ಲಸ್ಸಿ ಕೆಫೆಗೆ ನುಗ್ಗಿ ಮ್ಯಾನೇಜರ್​​ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ: ಆರೋಪಿಗಳಿಗಾಗಿ ಪೊಲೀಸರಿಂದ ಹುಡುಕಾಟ

| Updated By: ಗಂಗಾಧರ​ ಬ. ಸಾಬೋಜಿ

Updated on: Jan 19, 2024 | 7:23 PM

ಬೆಂಗಳೂರು ಕೆಂಗೇರಿಯ ಹೊಯ್ಸಳ ಸರ್ಕಲ್​​​​ ಬಳಿಯಿರುವ ಲಸ್ಸಿ ಕೆಫೆಯಲ್ಲಿ ಮ್ಯಾನೇಜರ್​​ ಆಗಿದ್ದ ಇರ್ಷಾದ್​​ ​​​​ಮೇಲೆ ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವಂತಹ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬೈಕ್​​ನಲ್ಲಿ ಬಂದ ಇಬ್ಬರು ದುರ್ಷರ್ಮಿಗಳಿಂದ ಕೃತ್ಯವೆಸಗಲಾಗಿದೆ. ಕೆಂಗೇರಿ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಇಬ್ಬರು ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. 

ಲಸ್ಸಿ ಕೆಫೆಗೆ ನುಗ್ಗಿ ಮ್ಯಾನೇಜರ್​​ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ: ಆರೋಪಿಗಳಿಗಾಗಿ ಪೊಲೀಸರಿಂದ ಹುಡುಕಾಟ
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು, ಜನವರಿ 19: ಲಸ್ಸಿ ಕೆಫೆಗೆ ನುಗ್ಗಿ ಮ್ಯಾನೇಜರ್​​ ಮೇಲೆ ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳು ಹಲ್ಲೆ (attack) ನಡೆಸಿ ಕೊಲೆಗೆ ಯತ್ನಿಸಿರುವಂತಹ ಘಟನೆ ನಗರದ ಕೆಂಗೇರಿಯ ಹೊಯ್ಸಳ ಸರ್ಕಲ್​​ನಲ್ಲಿ ನಡೆದಿದೆ. ಹೊಯ್ಸಳ ಸರ್ಕಲ್​​ ಬಳಿ ಕೆಫೆ ಮ್ಯಾನೇಜರ್​​ ಆಗಿದ್ದ ಇರ್ಷಾದ್​​ ​​​​ಮೇಲೆ ಹಲ್ಲೆ ಮಾಡಲಾಗಿದೆ. ಬೈಕ್​​ನಲ್ಲಿ ಬಂದ ಇಬ್ಬರು ದುರ್ಷರ್ಮಿಗಳಿಂದ ಕೃತ್ಯವೆಸಗಲಾಗಿದ್ದು, ಮೂರು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತೀವೃ ಗಾಯಗೊಂಡ ಇರ್ಷಾದ್​​​ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಕೆಂಗೇರಿ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಇಬ್ಬರು ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಆಸ್ತಿ ವಿಚಾರಕ್ಕೆ ಗಲಾಟೆ: ಮಾರಕಾಸ್ತ್ರಗಳಿಂದ ಕೊಚ್ಚಿ ಮಹಿಳೆ ಹತ್ಯೆ

ರಾಮನಗರ: ಆಸ್ತಿ ವಿಚಾರಕ್ಕೆ ಗಲಾಟೆ ಉಂಟಾಗಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ಮಹಿಳೆಯ ಹತ್ಯೆ ಮಾಡಿರುವಂತಹ ಘಟನೆ ಹಾರೋಹಳ್ಳಿ ತಾಲೂಕಿನ ಭದ್ರೇಗೌಡನ ದೊಡ್ಡಿ ಗ್ರಾಮದಲ್ಲಿ ನಡೆದಿದೆ. ಗೌರಮ್ಮ(55) ಕೊಲೆಯಾದ ಮಹಿಳೆ.

ಇದನ್ನೂ ಓದಿ: ಸಕಲೇಶಪುರ ಪೊಲೀಸ್​ ಕಾನ್ಸ್​ಟೇಬಲ್​ ಆತ್ಮಹತ್ಯೆ

ಜಮೀನು ಒತ್ತುವರಿ ವಿಚಾರಕ್ಕೆ ಕೊಲೆ ಶಂಕೆ ವ್ಯಕ್ತವಾಗಿದೆ. ಗೌರಮ್ಮನ ದೂರದ ಸಂಬಂಧಿಯಿಂದಲೇ ಕೃತ್ಯ ಆರೋಪ ಮಾಡಲಾಗಿದೆ. ಸ್ಥಳಕ್ಕೆ ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಆರೋಪಿಗಾಗಿ ಪೊಲೀಸರಿಂದ ಹುಡುಕಾಟ ಆರಂಭಿಸಿದ್ದು, ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ತುಂಡಾಗಿ ಬಿದ್ದಿದ್ದ ವಿದ್ಯುತ್​ ತಂತಿ ತುಳಿದು ರೈತ ಸಾವು

ಧಾರವಾಡ: ತುಂಡಾಗಿ ಬಿದ್ದಿದ್ದ ವಿದ್ಯುತ್​ ತಂತಿ ತುಳಿದು ರೈತ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಕಲಘಟಗಿಯಲ್ಲಿ ನಡೆದಿದೆ. ವಿದ್ಯುತ್​ ಪ್ರವಹಿಸಿ ಮಹದೇವಪ್ಪ ಹಂಗರಕಿ(62) ಮೃತಪಟ್ಟಿದ್ದಾರೆ. ಕಬ್ಬಿನ ಗದ್ದೆಯಲ್ಲಿ ಪಂಪ್‌ಸೆಟ್‌‌ಗೆ ಅಳವಡಿಸಿದ್ದ ವೈರ್ ಕಟ್ ಆಗಿ ದುರಂತ ಸಂಭವಿಸಿದೆ. ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಕೌಟುಂಬಿಕ ಕಲಹ: ಪೊಲೀಸ್ ಕಾನ್ಸ್‌ಟೇಬಲ್ ಆತ್ಮಹತ್ಯೆಗೆ ಶರಣು

ಹಾಸನ: ಸಕಲೇಶಪುರದ ಪೊಲೀಸ್​ ಕ್ವಾರ್ಟರ್ಸ್​ನಲ್ಲಿ ಕಾನ್ಸ್​ಟೇಬಲ್​ ಸೋಮಶೇಖರ್(39) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಕಲೇಶಪುರದಲ್ಲಿ 112 ಪೊಲೀಸ್ ವಾಹನದ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಪತಿ ಸೋಮಶೇಖರ್ ವಿರುದ್ಧ ಕಿರುಕುಳ ಆರೋಪ ಮಾಡಿ DySPಗೆ ಪತ್ನಿ ದೂರು ನೀಡಿದ್ದರು. ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸಕಲೇಶಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಕಂಡುಬಂದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.