Crime News: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ; ಆರೋಪಿಗೆ ಗಲ್ಲು ಶಿಕ್ಷೆ

Rape and Murder: 2019ರ ಏಪ್ರಿಲ್ 9ರಂದು ಆರೋಪಿ ಮದುವೆಮನೆಯಿಂದ ವಾಪಾಸ್ ಬರುತ್ತಿದ್ದ 13 ವರ್ಷದ ಬಾಲಕಿಯನ್ನು ಅಪಹರಣ ಮಾಡಿದ್ದ. ಬಳಿಕ ಆಕೆಯ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿದ್ದ.

Crime News: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ; ಆರೋಪಿಗೆ ಗಲ್ಲು ಶಿಕ್ಷೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jul 24, 2021 | 8:41 PM

ಭೂಪಾಲ್: 13 ವರ್ಷದ ಬಾಲಕಿಯನ್ನು ನಿರ್ಜನ ಸ್ಥಳಕ್ಕೆ ಕರೆದುಕೊಂಡು ಹೋಗಿ, ಅತ್ಯಾಚಾರವೆಸಗಿ, ಕೊಲೆ ಮಾಡಿದ್ದ ಆರೋಪ ಸಾಬೀತಾಗಿದ್ದರಿಂದ 24 ವರ್ಷದ ಯುವಕನಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. ಮಧ್ಯಪ್ರದೇಶದ ಸಾಗರ್ ಎಂಬಲ್ಲಿ 2 ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಹತ್ಯೆ ಮಾಡಲಾಗಿತ್ತು.

ಪೋಕ್ಸೋ ಕಾಯ್ದೆಯ ಅಧೀನದಲ್ಲಿರುವ ವಿಶೇಷ ಕೋರ್ಟ್​ನ ನ್ಯಾಯಮೂರ್ತಿ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿದ್ದಾರೆ. ವೀರೇಂದ್ರ ಆದಿವಾಸಿ ಎಂಬ 24 ವರ್ಷದ ಯುವಕನಿಗೆ ಮರಣದಂಡನೆ ಶಿಕ್ಷೆಯನ್ನು ವಿಧಿಸಲಾಗಿದೆ. ಬಾಲಕಿಯನ್ನು ಅಪಹರಣ ಮಾಡಿದ್ದಕ್ಕಾಗಿ ಆರೋಪಿಗೆ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಯನ್ನೂ ಸಹ ವಿಧಿಸಲಾಗಿದೆ. ಅತ್ಯಾಚಾರವೆಸಗಿ, ಕೊಲೆ ಮಾಡಿದ್ದಕ್ಕೆ ಪೋಕ್ಸೋ ಕಾಯ್ದೆಯಡಿ ಗಲ್ಲು ಶಿಕ್ಷೆ ವಿಧಿಸಲಾಗಿದೆ.

2019ರ ಏಪ್ರಿಲ್ 9ರಂದು ಆರೋಪಿ ಮದುವೆಮನೆಯಿಂದ ವಾಪಾಸ್ ಬರುತ್ತಿದ್ದ 13 ವರ್ಷದ ಬಾಲಕಿಯನ್ನು ಅಪಹರಣ ಮಾಡಿದ್ದ.  ಬಳಿಕ ಆಕೆಯನ್ನು ನಿಗೂಢ ಸ್ಥಳಕ್ಕೆ ಕರೆದುಕೊಂಡು ಹೋಗಿ, ಅತ್ಯಾಚಾರ ನಡೆಸಿ, ಈ ವಿಷಯ ಬಯಲಾಗಬಹುದು ಎಂಬ ಭಯದಲ್ಲಿ ಆಕೆಯನ್ನು ಬರ್ಬರವಾಗಿ ಕೊಲೆ ಮಾಡಿದ್ದ.

ಈ ಘಟನೆ ನಡೆದು ಮೂರ್ನಾಲ್ಕು ದಿನಗಳಾದ ಬಳಿಕ ಈ ಕೊಲೆ ಪ್ರಕರಣ ಬೆಳಕಿಗೆ ಬಂದಿತ್ತು. ಈ ಗಲ್ಲು ಶಿಕ್ಷೆಯನ್ನು ಪ್ರಶ್ನಿಸಿ, ಆರೋಪಿ ಮೇಲ್ಮನವಿ ಸಲ್ಲಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: Murder News: ನಿನ್ನಿಂದ ಮಗು ಹುಟ್ಟಿಸಲು ಸಾಧ್ಯವಿಲ್ಲ ಎಂದ ವೈದ್ಯೆಯ ಬರ್ಬರ ಹತ್ಯೆ!; ಭಾವನಿಂದಲೇ ಕೊಲೆಯಾದ ಮಾಜಿ MLA ಸೊಸೆ

Murder News: ಹೆಂಗಸನ್ನು ಕೊಂದು, ಕತ್ತರಿಸಿ ಸೂಟ್​ಕೇಸ್​ನಲ್ಲಿ ಸಾಗಿಸಿದ ಹಂತಕರು; ಫ್ರಿಜ್​ನಿಂದ ಬಯಲಾಯ್ತು ಕೊಲೆ ರಹಸ್ಯ!

(Crime News Madhya Pradesh Court awards Death Penalty to 24 Year Old Man For Rape Murder Of Minor Girl in 2019)

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ