆಲವು ಆರೋಪಿಗಳು ಪರಾರಿಯಾಗಿದ್ದು, ಅವರಿಗಾಗಿ ಪೊಲೀಸರು ಹುಡುಕಾಡುತ್ತಿದ್ದಾರೆ.

ಇದನ್ನೂ ಓದಿ: Crime News: ದರೋಡೆ ಬಳಿಕ ಮನೆಯವರ ಕಾಲಿಗೆ ಬಿದ್ದ ಕಳ್ಳರು; 6 ತಿಂಗಳಲ್ಲಿ ಕದ್ದ ಹಣ ವಾಪಾಸ್ ಕೊಡುತ್ತೇವೆಂದು ಪರಾರಿ!

Crime News: ಇಬ್ಬರು ಹೆಣ್ಣುಮಕ್ಕಳನ್ನು ಬಾವಿಗೆ ತಳ್ಳಿ, ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ತಾಯಿ!

(Crime News Man Hacked to Death in Alappuzha following Dispute over Sending Message to Girl)

ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ