AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: 17 ವರ್ಷದ ಬಾಲಕಿ ಮೇಲೆ ಆಕೆಯ ಅಪ್ಪ, ಚಿಕ್ಕಪ್ಪನಿಂದಲೇ ಅತ್ಯಾಚಾರ; ಅಜ್ಜನಿಂದಲೂ ಕಿರುಕುಳ

2018ರಲ್ಲಿ ಬಾಲಕಿ ತನ್ನ ತಂದೆಗೆ ತನ್ನ ಅಜ್ಜ ನೀಡುತ್ತಿರುವ ಕಿರುಕುಳದ ಬಗ್ಗೆ ಪತ್ರ ಬರೆದು ತಿಳಿಸಿದ್ದಳು. ಆದರೆ, ಆತ ಈ ಬಗ್ಗೆ ಯಾವ ಕ್ರಮವನ್ನೂ ತೆಗೆದುಕೊಳ್ಳಲಿಲ್ಲ. ಅದರ ಬದಲು ಆಕೆ ಮನೆಗೆ ಹೋದಾಗಲೆಲ್ಲ ಆಕೆಯ ಅಪ್ಪನೇ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

Crime News: 17 ವರ್ಷದ ಬಾಲಕಿ ಮೇಲೆ ಆಕೆಯ ಅಪ್ಪ, ಚಿಕ್ಕಪ್ಪನಿಂದಲೇ ಅತ್ಯಾಚಾರ; ಅಜ್ಜನಿಂದಲೂ ಕಿರುಕುಳ
ಅತ್ಯಾಚಾರ
TV9 Web
| Edited By: |

Updated on:Nov 18, 2022 | 9:03 AM

Share

ಪುಣೆ: 17 ವರ್ಷದ ಕಾಲೇಜು ವಿದ್ಯಾರ್ಥಿನಿಯ ಮೇಲೆ ಆಕೆಯ ತಂದೆ ಮತ್ತು ಚಿಕ್ಕಪ್ಪನೇ ಸಾಮೂಹಿಕ ಅತ್ಯಾಚಾರವೆಸಗಿದ (Gang Rape) ಭೀಕರ ಘಟನೆ ಮಹಾರಾಷ್ಟ್ರದ (Maharashtra) ಪುಣೆ ಜಿಲ್ಲೆಯಲ್ಲಿ ನಡೆದಿದೆ. ಹೆತ್ತ ಮಗಳ ಮೇಲೇ ನಿರಂತರವಾಗಿ ಅತ್ಯಾಚಾರ ನಡೆಸಿದ ಘಟನೆ ಒಂದೆಡೆಯಾದರೆ, ಆ ಬಾಲಕಿಗೆ ಆಕೆಯ ಅಜ್ಜ ಕೂಡ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂಬುದು ಇನ್ನಷ್ಟು ಆಘಾತಕಾರಿ ಸಂಗತಿಯಾಗಿದೆ.

ಉತ್ತರ ಪ್ರದೇಶದ ಬಾಲಕಿ ತನ್ನ ಕಾಲೇಜಿನಲ್ಲಿ ವಿಶಾಖ ಸಮಿತಿಯ ಸದಸ್ಯರಿಗೆ ತನಗಾದ ಕಷ್ಟವನ್ನು ವಿವರಿಸಿದ ನಂತರ ಈ ವಿಷಯ ಬೆಳಕಿಗೆ ಬಂದಿದೆ. ಆ ಅಪ್ರಾಪ್ತ ಬಾಲಕಿ ಪುಣೆಯ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ಇದೀಗ ಅತ್ಯಾಚಾರ ಸಂತ್ರಸ್ತೆಯ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. ಆ 17 ವರ್ಷದ ಬಾಲಕಿಗೆ ಆಕೆಯ ಅಜ್ಜ ಕೂಡ ಕಿರುಕುಳ ನೀಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಪುಣೆ ನಗರ ಪೊಲೀಸರು ಬಾಲಕಿಯ ತಂದೆ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ ಕಾಯ್ದೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: Crime News: ಯುಪಿ ಮಹಿಳೆಗೆ ಮಾದಕ ದ್ರವ್ಯ ನೀಡಿ ಸಾಮೂಹಿಕ ಅತ್ಯಾಚಾರ, ಅಶ್ಲೀಲ ವಿಡಿಯೋ ಮೂಲಕ ಬ್ಲಾಕ್‌ಮೇಲ್

ಏನಿದು ಘಟನೆ?: ಬಾಲಕಿ ಪೊಲೀಸರಿಗೆ ನೀಡಿರುವ ದೂರಿನ ಪ್ರಕಾರ, 2016 ಮತ್ತು 2018ರ ನಡುವೆ ಕಾಲೇಜಿಗೆ ರಜೆ ಇದ್ದಾಗ ಉತ್ತರ ಪ್ರದೇಶದಲ್ಲಿದ್ದ ತನ್ನ ಮನೆಗೆ ಹೋದಾಗಲೆಲ್ಲ ಆ ಬಾಲಕಿಯ ಮೇಲೆ ಆಕೆಯ ತಂದೆ ಮತ್ತು ಚಿಕ್ಕಪ್ಪ ಪದೇ ಪದೇ ಅತ್ಯಾಚಾರ ನಡೆಸಿದ್ದಾರೆ. ಅಲ್ಲದೆ, ಆ ಬಾಲಕಿ ತನ್ನ ಅಜ್ಜ ಕೂಡ ತನಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾಳೆ.

2018ರಲ್ಲಿ ಬಾಲಕಿ ತನ್ನ ತಂದೆಗೆ ತನ್ನ ಅಜ್ಜ ನೀಡುತ್ತಿರುವ ಕಿರುಕುಳದ ಬಗ್ಗೆ ಪತ್ರ ಬರೆದು ತಿಳಿಸಿದ್ದಳು. ಆದರೆ, ಆತ ಈ ಬಗ್ಗೆ ಯಾವ ಕ್ರಮವನ್ನೂ ತೆಗೆದುಕೊಳ್ಳಲಿಲ್ಲ. ಅದರ ಬದಲು ಅದಾದ ನಂತರ ಆಕೆ ಮನೆಗೆ ಹೋದಾಗಲೆಲ್ಲ ಆಕೆಯ ಅಪ್ಪನೇ ಅವಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಾಲಕಿಯ ತಂದೆ, ಚಿಕ್ಕಪ್ಪ ಮತ್ತು ಅಜ್ಜನ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಪ್ರಕರಣದ ಮುಂದಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:03 am, Fri, 18 November 22

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ