ಗುಜರಾತ್ನ ಮುಂದ್ರಾ ಬಂದರಿನಲ್ಲಿ 2,100 ಕೋಟಿ ರೂ. ಮೌಲ್ಯದ 3,000 ಕೆಜಿ ಡ್ರಗ್ಸ್ ವಶ
ಗುಜರಾತ್ನ ಮುಂದ್ರಾ ಬಂದರಿನಲ್ಲಿ 2 ದೋಣಿಗಳಲ್ಲಿ ಸಾಗಿಸಲಾಗುತ್ತಿದ್ದ ಸುಮಾರು 3000 ಕೆ.ಜಿ ಹೆರಾಯಿನ್ ಅನ್ನು ವಶಕ್ಕೆ ಪಡೆಯಲಾಗಿದೆ.
ಅಹಮದಾಬಾದ್: ಗುಜರಾತ್ನ ಮುಂದ್ರಾ ಬಂದರಿನಲ್ಲಿ ಸುಮಾರು 2,100 ಕೋಟಿ ರೂ. ಮೌಲ್ಯದ 2,988.22 ಕೆಜಿ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಗುಜರಾತ್ನ ಮುಂದ್ರಾ ಬಂದರಿನಲ್ಲಿ 2 ದೋಣಿಗಳಲ್ಲಿ ಸಾಗಿಸಲಾಗುತ್ತಿದ್ದ ಸುಮಾರು 3000 ಕೆ.ಜಿ ಹೆರಾಯಿನ್ ಅನ್ನು ವಶಕ್ಕೆ ಪಡೆಯಲಾಗಿದೆ. ಒಂದು ಕೆ.ಜಿ ಹೆರಾಯಿನ್ ಮೌಲ್ಯ 7 ಕೋಟಿ ರೂ. ಇದೆ. ಈ ಘಟನೆಗೆ ಸಂಬಂಧಿಸಿದಂತೆ ಡ್ರಗ್ಸ್ ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ.
ಆಂಧ್ರಪ್ರದೇಶದ ವಿಜಯವಾಡದ ಆಶಿ ಟ್ರೇಡಿಂಗ್ ಕಂಪನಿಯಿಂದ ಸಾಗಿಸಲಾಗುತ್ತಿದ್ದ ಭಾರೀ ಮೊತ್ತದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಅಫ್ಘಾನಿಸ್ತಾನದಿಂದ ಈ ನೆರೋಟಿಕ್ ಡ್ರಗ್ ಅನ್ನು ಸಾಗಿಸಲಾಗುತ್ತಿದೆ ಎಂದು ಪೊಲೀಸರು ಅಂದಾಜಿಸಿದ್ದಾರೆ. ಮೊದಲ ದೋಣಿಯಿಂದ 1,999.58 ಕೆಜಿ ಹೆರಾಯಿನ್ ವಶಕ್ಕೆ ಪಡೆಯಲಾಗಿದ್ದು, ಮತ್ತೊಂದು ದೋಣಿಯಿಂದ 988.64 ಕೆಜಿ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ.
ಇದರ ಬೆನ್ನಲ್ಲೇ ದೆಹಲಿ, ಚೆನ್ನೈ, ಅಹಮದಾಬಾದ್, ಗಾಂಧಿಧಾಮ, ಗುಜರಾತ್ನ ಮಾಂಡವಿ ಪ್ರದೇಶಗಳಲ್ಲಿ ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಇನ್ನೂ ಕೆಲವೆಡೆ ಡ್ರಗ್ಸ್ ಬಚ್ಚಿಟ್ಟಿರುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ. ಇದರ ಹಿಂದೆ ಅಫ್ಘಾನ್ ಪ್ರಜೆಗಳ ಕೈವಾಡವಿರುವ ಸಂಶಯವಿದೆ. ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.
ಆನೇಕಲ್ ಬಳಿಯ ಖಾಸಗಿ ರೆಸಾರ್ಟ್‌ನಲ್ಲಿ ರೇವ್ ಪಾರ್ಟಿ, ಡ್ರಗ್ಸ್ ನಶೆಯಲ್ಲಿದ್ದ 28 ಜನರನ್ನ ವಶಕ್ಕೆ ಪಡೆದ ಪೊಲೀಸರು
(Crime News: Nearly 3000 kg Drugs seized worth 21,000 crore Rupees from Afghanistan seized at Gujarat Mundra port)