AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: 14 ವರ್ಷದ ಬಾಲಕಿ ಮೇಲೆ ಕಸಿನ್, ಚಿಕ್ಕಪ್ಪನಿಂದಲೇ ಅತ್ಯಾಚಾರ

14 ವರ್ಷದ ಬಾಲಕಿ ಬೊರಿವಲಿಯಲ್ಲಿರುವ ತನ್ನ ತಾಯಿಯ ಚಿಕ್ಕಮ್ಮನ ಮನೆಯಲ್ಲಿ ವಾಸಿಸುತ್ತಿದ್ದಾಗ ಆಕೆಯ ಸೋದರಸಂಬಂಧಿ ಮತ್ತು ಚಿಕ್ಕಪ್ಪನಿಂದ ಹಲವಾರು ಬಾರಿ ಅತ್ಯಾಚಾರವೆಸಗಲಾಗಿದೆ.

Crime News: 14 ವರ್ಷದ ಬಾಲಕಿ ಮೇಲೆ ಕಸಿನ್, ಚಿಕ್ಕಪ್ಪನಿಂದಲೇ ಅತ್ಯಾಚಾರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Feb 12, 2023 | 3:49 PM

Share

ಮುಂಬೈ: 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮುಂಬೈನಲ್ಲಿ (Mumbai Crime) ಇಬ್ಬರನ್ನು ಬಂಧಿಸಲಾಗಿದೆ. ಆ ಬಾಲಕಿಯ ಸಂಬಂಧಿಕರೇ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದು, ಆಕೆಯ ಚಿಕ್ಕಪ್ಪ ಹಾಗೂ ಕಸಿನ್ ಇದೀಗ ಕಂಬಿ ಎಣಿಸುತ್ತಿದ್ದಾರೆ.

14 ವರ್ಷದ ಬಾಲಕಿ ಬೊರಿವಲಿಯಲ್ಲಿರುವ ತನ್ನ ತಾಯಿಯ ಚಿಕ್ಕಮ್ಮನ ಮನೆಯಲ್ಲಿ ವಾಸಿಸುತ್ತಿದ್ದಾಗ ಆಕೆಯ ಸೋದರಸಂಬಂಧಿ ಮತ್ತು ಚಿಕ್ಕಪ್ಪನಿಂದ ಹಲವಾರು ಬಾರಿ ಅತ್ಯಾಚಾರವೆಸಗಲಾಗಿದೆ. ಇದರಿಂದ ಮಾನಸಿಕವಾಗಿ ನೊಂದಿದ್ದ ಸಂತ್ರಸ್ತ ಬಾಲಕಿ ವಿರಾರ್‌ನಲ್ಲಿರುವ ತನ್ನ ಚಿಕ್ಕಪ್ಪನಿಗೆ ಈ ಘಟನೆಯ ಬಗ್ಗೆ ತಿಳಿಸಿದ್ದಾಳೆ. ನಂತರ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಮಹಿಳೆ ಮೇಲೆ ಅತ್ಯಾಚಾರ‌ ಆರೋಪ; ಅವಳಿ ಸಹೋದರರ ತಲೆ ಬೋಳಿಸಿ ಮೆರವಣಿಗೆ ಮಾಡಿದ ಪ್ರಕರಣ; 7 ಜನ ಆರೋಪಿಗಳ ಬಂಧನ‘

ಬಳಿಕ, ಈ ಪ್ರಕರಣವನ್ನು ಮುಂಬೈನ MHB ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಮಾಹಿತಿ ಪಡೆದ 4 ಗಂಟೆಗಳಲ್ಲಿ 50 ವರ್ಷ ಮತ್ತು 19 ವರ್ಷ ವಯಸ್ಸಿನ ಆರೋಪಿಗಳನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಪೋಕ್ಸೋ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ (IPC) 376, 376 (2) (n), 376 (2) (f) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ. ಇಬ್ಬರೂ ಆರೋಪಿಗಳನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​