ಚೆನ್ನೈ: ತಮಿಳುನಾಡಿನ ಕಡಲೂರಿನ (Cuddalore) ವೆಪ್ಪೂರ್ ಬಳಿ ಕಾರಿಗೆ ಹಲವು ವಾಹನಗಳು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ (Road Accident) ಇಬ್ಬರು ಮಕ್ಕಳು ಮತ್ತು ಇಬ್ಬರು ಪುರುಷರು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಎರಡು ಟ್ರಕ್‌ಗಳು ಮತ್ತು ಎರಡು ಖಾಸಗಿ ಬಸ್‌ಗಳು ಸೇರಿದಂತೆ ಒಟ್ಟು 5 ವಾಹನಗಳು ಅಪಘಾತಕ್ಕೀಡಾಗಿವೆ.
ತಿರುಚ್ಚಿ-ಚೆನ್ನೈ ಹೆದ್ದಾರಿಯಲ್ಲಿ ಕುಟುಂಬವೊಂದು ಕಾರನ್ನು ನಿಲ್ಲಿಸಿತ್ತು. ಈ ವೇಳೆ 2 ಟ್ರಕ್‌ಗಳು ಮತ್ತು 2 ಖಾಸಗಿ ಬಸ್‌ಗಳು ಕಾರಿಗೆ ಡಿಕ್ಕಿ ಹೊಡೆದು ಕಾರಿನಲ್ಲಿದ್ದವರು ಸಾವನ್ನಪ್ಪಿದ್ದಾರೆ. ಅಗ್ನಿಶಾಮಕ ಮತ್ತು ರಕ್ಷಣಾ ಸೇವೆ ಸಿಬ್ಬಂದಿ ಸಂಪೂರ್ಣ ಜಖಂ ಆಗಿದ್ದ ಕಾರಿನಿಂದ ಮೃತದೇಹವನ್ನು ಹೊರತೆಗೆದಿದ್ದಾರೆ. ನಂತರ ಪೊಲೀಸರು ಮೃತದೇಹಗಳನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ತನಿಖೆ ಆರಂಭಿಸಿದ್ದಾರೆ.
ಇದನ್ನೂ ಓದಿ: ರಾಜಸ್ಥಾನದಲ್ಲಿ ಕಾರು-ಟ್ರಕ್ ಡಿಕ್ಕಿಹೊಡೆದು ಅಪಘಾತ: 5 ಮಂದಿ ಸಾವು
ಪೊಲೀಸ್ ಪ್ರಕಾರ, ಕಡಲೂರು ಜಿಲ್ಲೆಯ ವೇಪ್ಪೂರ್ ಬಳಿ 5 ವಾಹನಗಳು ಪರಸ್ಪರ ಡಿಕ್ಕಿ ಹೊಡೆದು ಐವರು ಸಾವನ್ನಪ್ಪಿದ್ದಾರೆ. ಕಾರಿನಿಂದ ಮೃತದೇಹಗಳನ್ನು ಹೊರತೆಗೆದು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಯ್ಯನಾರ್‌ಪಾಳ್ಯಂನಲ್ಲಿ ಮೇಲ್ಸೇತುವೆ ನಿರ್ಮಾಣದ ಕಾರಣ ಉಂಟಾದ ಟ್ರಾಫಿಕ್ ದಟ್ಟಣೆಯಿಂದಾಗಿ ಚೆನ್ನೈಗೆ ಹೊರಟಿದ್ದ ಕಾರು ಮುಂಜಾನೆ ವೇಪ್ಪೂರ್ ಬಳಿ ನಿಂತಿತ್ತು. ಈ ವೇಳೆ ವೇಗವಾಗಿ ಬಂದ ಲಾರಿ ಹಿಂದಿನಿಂದ ಕಾರಿಗೆ ಡಿಕ್ಕಿ ಹೊಡೆದಿದೆ.
Tamil Nadu | Five people were killed after 5 vehicles collided with each other near Veppur of Cuddalore district. Bodies were recovered from the car and sent to a Government hospital. Further details awaited: Cuddalore Police
— ANI (@ANI) January 3, 2023
ಡಿಕ್ಕಿಯ ರಭಸಕ್ಕೆ ಕಾರು ಮುಂದಕ್ಕೆ ಚಲಿಸಿ ಅದರ ಮುಂದೆ ಇದ್ದ ವಾಹನಕ್ಕೆ ಡಿಕ್ಕಿ ಹೊಡೆದು ಲಾರಿಗಳ ನಡುವೆ ಸಿಲುಕಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಐವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ: ಗುಜರಾತ್ ಅಪಘಾತದಲ್ಲಿ 9 ಜನ ಸಾವು; ಪ್ರಧಾನಿ ಸಚಿವಾಲಯದಿಂದ ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಣೆ
ಅಪಘಾತಕ್ಕೀಡಾದ ಕಾರು ಚಲಾಯಿಸುತ್ತಿದ್ದ ವ್ಯಕ್ತಿಯನ್ನು ಚೆನ್ನೈನ ನಂಗನಲ್ಲೂರಿನ ವಿಜಯರಾಘವನ್ ಎಂದು ಪೊಲೀಸರು ಗುರುತಿಸಿದ್ದಾರೆ. ಆತನ ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹಗಳನ್ನು ಹೊರತೆಗೆದು ಶವಪರೀಕ್ಷೆಗಾಗಿ ಸಮೀಪದ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಅಪಘಾತದ ನಂತರ ಪರಾರಿಯಾಗಿದ್ದ ಲಾರಿ ಚಾಲಕನನ್ನು ನಂತರ ಪೊಲೀಸರು ಹಿಡಿದು ಬಂಧಿಸಿದ್ದಾರೆ.
Published On - 2:25 pm, Tue, 3 January 23