AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ರೂಪದರ್ಶಿಯ ನಿಗೂಢ ಸಾವು; ಮನೆಯ ಹಾಲ್​ನಲ್ಲಿ ನಗ್ನ ಶವ ಪತ್ತೆ!

Nayab Nadeem Murder Case: ರೂಪದರ್ಶಿ ನಯಾಬ್ ನದೀಂ ಅವರ ಮನೆಯೊಳಗೆ ನುಗ್ಗಿ ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ. ಆಕೆಯ ಮನೆಯ ಹಾಲ್​ನಲ್ಲಿ ಬೆತ್ತಲಾದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಖ್ಯಾತ ರೂಪದರ್ಶಿಯ ನಿಗೂಢ ಸಾವು; ಮನೆಯ ಹಾಲ್​ನಲ್ಲಿ ನಗ್ನ ಶವ ಪತ್ತೆ!
ರೂಪದರ್ಶಿ ನಯಾಬ್ ನದೀಂ
TV9 Web
| Edited By: |

Updated on: Jul 12, 2021 | 6:34 PM

Share

ಲಾಹೋರ್: ಪಾಕಿಸ್ತಾನದ ಲಾಹೋರ್​ನಲ್ಲಿರುವ (Lahore) ತನ್ನ ಮನೆಯಲ್ಲಿ ಖ್ಯಾತ ರೂಪದರ್ಶಿ ನಯಾಬ್ ನದೀಮ್ (Nayab Nadeem) ನಿಗೂಢವಾಗಿ ಸಾವನ್ನಪ್ಪಿದ್ದಾರೆ. 29 ವರ್ಷದ ನದೀಂ ಏಕಾಂಗಿಯಾಗಿ ತಮ್ಮ ಮನೆಯಲ್ಲಿ ವಾಸಿಸುತ್ತಿದ್ದರು. ಅಪರಿಚಿತ ವ್ಯಕ್ತಿಗಳು ಮನೆಯೊಳಗೆ ನುಗ್ಗಿ ಕೊಲೆ ಮಾಡಿದ್ದು, ನಯಾಬ್ ನದೀಂ ಅವರ ಮೃತದೇಹ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಭಾನುವಾರ ರಾತ್ರಿ ಹಂತಕರು ನದೀಂ ಅವರಿದ್ದ ಮನೆಯೊಳಗೆ ನುಗ್ಗಿ, ಅವರ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ನದೀಂ ಅವರ ಮಲ ಸಹೋದರ ಮೊಹಮ್ಮದ್ ಅಲಿ ನಾಸಿರ್ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ ಬಳಿಕ ಪ್ರಕರಣದ ಬೆಳಕಿಗೆ ಬಂದಿದೆ. ಇಂದು ಬೆಳಗ್ಗೆ ರೂಪದರ್ಶಿ ನದೀಂ ಅವರನ್ನು ಭೇಟಿಯಾಗಲು ನಾಸಿರ್ ಆಕೆಯ ಮನೆಗೆ ತೆರಳಿದ್ದರು. ಫ್ಲಾಟ್​ನ ಬಾಗಿಲು ಲಾಕ್ ಆಗಿತ್ತು. ಆಕೆಗೆ ಫೋನ್ ಮಾಡಿದರೂ ರಿಸೀವ್ ಮಾಡಲಿಲ್ಲ. ಆಕೆಯ ಕಾರು ಮನೆಯ ಹೊರಗೆ ನಿಂತಿತ್ತು. ಹೀಗಾಗಿ, ಆಕೆ ಮನೆಯಿಂದ ಹೊರಗೆಲ್ಲೂ ಹೋಗಿಲ್ಲ ಎಂಬುದು ನಾಸಿರ್​ಗೆ ಖಚಿತವಾಗಿತ್ತು. ಇದರಿಂದ ಅನುಮಾನಗೊಂಡ ಅವರು ಮನೆಯ ಹಿಂಬದಿಗೆ ಹೋಗಿ ನೋಡಿದ್ದರು.

ನದೀಂಳ ಮನೆಯ ಹಿಂಭಾಗದಲ್ಲಿದ್ದ ಬಾತ್​ರೂಮಿನ ಕಿಟಕಿಯ ಗಾಜುಗಳು ಒಡೆದು, ಚೂರಾಗಿ ಬಿದ್ದಿದ್ದವು. ಇದರಿಂದ ಅನುಮಾನಗೊಂಡ ನಾಸಿರ್ ಅದೇ ಕಿಟಕಿಯಿಂದ ಆಕೆಯ ಮನೆಯೊಳಗೆ ಪ್ರವೇಶಿಸಿದ್ದಾರೆ. ಆಗ ತನ್ನ ಸಹೋದರಿಯ ನಗ್ನ ದೇಹ ಹಾಲ್​ನಲ್ಲಿ ಬಿದ್ದಿರುವುದನ್ನು ಕಂಡು ಶಾಕ್ ಆಗಿದ್ದಾರೆ. ಬೆತ್ತಲಾಗಿ ಬಿದ್ದಿದ್ದ ಶವದ ಬಳಿ ಹೋಗಿ ನೋಡಿದಾಗ ಆಕೆ ಸಾವನ್ನಪ್ಪಿರುವುದು ಖಚಿತವಾಗಿತ್ತು. ಹೀಗಾಗಿ, ತಕ್ಷಣ ಅವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ರೂಪದರ್ಶಿ ನದೀಂ ಅವರ ಮೃತದೇಹದ ಮೇಲೆ ಗಾಯದ ಗುರುತುಗಳು ಪತ್ತೆಯಾಗಿವೆ. ಆಕೆಯ ಕೈ, ಕುತ್ತಿಗೆ, ಕಾಲಿನ ಮೇಲೆ ಗಾಯದ ಗುರುತುಗಳಿದ್ದು, ಆಕೆಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಒಬ್ಬಂಟಿಯಾಗಿ ಮನೆಯಲ್ಲಿ ವಾಸಿಸುತ್ತಿದ್ದ ನದೀಂ ಅವರಿಗೆ ಇನ್ನೂ ಮದುವೆಯಾಗಿರಲಿಲ್ಲ. ಇತ್ತೀಚೆಗಷ್ಟೇ ಮಾಡೆಲಿಂಗ್​ನಲ್ಲಿ ಉತ್ತಮ ಅವಕಾಶಗಳು ಸಿಗಲಾರಂಭಿಸಿದ್ದವು ಎನ್ನಲಾಗಿದೆ.

ಇದನ್ನೂ ಓದಿ: Crime News: ಜೈಲು ಸಿಬ್ಬಂದಿ ಮುಖಕ್ಕೆ ಖಾರದ ಪುಡಿ ಎರಚಿ 7 ಕೈದಿಗಳು ಪರಾರಿ; ಪೊಲೀಸರು ಕಂಗಾಲು!

ಇದನ್ನೂ ಓದಿ: Crime News: ಗಂಡನ ಮೇಲಿನ ಕೋಪಕ್ಕೆ 11 ತಿಂಗಳ ಕಂದಮ್ಮನ ಉಸಿರುಗಟ್ಟಿಸಿ ಕೊಂದ ತಾಯಿ!

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ