Murder: ಗೆಳೆಯನನ್ನೇ ಬರ್ಬರವಾಗಿ ಕೊಂದು, ರೂಮ್ ಕ್ಲೀನ್ ಮಾಡಿ ಮಲಗಿದ ಕೊಲೆಗಾರ

Crime News Today | ರಾಜು ನಂದೇಶ್ವರ ಕೊಲೆಯಾದ ಯುವಕ. ಆತನ ಜೊತೆ ಜಗಳವಾಡಿದ್ದ ದೇವಾಂಶ್ ವಘೋಡೆ ಕೋಪದಲ್ಲಿ ತನ್ನ ರೂಂ ಮೇಟ್​ ಅನ್ನೇ ಹತ್ಯೆ ಮಾಡಿದ್ದಾನೆ. ಬಳಿಕ ಮೃತದೇಹವನ್ನು ರಸ್ತೆ ಬದಿ ಬಿಸಾಡಿದ್ದಾನೆ.

Murder: ಗೆಳೆಯನನ್ನೇ ಬರ್ಬರವಾಗಿ ಕೊಂದು, ರೂಮ್ ಕ್ಲೀನ್ ಮಾಡಿ ಮಲಗಿದ ಕೊಲೆಗಾರ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Aug 09, 2021 | 5:10 PM

ನಾಗ್ಪುರ: ಸಣ್ಣ ವಿಷಯಕ್ಕೆ ಶುರುವಾದ ಜಗಳ ಮಿತಿ ಮೀರಿ ಕೊನೆಗೆ ತನ್ನ ರೂಂ ಮೇಟ್ ಅನ್ನೇ ಗೆಳೆಯ ಕೊಂದಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದ ಬಳಿ ಇರುವ ಡಾಬಾ ಎಂಬಲ್ಲಿ ನಡೆದಿದೆ. ಶನಿವಾರ ರಾತ್ರಿ ಗೆಳೆಯರಿಬ್ಬರ ನಡುವೆ ಜೋರಾಗಿ ಜಗಳವಾಗಿದೆ. ಈ ವೇಳೆ ಕೋಪದಲ್ಲಿ ಒಬ್ಬ ಇನ್ನೊಬ್ಬನನ್ನು ಕೊಲೆ ಮಾಡಿ, ಆತನ ಹೆಣವನ್ನು ಪ್ಯಾಕ್ ಮಾಡಿ ರಸ್ತೆ ಬದಿ ಎಸೆದು ಬಂದಿದ್ದಾನೆ. ನಂತರ ಕೊಲೆಯ ಸುಳಿವು ಸಿಗಬಾರದು ಎಂದು ರಾತ್ರಿಯಿಡೀ ಮನೆಯನ್ನು ಒರೆಸಿ, ಕ್ಲೀನ್ ಮಾಡಿ ಬೆಳಗಿನ ಜಾವ ಮಲಗಿದ್ದಾನೆ.

ರಾಜು ನಂದೇಶ್ವರ ಕೊಲೆಯಾದ ಯುವಕ. ಆತನ ಜೊತೆ ಶನಿವಾರ ರಾತ್ರಿ ಜಗಳವಾಡಿದ್ದ ದೇವಾಂಶ್ ವಘೋಡೆ ಕೋಪದಲ್ಲಿ ತನ್ನ ರೂಂ ಮೇಟ್​ ಅನ್ನೇ ಹತ್ಯೆ ಮಾಡಿದ್ದಾನೆ. ಚಾಕುವಿನಿಂದ ರಾಜುವಿಗೆ ಇರಿದು ಕೊಲೆ ಮಾಡಿದ ದೇವಾಂಶ್​ ಬಳಿಕ ಆತನ ತಲೆಗೆ ಚೂಪಾದ ವಸ್ತುವಿನಿಂದ ಹೊಡೆದಿದ್ದಾನೆ. ಬಳಿಕ ಆ ದೇಹವನ್ನು ಚೀಲದಲ್ಲಿ ಸುತ್ತಿ ರಸ್ತೆ ಬದಿಯಲ್ಲಿ ಬಿಸಾಡಿ ಬಂದಿದ್ದಾನೆ. ರೂಂ ತುಂಬ ರಕ್ತವಾಗಿದ್ದರಿಂದ ಬೆಳಗಿನ ಜಾವದವರೆಗೂ ಮನೆಯನ್ನು ಕ್ಲೀನ್ ಮಾಡಿದ್ದಾನೆ. ನಂತರ ನಿದ್ರೆ ಮಾಡಿದ್ದಾನೆ.

ರಾಜು ಮತ್ತು ದೇವಾಂಶ್ ಇಬ್ಬರೂ ಗ್ಯಾರೇಜ್ ಒಂದರಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದರು. ಬೆಳಗ್ಗೆ ವಾಕಿಂಗ್ ಹೋದ ಸ್ಥಳೀಯರು ರಸ್ತೆ ಬದಿಯಲ್ಲಿ ಬಿದ್ದಿದ್ದ ಹೆಣವನ್ನು ನೋಡಿ ಸುತ್ತಮುತ್ತಲಿನವರಿಗೆ ವಿಷಯ ತಿಳಿಸಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆ ವೇಳೆ ರಾಜು ಎಲ್ಲಿ ವಾಸವಾಗಿದ್ದ ಎಂಬ ಮಾಹಿತಿಯನ್ನು ಕಲೆಹಾಕಿದ ಪೊಲೀಸರು ದೇವಾಂಶ್​ನನ್ನು ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ನಡೆಸಿದಾಗ ಕೊಲೆಯ ಸಂಗತಿ ಬಯಲಾಗಿದೆ.

ಇದನ್ನೂ ಓದಿ: Murder: ದಾವಣಗೆರೆ; ಅಕ್ರಮ ಸಂಬಂಧ ಮುಚ್ಚಿಡಲು ಪ್ರಿಯಕರನ ಜೊತೆ ಸೇರಿ ಹೆಂಡತಿಯಿಂದಲೇ ಗಂಡನ ಕೊಲೆ

Murder: ಇದು ‘ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾ ಕತೆ!; ಸೇಡಿಗಾಗಿ ಹನಿಮೂನ್​ನಲ್ಲೇ ಹೆಂಡತಿಯನ್ನು ಕೊಂದ ಗಂಡ

(Crime News Mechanic Murders Roommate Dumps Dead Body Sleeps After Cleaning Room In Nagpur)

Published On - 5:10 pm, Mon, 9 August 21

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ