15 ವರ್ಷದ ಬಾಲಕಿಯನ್ನು ಮದುವೆಯಾಗಿ ಅತ್ಯಾಚಾರ; ಮಗು ಹುಟ್ಟಿದ ಮೇಲೆ ಬಯಲಾಯ್ತು ಸತ್ಯ

Child Marriage: ಮುಂಬೈನ ಜೆಜೆ ಆಸ್ಪತ್ರೆಯಲ್ಲಿ 15 ವರ್ಷದ ಬಾಲಕಿ ಮಗುವಿಗೆ ಜನ್ಮ ನೀಡಿದ್ದಳು. ಇದರಿಂದ ಅನುಮಾನಗೊಂಡ ವೈದ್ಯರು ಪೊಲೀಸರಿಗೆ ವಿಷಯ ತಿಳಿಸಿದ್ದರು.

15 ವರ್ಷದ ಬಾಲಕಿಯನ್ನು ಮದುವೆಯಾಗಿ ಅತ್ಯಾಚಾರ; ಮಗು ಹುಟ್ಟಿದ ಮೇಲೆ ಬಯಲಾಯ್ತು ಸತ್ಯ
ಸಾಂದರ್ಭಿಕ ಚಿತ್ರ
Follow us
| Edited By: Sushma Chakre

Updated on: Dec 22, 2021 | 5:31 PM

ಮುಂಬೈ: ಸಮಾಜದಲ್ಲಿ ಎಷ್ಟೇ ಹೊಸ ಕಾನೂನುಗಳನ್ನು ಜಾರಿಗೆ ತರುತ್ತಿದ್ದರೂ ಅಪರಾಧ ಪ್ರಕರಣಗಳು ಮಾತ್ರ ಕಡಿಮೆಯಾಗಿಲ್ಲ. ಮಹಾರಾಷ್ಟ್ರದ ಮುಂಬೈನ 15 ವರ್ಷದ ಹುಡುಗಿಯನ್ನು ಮದುವೆಯಾಗಿ, ಹಲವಾರು ಬಾರಿ ಅತ್ಯಾಚಾರ ಮಾಡಿದ ಆರೋಪದ ಮೇಲೆ 27 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಆ 15 ವರ್ಷದ ಬಾಲಕಿ ಮಗುವಿಗೆ ಜನ್ಮವನ್ನೂ ನೀಡಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯ ತಾಯಿ, ಆರೋಪಿ ಯುವಕನ ಪೋಷಕರು ಮತ್ತು ವಿವಾಹವನ್ನು ನೆರವೇರಿಸಿದ ಧರ್ಮಗುರುಗಳ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಶುಕ್ರವಾರ ಮುಂಬೈನ ಜೆಜೆ ಆಸ್ಪತ್ರೆಯಲ್ಲಿ 15 ವರ್ಷದ ಬಾಲಕಿ ಮಗುವಿಗೆ ಜನ್ಮ ನೀಡಿದ್ದಳು. ಇದರಿಂದ ಅನುಮಾನಗೊಂಡ ವೈದ್ಯರು ಪೊಲೀಸರಿಗೆ ವಿಷಯ ತಿಳಿಸಿದ್ದರು. ಪೊಲೀಸರ ಪ್ರಕಾರ ಜನವರಿಯಲ್ಲಿ ಬಾಲ್ಯ ವಿವಾಹ ನಿಶ್ಚಯವಾಗಿತ್ತು. “ಮಗುವಿಗೆ ಜನ್ಮ ನೀಡುವ ಮೊದಲು, ಆಸ್ಪತ್ರೆಯ ವೈದ್ಯರು ಆ ಬಾಲಕಿಯ ವಯಸ್ಸು ಎಷ್ಟೆಂದು ಆಕೆಯ ಗಂಡ ಮತ್ತು ಅತ್ತೆಯನ್ನು ಕೇಳಿದಾಗ ಅವರು ಆಕೆಗೆ 20 ವರ್ಷ ವಯಸ್ಸಾಗಿದೆ ಎಂದು ಸುಳ್ಳು ಹೇಳಿದ್ದರು” ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಆದರೆ, ವೈದ್ಯರು 15 ವರ್ಷದ ಬಾಲಕಿಯ ಆಧಾರ್ ಕಾರ್ಡ್ ಅನ್ನು ಪರಿಶೀಲಿಸಿದಾಗ ಆಕೆಯ ನಿಜವಾದ ವಯಸ್ಸು ಬಹಿರಂಗವಾಯಿತು. ಅದರಲ್ಲಿ ಅವಳು 2006ರ ಜೂನ್ ತಿಂಗಳಲ್ಲಿ ಜನಿಸಿದಳು ಎಂದು ಗೊತ್ತಾಯಿತು. ವೈದ್ಯರು ತಕ್ಷಣವೇ ಅಗ್ರಿಪಾದ ಪೊಲೀಸರಿಗೆ ಮಾಹಿತಿ ನೀಡಿದರು. ಈ ಹಿನ್ನೆಲೆಯಲ್ಲಿ ಭಾನುವಾರ ಪ್ರಕರಣ ದಾಖಲಿಸಲಾಗಿದೆ.

ಆ ಬಾಲಕಿಯ ಮನೆಯಲ್ಲಿ ತೀವ್ರವಾದ ಆರ್ಥಿಕ ಸಂಕಷ್ಟಗಳು ಇದ್ದುದರಿಂದ ಕಳೆದ ವರ್ಷದ ಕೊನೆಯಲ್ಲಿ ಬಾಲಕಿಯ ತಾಯಿ ತನ್ನ ಮಗಳ ಓದನ್ನು ಅರ್ಧಕ್ಕೆ ನಿಲ್ಲಿಸಿ ಯುವಕನೊಂದಿಗೆ ಮದುವೆ ಮಾಡಿದ್ದಳು. ಆ ಬಾಲಕಿ ಐದನೇ ತರಗತಿಯವರೆಗೆ ಓದಿದ್ದಾಳೆ. ಆಕೆಯ ಗಂಡ ಮತ್ತು ಅವನ ಹೆತ್ತವರಿಗೆ ಅವಳು ಅಪ್ರಾಪ್ತಳಾಗಿದ್ದಾಳೆಂದು ತಿಳಿದಿದ್ದರೂ ಮದುವೆ ಮಾಡಿಕೊಂಡ ಕಾರಣ ಪ್ರಕರಣದಲ್ಲಿ ಅವರ ಹೆಸರನ್ನು ಸೇರಿಸಲಾಗಿದೆ” ಎಂದು ಅಧಿಕಾರಿ ಹೇಳಿದ್ದಾರೆ.

ಜನವರಿಯಲ್ಲಿ ನಡೆದ ಮದುವೆಯ ನಂತರ ಬಾಲಕಿಯು ಆ ವ್ಯಕ್ತಿಯ ಮನೆಯಲ್ಲಿ ವಾಸ ಮಾಡಲು ಪ್ರಾರಂಭಿಸಿದಾಗ ಪದೇ ಪದೇ ಗಂಡನಿಂದ ಅತ್ಯಾಚಾರಕ್ಕೊಳಗಾಗಿದ್ದಳು. ಹುಡುಗಿಯ ತಾಯಿ, ಆ ಯುವಕ’ ಮತ್ತು ಧರ್ಮಗುರುಗಳ ಸಮ್ಮುಖದಲ್ಲಿ ವಿವಾಹವನ್ನು ನೆರವೇರಿಸಲಾಯಿತು. ಅವಳು ಗರ್ಭಧರಿಸಿದ ನಂತರ, ಅವಳನ್ನು ಜೆಜೆ ಆಸ್ಪತ್ರೆಗೆ ತಪಾಸಣೆಗಾಗಿ ಹಲವಾರು ಬಾರಿ ಕರೆದೊಯ್ಯಲಾಯಿತು. ಆದರೆ ಅವರು ಯಾವಾಗಲೂ ಅವಳಿಗೆ 20 ವರ್ಷವಾಗಿದೆ ಎಂದು ಸುಳ್ಳು ಹೇಳುತ್ತಿದ್ದರು” ಎಂದು ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: ಬಾಲಕಿ ಮೇಲೆ 9 ತಿಂಗಳು ಸಾಮೂಹಿಕ ಅತ್ಯಾಚಾರ; 13 ಆರೋಪಿಗಳಿಗೆ 20 ವರ್ಷ ಜೈಲು ಶಿಕ್ಷೆ ಘೋಷಣೆ

Shocking News: ಪಕ್ಕದಲ್ಲಿ ಮಲಗಿದ್ದ 9 ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ!

ತಾಜಾ ಸುದ್ದಿ
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ