Crime News: ಹೊಸ ವರ್ಷದ ದಿನವೇ 10ನೇ ತರಗತಿ ಬಾಲಕಿ ಮೇಲೆ ಅತ್ಯಾಚಾರ ನಡೆಸಿ, ಬರ್ಬರ ಹತ್ಯೆ
ಮೃತ ಬಾಲಕಿಯ ತಂದೆ ಐವರು ಯುವಕರ ವಿರುದ್ಧ ದೂರು ದಾಖಲಿಸಿದಾಗ ಈ ವಿಷಯ ಬೆಳಕಿಗೆ ಬಂದಿದ್ದು, ಸ್ಥಳೀಯರು ಅತ್ಯಾಚಾರವೆಸಗಿದ ಆರೋಪಿ ಯುವಕರ ಮನೆಗಳಿಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ.
ಜಲ್ಪೈಗುರಿ: ಹೊಸ ವರ್ಷದ (New Year 2023) ದಿನ ಸಂಜೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಆಕೆಯನ್ನು ಕೊಲೆ ಮಾಡಿರುವ ಘಟನೆ ಪಶ್ಚಿಮ ಬಂಗಾಳದ (West Bengal) ಜಲ್ಪೈಗುರಿಯಲ್ಲಿ ನಡೆದಿದೆ. ಈ ಹಿನ್ನೆಲೆಯಲ್ಲಿ ಆ ಪ್ರದೇಶದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ. 10ನೇ ತರಗತಿ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದ ವೇಳೆ ಸಂಜೆ ಮನೆಗೆ ನುಗ್ಗಿದ ಕಾಮುಕರು ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಬಳಿಕ ಆಕೆಯನ್ನು ಕೊಂದಿದ್ದಾರೆ.
ಮೃತ ಬಾಲಕಿಯ ತಂದೆ ಐವರು ಯುವಕರ ವಿರುದ್ಧ ದೂರು ದಾಖಲಿಸಿದಾಗ ಈ ವಿಷಯ ಬೆಳಕಿಗೆ ಬಂದಿದ್ದು, ಸ್ಥಳೀಯರು ಅತ್ಯಾಚಾರವೆಸಗಿದ ಆರೋಪಿ ಯುವಕರ ಮನೆಗಳಿಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಮೃತ ಬಾಲಕಿ 10ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ಭಾನುವಾರ ರಾತ್ರಿ ಆಕೆಯ ಪೋಷಕರು ಮನೆಯಲ್ಲಿ ಇಲ್ಲದಿದ್ದಾಗ ಆಕೆಯ ಮನೆಗೆ ನುಗ್ಗಿ ಅತ್ಯಾಚಾರವೆಸಗಲಾಗಿದೆ.
ಇದನ್ನೂ ಓದಿ: Mandya News: ಎರಡೂವರೆ ತಿಂಗಳ ಗರ್ಭಿಣಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ; ಕೊಲೆ ಶಂಕೆ
ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಬಿಸ್ವಜಿತ್ ಮಹತೋ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಜಲ್ಪೈಗುರಿ ಎಸ್ಪಿ ಬಿಸ್ವಜಿತ್ ಮಹತೋ, ನಮಗೆ ಮೃತ ಬಾಲಕಿಯ ತಂದೆ ದೂರು ನೀಡಿದ್ದಾರೆ. ನಾವು ಆರೋಪಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ್ದೇವೆ. ಪೊಲೀಸರು ಈ ಘಟನೆಯ ಬಗ್ಗೆ ಕೂಲಂಕಷ ತನಿಖೆ ನಡೆಸುತ್ತಿದ್ದಾರೆ ಎಂದಿದ್ದಾರೆ.
“ನಾವು ಈಗಾಗಲೇ ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಿದ್ದೇವೆ. ಆತನನ್ನು ಇಂದು ಜಲಪೈಗುರಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದೇವೆ. ಹೆಚ್ಚಿನ ವಿಚಾರಣೆಗಾಗಿ ನಾವು ಆತನನ್ನು ಕಸ್ಟಡಿಗೆ ಕೋರಿದ್ದೇವೆ. ಯಾವುದೇ ಅಹಿತಕರ ಘಟನೆಯನ್ನು ತಪ್ಪಿಸಲು ಘಟನೆ ನಡೆದ ಸ್ಥಳದಲ್ಲಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ” ಎಂದು ಅವರು ಹೇಳಿದ್ದಾರೆ.
ಅತ್ಯಾಚಾರ ನಡೆಸಿದವರಲ್ಲೇ ಒಬ್ಬರು ನನ್ನ ಮಗಳ ಸಾವಿನ ಬಗ್ಗೆ ನನಗೆ ಫೋನ್ ಮಾಡಿ ಮಾಹಿತಿ ನೀಡಿದ್ದರು ಎಂದು ಸಂತ್ರಸ್ತೆಯ ತಂದೆ ಹೇಳಿದ್ದಾರೆ. ಅವರು ಮನೆಗೆ ತಲುಪಿದಾಗ ಆ ಬಾಲಕಿಯ ದೇಹವು ನೆಲದ ಮೇಲೆ ಬಿದ್ದಿತ್ತು. ಆಕೆಯ ದೇಹದ ಮೇಲೆ ಗಾಯದ ಗುರುತುಗಳಾಗಿತ್ತು.
ಇದನ್ನೂ ಓದಿ: ಬೆಂಗಳೂರಿನ ಕಾಲೇಜೊಂದರಲ್ಲಿ ಹಾಡಹಗಲೇ ಯುವತಿಗೆ ಚಾಕು ಇರಿದು ಕೊಲೆ ಮಾಡಿದ ಯುವಕ: ಪ್ರೀತಿ ಪ್ರೇಮದ ಶಂಕೆ
“ಆ ಹುಡುಗರು ಆಗಾಗ್ಗೆ ನನ್ನ ಮಗಳಿಗೆ ಕಿರುಕುಳ ನೀಡುತ್ತಿದ್ದರು. ಅವಳು ಅವರಿಗೆ ಬೈದಿದ್ದಕ್ಕೆ ಗಲಾಟೆಯನ್ನೂ ಮಾಡಿದ್ದರು. ಅವರು ನನ್ನ ಮಗಳನ್ನು ಬಹಳ ಸಮಯದಿಂದ ಹಿಂಬಾಲಿಸುತ್ತಿದ್ದರು. ನಾನು ಅವರ ವಿರುದ್ಧ ಎಫ್ಐಆರ್ ದಾಖಲಿಸಿದ್ದೇನೆ. ಅವರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಬಯಸುತ್ತೇನೆ” ಎಂದು ಮೃತಳ ತಂದೆ ಹೇಳಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ನೂರಾರು ಸಂಖ್ಯೆಯಲ್ಲಿ ಐವರು ಆರೋಪಿಗಳ ಮನೆಗಳ ಮೇಲೆ ದಾಳಿ ನಡೆಸಿ ಅವರ ಮನೆಗಳನ್ನು ಧ್ವಂಸಗೊಳಿಸಿದ್ದಾರೆ. ಕೊತ್ವಾಲಿ ಪಿಎಸ್ ಐಸಿ ನೇತೃತ್ವದಲ್ಲಿ ಹೆಚ್ಚಿನ ಪೊಲೀಸ್ ಪಡೆ ಸ್ಥಳಕ್ಕೆ ತೆರಳಿ ಪರಿಸ್ಥಿತಿಯನ್ನು ನಿಯಂತ್ರಿಸಲಾಯಿತು.