ಜಿಎಸ್​ಟಿ ಹೆಸರಿನಲ್ಲಿ ಖಾಸಗಿ ಕಂಪನಿಗೆ 9 ಕೋಟಿ 60 ಲಕ್ಷ ರೂ. ವಂಚನೆ: ಇಬ್ಬರ ಬಂಧನ

ಜಿಎಸ್​ಟಿ ಹೆಸರಿನಲ್ಲಿ ಖಾಸಗಿ ಕಂಪನಿಗೆ 9 ಕೋಟಿ 60 ಲಕ್ಷ ರೂ. ವಂಚಿಸಿರುವಂತಹ ಘಟನೆ ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಜಿಎಸ್​ಟಿ ಹೆಸರಿನಲ್ಲಿ ಖಾಸಗಿ ಕಂಪನಿಗೆ 9 ಕೋಟಿ 60 ಲಕ್ಷ ರೂ. ವಂಚನೆ: ಇಬ್ಬರ ಬಂಧನ
ನಿಖಿಲ್, ವಿನಯ್ ಬಾಬು ಬಂಧಿತರು
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Jan 26, 2023 | 5:05 PM

ಬೆಂಗಳೂರು: ಜಿಎಸ್​ಟಿ (GST Fraud) ಹೆಸರಿನಲ್ಲಿ ಖಾಸಗಿ ಕಂಪನಿಗೆ 9 ಕೋಟಿ 60 ಲಕ್ಷ ರೂ. ವಂಚಿಸಿರುವಂತಹ ಘಟನೆ ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಸೋಸಿಯೇಟ್ ಚಾರ್ಟರ್ಡ್​ ಅಕೌಂಟೆಂಟ್​ ಎಂದು ಹೇಳಿಕೊಂಡು ಆಟೋಮೋಟಿವ್​ ಪ್ರೈವೇಟ್​ ಲಿಮಿಟೆಡ್​ ಕಂಪನಿಗೆ 9.60 ಕೋಟಿ ರೂ. ವಂಚನೆ ಮಾಡಲಾಗಿದೆ. ವಂಚನೆಗೊಳಗಾಗಿರುವುದು ಗೊತ್ತಾಗಿ ಆಟೋಮೋಟಿವ್​ ಪ್ರೈವೇಟ್​ ಲಿಮಿಟೆಡ್​ ಕಂಪನಿ ಮಾಲೀಕನಿಂದ ಸದಾಶಿವನಗರ ಠಾಣೆಗೆ ದೂರು ನೀಡಲಾಗಿದೆ. ದೂರು ಹಿನ್ನೆಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ನಿಖಿಲ್, ವಿನಯ್ ಬಾಬು ಬಂಧಿತರು.  ಕಂಪನಿ ಆಂತರಿಕ ಲೆಕ್ಕಪರಿಶೋಧನೆ ವರದಿ ನೀಡಿದ್ದ ಆರೋಪಿ ನಿಖಿಲ್​, 9 ಕೋಟಿಗೂ ಹೆಚ್ಚು ಜಿಎಸ್​ಟಿ ಕಟ್ಟಬೇಕೆಂದು ವರದಿ ನೀಡಿದ್ದ. ನಿಖಿಲ್ ವರದಿ ಅನ್ವಯ ಹಂತಹಂತವಾಗಿ ಮಾಲೀಕರು ಜಿಎಸ್​ಟಿ ಕಟ್ಟಿದ್ದರು. ಬಳಿಕ ತಾವು ಮೋಸ ಹೋಗಿರುವುದು ತಿಳಿದುಬಂದಿದೆ.

ಸಂಜಯನಗರ ಪೊಲೀಸ್ ಠಾಣೆಗೆ ಪ್ರಕರಣ ವರ್ಗಾವಣೆಯಾಗಿತ್ತು. ನಿಖಿಲ್, ವಿನಯ್ ಬಾಬುವನ್ನು ಬಂಧಿಸಿ ಪೊಲೀಸರು ಜೈಲಿಗಟ್ಟಿದ್ದಾರೆ. ಆರೋಪಿಗಳಿಗೆ ಸಂಬಂಧಿಸಿದ 3 ಕೋಟಿ ಅಧಿಕ ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿದೆ. ಶೋಕಿಗೆ ಕೋಟ್ಯಂತರ ಹಣ ಖರ್ಚುಮಾಡಿದ್ದರು. ಆರೋಪಿ ವಿನಯ್ ಬಾಬು ಅಪಾರ್ಟ್​ಮೆಂಟ್​ಗಳಲ್ಲಿ ಫ್ಲ್ಯಾಟ್​ ಖರೀದಿಸಿದ್ದರು.

ಇದನ್ನೂ ಓದಿ: ಕಾರ್ಯಕರ್ತನನ್ನು ಅಟ್ಟಾಡಿಸಿ ಹೊಡೆದಿದ್ದ ಕೇಸ್​​: ಅರಸೀಕೆರೆ ಪೊಲೀಸರಿಂದ ಬಿಜೆಪಿ ಮುಖಂಡ ಮತ್ತು ಕಾರು ಚಾಲಕನ ಬಂಧನ

ಅರವತ್ತು ಬಾರಿ ಕಳ್ಳತನ ಮಾಡಿದ್ದ ನಟೋರಿಯಸ್ ಮನೆಗಳ್ಳರ ಬಂಧನ: 660 ಗ್ರಾಂ ಚಿನ್ನ ವಶಕ್ಕೆ

ಬೆಂಗಳೂರು: ಅರವತ್ತು ಬಾರಿ ಕಳ್ಳತನ ಮಾಡಿದ್ದ ನಟೋರಿಯಸ್ ಮನೆಗಳ್ಳರನ್ನು ಹೆಣ್ಣೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಫಯಾಜ್, ಪ್ರಸಾದ್ ಬಂಧಿತ ಆರೋಪಿಗಳು. ಸದ್ಯ ಆರೋಪಿಗಳಿಂದ 660 ಗ್ರಾಂ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ಬೆಂಗಳೂರಿನ ಹೆಣ್ಣೂರು, ರಾಮಮೂರ್ತಿ ನಗರ, ಕೋಲಾರದಲ್ಲಿ ನ್ಯಾಯಾಧೀಶರ ನಿವಾಸ ಕಳ್ಳತನ ಮಾಡಿದ್ರು. ಆರೋಪಿಗಳು ಶಿವಮೊಗ್ಗದಲ್ಲಿ ಎಟಿಎಂ ದೋಚಲು ವಿಫಲ ಯತ್ನ ಮಾಡಿದ್ದರು. ಕಳ್ಳತನ ಮಾಡಿದ ಬಳಿಕ ಕಾರಿನಲ್ಲಿ ಹೊರಡುತ್ತಿದ್ದರು. ಎಲ್ಲಿಯೂ ಒಂದು ಕಡೆ ನಿಲ್ಲುತ್ತಿರಲಿಲ್ಲಾ.

ಕಳ್ಳತನ ಮಾಡಿದ ಬಳಿಕ ಒಂದೊಂದು ಊರು ಅಲೆಯುತಿದ್ರು. ಹೋದ ಊರುಗಳಲ್ಲಿ ಕದ್ದ ಚಿನ್ನವನ್ನು ಅಡಮಾನ ಹಣ ಪಡೆದು ಮಜಾ ಮಾಡ್ತಿದ್ರು. ಇದುವರೆಗೆ ಹಲವಾರು ಬಾರಿ ಆರೋಪಿಗಳು ಅರೆಸ್ಟ್ ಆಗಿದ್ದರು. ಕಳೆದ ಒಂದು ವಾರದಲ್ಲಿ ಜೈಲಿನಿಂದ ಹೊರಗೆ ಬಂದಿದ್ದ ಆರೋಪಿಗಳು ಮತ್ತೆ ಕಳ್ಳತನ ಮಾಡಿದ್ರು. ಸದ್ಯ ಪೊಲೀಸರು ಆರೋಪಿಗಳ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Sindhnur: 74ನೇ ಗಣರಾಜ್ಯೋತ್ಸವ ಹಿನ್ನೆಲೆ ನೃತ್ಯ ಮಾಡುವಾಗ ಹೃದಯಾಘಾತದಿಂದ ಕೊನೆಯುಸಿರೆಳೆದ ಸ್ಟಾಫ್ ನರ್ಸ್

ರಾ.ಹೆ 48ರಲ್ಲಿ ಟೈಯರ್ ಸ್ಫೋಟಗೊಂಡು ಮಿನಿ ಕ್ಯಾಂಟರ್ ಪಲ್ಟಿ

ನೆಲಮಂಗಲ: ಟೈಯರ್ ಸ್ಫೋಟಗೊಂಡು ಮಿನಿ ಕ್ಯಾಂಟರ್ ಪಲ್ಟಿ ಹೊಡೆದಿರುವಂತಹ ಘಟನೆ ಬೆಂಗಳೂರು ಗ್ರಾ. ಜಿಲ್ಲೆಯ ನೆಲಮಂಗಲ ತಾಲೂಕಿನ ಬಿಲ್ಲಿನಕೋಟೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಈ ವೇಳೆ ಟೈಯರ್ ಬ್ಲಾಸ್ಟ್ ಆಗಿ ವಾಹನ ಪಲ್ಟಿಯಾಗಿದೆ. ನೆಲಮಂಗಲ ಸಂಚಾರಿ ಪೊಲೀಸರಿಂದ ಲಾರಿ ತೆರವು ಮಾಡಲಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 5:03 pm, Thu, 26 January 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ