Crime News: ಜೈ ಶ್ರೀರಾಮ್ ಹೇಳಲು ನಿರಾಕರಿಸಿದ್ದಕ್ಕೆ ಮುಸ್ಲಿಂ ಬಾಲಕನ ಮೇಲೆ ಹಲ್ಲೆ

| Updated By: ಸುಷ್ಮಾ ಚಕ್ರೆ

Updated on: Dec 30, 2022 | 1:20 PM

ಖಾಸಗಿ ಟ್ಯೂಷನ್ ಸೆಂಟರ್‌ಗೆ ತೆರಳುತ್ತಿದ್ದ ಬಾಲಕ ಮುಸ್ಲಿಂ ಕುಟುಂಬಕ್ಕೆ ಸೇರಿದವನಾದ ಕಾರಣ ಜೈ ಶ್ರೀರಾಮ್ ಹೇಳಲು ನಿರಾಕರಿಸಿದ್ದಾನೆ. ಇದರಿಂದ ಕೋಪಗೊಂಡ ಅಜಯ್ ಭಿಲ್ 5ನೇ ತರಗತಿಯ ಆ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ್ದಾರೆ.

Crime News: ಜೈ ಶ್ರೀರಾಮ್ ಹೇಳಲು ನಿರಾಕರಿಸಿದ್ದಕ್ಕೆ ಮುಸ್ಲಿಂ ಬಾಲಕನ ಮೇಲೆ ಹಲ್ಲೆ
ಸಾಂದರ್ಭಿಕ ಚಿತ್ರ
Image Credit source: iStock
Follow us on

ಭೋಪಾಲ್: ಮಧ್ಯಪ್ರದೇಶದ (Madhya Pradesh) ಖಾಂಡ್ವಾ ಜಿಲ್ಲೆಯಲ್ಲಿ 10 ವರ್ಷದ ಬಾಲಕನ ಮೇಲೆ ಹಲ್ಲೆ ನಡೆಸಿ ‘ಜೈ ಶ್ರೀ ರಾಮ್’ (Jai Shri Ram) ಎಂದು ಪಠಿಸುವಂತೆ ಒತ್ತಾಯಿಸಿದ ಆಘಾತಕಾರಿ ಘಟನೆ (Shocking News) ನಡೆದಿದೆ. ಹಲ್ಲೆಗೊಳಗಾದ ಮುಸ್ಲಿಂ ಮಗುವಿನ ಪೋಷಕರು ದೂರು ದಾಖಲಿಸಿದ ನಂತರ ಪೊಲೀಸರು ಬುಡಕಟ್ಟು ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಗುರುವಾರ ಸಂಜೆ ಮಧ್ಯಪ್ರದೇಶದ ಖಾಂಡ್ವಾದ ಪಂಧನಾ ಪ್ರದೇಶದಲ್ಲಿ ಬಾಲಕ ಪಾಠಕ್ಕಾಗಿ ಹೊರಗೆ ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಅಜಯ್ ಭಿಲ್ ಎಂದು ಗುರುತಿಸಲಾದ ಆರೋಪಿ ಆ ಬಾಲಕನನ್ನು ತಡೆದು ನಿಲ್ಲಿಸಿ, ‘ಜೈ ಶ್ರೀ ರಾಮ್’ ಎಂದು ಜಪಿಸುವಂತೆ ಒತ್ತಾಯಿಸಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: Karnataka Hijab Row: ಜೈ ಶ್ರೀರಾಮ್ ಎಂದ ಯುವಕರೆದುರು ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಬುರ್ಖಾಧಾರಿ ವಿದ್ಯಾರ್ಥಿನಿ

ಖಾಸಗಿ ಟ್ಯೂಷನ್ ಸೆಂಟರ್‌ಗೆ ತೆರಳುತ್ತಿದ್ದ ಬಾಲಕ ಮುಸ್ಲಿಂ ಕುಟುಂಬಕ್ಕೆ ಸೇರಿದವನಾದ ಕಾರಣ ಜೈ ಶ್ರೀರಾಮ್ ಹೇಳಲು ನಿರಾಕರಿಸಿದ್ದಾನೆ. ಇದರಿಂದ ಕೋಪಗೊಂಡ ಅಜಯ್ ಭಿಲ್ 5ನೇ ತರಗತಿಯ ಆ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಆ ಬಾಲಕನನ್ನು ನಿರ್ದಯವಾಗಿ ಥಳಿಸಿದ್ದಾರೆ.

ಇದರಿಂದ ಹೆದರಿದ ಆ ಬಾಲಕ ಭಯದಿಂದ ಜೈ ಶ್ರೀರಾಮ್ ಎಂದು ಅಳುತ್ತಾ ಹೇಳಿದ್ದಾನೆ. ನಂತರ ಆ ಆರೋಪಿಗಳು ಆ ಹುಡುಗನನ್ನು ಹೋಗಲು ಬಿಟ್ಟರು. ಭಯಭೀತನಾದ ಹುಡುಗ ಮನೆಗೆ ಹಿಂತಿರುಗಿ ತನ್ನ ಪೋಷಕರಿಗೆ ನಡೆದ ವಿಷಯವನ್ನು ವಿವರಿಸಿದ್ದಾನೆ.

ಇದನ್ನೂ ಓದಿ: Evening News: ಬಿಜೆಪಿ ಹಿಂದೂ-ಮುಸ್ಲಿಂ ದ್ವೇಷ ಹರಡುತ್ತಿದೆ, ಹಲಾಲ್ ವಿರುದ್ಧ ಬಾಯ್ಕಟ್ ಅಭಿಯಾನ, ಇನ್ಸ್ಟಾಗ್ರಾಂ ಮೂಲಕ‌ ಲವ್ ಜಿಹಾದ್?-ಇಂದಿನ ಪ್ರಮುಖ ಸುದ್ದಿಗಳು

ಆ ಬಾಲಕನ ತಂದೆ ತಕ್ಷಣ ಪಂಧನಾ ಪೊಲೀಸ್ ಠಾಣೆಗೆ ತೆರಳಿ ತನ್ನ ಮಗನ ಮೇಲೆ ಹಲ್ಲೆ ಮಾಡಿದ ವ್ಯಕ್ತಿಯ ವಿರುದ್ಧ ದೂರು ದಾಖಲಿಸಿದ್ದಾರೆ. ಅಜಯ್ ಭಿಲ್ ವಿರುದ್ಧ ಪೊಲೀಸ್ ಕ್ರಮವನ್ನು ಖಚಿತಪಡಿಸಿದ ಖಾಂಡ್ವಾ ಉಪ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಸಿಂಗ್ ಚೌಹಾಣ್ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಅಜಯ್ ಭಿಲ್ ವಿರುದ್ಧ ಐಪಿಸಿ ಸೆಕ್ಷನ್ 295ಎ (ಧಾರ್ಮಿಕ ಭಾವನೆಗಳಿಗೆ ಆಕ್ರೋಶ ಅಥವಾ ಅವಮಾನ) ಮತ್ತು 323 (ಸ್ವಯಂಪ್ರೇರಿತವಾಗಿ ನೋವುಂಟು ಮಾಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ